ಬ್ರೇಕಿಂಗ್ ನ್ಯೂಸ್
06-11-25 08:20 pm Bangalore Correspondent ಕ್ರೈಂ
ಬೆಂಗಳೂರು, ನ.6 : ಯುವಕನೊಬ್ಬ ತನ್ನ ಪ್ರೀತಿ ನಿರಾಕರಿಸಿದ ಕೋಪದಲ್ಲಿ ಯುವತಿಯೊಬ್ಬಳು ಆತನನ್ನು ಸಿಕ್ಕಿಸಿ ಹಾಕುವ ಸಂಚು ಹೂಡಿ ಬೆಂಗಳೂರಿನ ಶಾಲೆ, ಕಾಲೇಜುಗಳಿಗೆ ಬಾಂಬ್ ಬೆದರಿಕೆ ಹಾಕಿದ್ದು ವೃತ್ತಿಯಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದ ಯುವತಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.
ಪ್ರಿಯಕರನಿಂದ ವಂಚನೆಗೊಳಗಾದ ಸಾಫ್ಟ್‌ವೇರ್ ಎಂಜಿನಿಯರ್ ರೆನಿ ಜೊಶೀಲ್ಡಾ ಆರೋಪಿಯಾಗಿದ್ದು, ಬೆಂಗಳೂರು ಉತ್ತರ ವಿಭಾಗದ ಸೆನ್ ಪೊಲೀಸರು ಬಂಧನ ಮಾಡಿದ್ದಾರೆ. ಆರೋಪಿತೆಯನ್ನು ಗುಜರಾತಿನ ಅಹಮದಾಬಾದ್ ಪೊಲೀಸರು ಹುಸಿ ಬಾಂಬ್ ಕರೆ ಪ್ರಕರಣದಲ್ಲಿ ಬಂಧಿಸಿದ್ದರು. ಬೆಂಗಳೂರು ಪೊಲೀಸರು ಅಲ್ಲಿಂದ ಬಾಡಿ ವಾರೆಂಟ್ ಪಡೆದು ಬೆಂಗಳೂರಿಗೆ ಕರೆತಂದಿದ್ದಾರೆ.
ಆರೋಪಿ ಯುವತಿ ಈ ಹಿಂದೆ ಬೆಂಗಳೂರಿನಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದಳು. ಈ ವೇಳೆ, ಯುವಕನೊಂದಿಗೆ ಪ್ರೇಮದಲ್ಲಿದ್ದು ಆನಂತರ ವಂಚನೆಗೆ ಒಳಗಾಗಿದ್ದಳು. ಇದರ ಸಿಟ್ಟಿನಿಂದ ಪ್ರಿಯಕರನ ಹೆಸರಿನಲ್ಲಿ ಇಮೇಲ್ ಸೃಷ್ಟಿಸಿ ತಮಿಳುನಾಡು, ಕರ್ನಾಟಕ ಸೇರಿದಂತೆ ಶಾಲೆ, ಕಾಲೇಜಿಗೆ ಬಾಂಬ್ ಬೆದರಿಕೆ ಹಾಕಿದ್ದಳು. ಬೆಂಗಳೂರಿನ ಪಬ್ಲಿಕ್ ಶಾಲೆಯೊಂದಕ್ಕೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಕಳುಹಿಸಿದ್ದಳು. ಜೂ.14 ರಂದು ಕಲಾಸಿಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಏಳು ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದಿತ್ತು. ಈ ಬಗ್ಗೆ ಕಲಾಸಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಉತ್ತರ ವಿಭಾಗದ ಸೈಬರ್ ಪೊಲೀಸ್ ಠಾಣೆಗೆ ಪ್ರಕರಣ ವರ್ಗಾವಣೆ ಮಾಡಲಾಗಿತ್ತು.
ಆರೋಪಿತೆ ತಂತ್ರಜ್ಞಾನದಲ್ಲಿ ಪರಿಣತಿ ಹೊಂದಿದ್ದು ಬೇರೆ ಬೇರೆ ಅಪ್ಲೀಕೇಶನ್ ಬಳಸಿಕೊಂಡು ಇಮೇಲ್ ಸಂದೇಶ ಕಳಿಸುತ್ತಿದ್ದಳು. ಸುಮಾರು ಆರರಿಂದ ಏಳು ವಾಟ್ಸಪ್ ಖಾತೆಗಳನ್ನು ನಿರ್ವಹಣೆ ಮಾಡುತ್ತಿದ್ದಳು. ವಿಚಾರಣೆ ವೇಳೆ ಬೆಂಗಳೂರಿನ ಕಲಾಸಿಪಾಳ್ಯ ಸೇರಿ ಇತರೆ ಆರು ಪ್ರಕರಣಗಳಲ್ಲಿ ಭಾಗಿಯಾಗಿರುವ ಬಗ್ಗೆ ಮಾಹಿತಿ ಸಿಕ್ಕಿದೆ. ಆರೋಪಿತಳ ವಿರುದ್ಧ ಗುಜರಾತ್, ಮೈಸೂರು, ತಮಿಳುನಾಡಿನ ಚೆನ್ನೈನಲ್ಲಿ ಹುಸಿಬಾಂಬ್ ಬೆದರಿಕೆ ಪ್ರಕರಣ ದಾಖಲಾಗಿದೆ.
ಆರೋಪಿ ಯುವತಿ ಪ್ರೀತಿ ನಿರಾಕರಣೆ ಮಾಡಿದ ಯುವಕನ ಸಂಕಷ್ಟಕ್ಕೆ ಸಿಕ್ಕಿಸಲು ಈ ಕೃತ್ಯ ಎಸಗಿದ್ದಾಳೆ ಎನ್ನುವುದು ಗೊತ್ತಾಗಿದೆ. ಯುವಕನ ಇಮೇಲ್ ಐಡಿ ಬಳಸಿಕೊಂಡು ಹುಸಿಬಾಂಬ್ ಇಮೇಲ್ ಬೆದರಿಕೆ ಕಳಿಸಿದ್ದಳು. ಯುವಕನನ್ನ ಪ್ರೀತಿಸುವಂತೆ ಒತ್ತಾಯಿಸಿದ್ದು ಗೆಳೆತನವನ್ನು ಯುವಕ ನಿರಾಕರಿಸಿದ ದ್ವೇಷಕ್ಕೆ ಆತನ ಹೆಸರಲ್ಲಿ ಹುಸಿಬಾಂಬ್ ಬೆದರಿಕೆ ಕಳುಹಿಸಿದ್ದಾಳೆ.
ಬೆಂಗಳೂರಿನ ಆರರಿಂದ ಏಳು ಶಾಲೆಗಳಿಗೆ ಹುಸಿಬಾಂಬ್ ಇಮೇಲ್ ಮಾಡಿದ್ದಳು. ಅಷ್ಟೇ ಅಲ್ಲದೆ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂಗೆ ಬಾಂಬ್ ಬೆದರಿಕೆ ಹಾಕಿದ್ದಳು. ಗುಜರಾತ್‌ನ ವಿಮಾನ ದುರಂತದ ಹಾಗೆ ನಿಮ್ಮ ಶಾಲೆಗಳನ್ನ ಉಡಾಯಿಸುವುದಾಗಿ ಬೆದರಿಕೆ ಹಾಕಿದ್ದಳು. ಸದ್ಯ ಆರೋಪಿ ಯುವತಿಯ ವಿಚಾರಣೆಯನ್ನು ಪೊಲೀಸರು ನಡೆಸುತ್ತಿದ್ದಾರೆ.
A Bengaluru-based software engineer, angry over a failed love affair, has been arrested for allegedly sending fake bomb threat emails to schools and colleges in Karnataka and Tamil Nadu using her ex-boyfriend’s name to frame him.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 11:28 am
HK News Staffer
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm