ಬ್ರೇಕಿಂಗ್ ನ್ಯೂಸ್
26-11-25 12:10 pm Mangalore Correspondent ಕ್ರೈಂ
ಮಂಗಳೂರು, ನ.26 : ಬಜ್ಪೆ ಠಾಣೆ ವ್ಯಾಪ್ತಿಯ ಎಡಪದವು ರಸ್ತೆಯಲ್ಲಿ ಯುವಕನ ಮೇಲೆ ತಲವಾರು ದಾಳಿ ನಡೆಸಿದ ನಾಲ್ವರು ಆರೋಪಿಗಳನ್ನು ಬಜ್ಪೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಬಂಧಿತರನ್ನು ಮಂಗಳೂರು ಬೆಂಗ್ರೆ ನಿವಾಸಿ ಸಿನಾನ್, ವೇಣೂರು ನಿವಾಸಿ ಇರ್ಷಾದ್, ವಾಮಂಜೂರು ನಿವಾಸಿ ಸುಹೈಲ್ ಅಕ್ರಮ್ ಮತ್ತು ವಾಮಂಜೂರು ಪಿಲಿಕುಳ ನಿವಾಸಿ ನಿಸಾನ್ ಎಂದು ಗುರುತಿಸಲಾಗಿದೆ.




ಇರುವೈಲು ಪೂಪಾಡಿಕಲ್ಲು ನಿವಾಸಿ ಅಖಿಲೇಶ್ ಎಂಬ ಯುವಕ ಮಂಗಳೂರಿನಲ್ಲಿ ಕೆಲಸ ಮುಗಿಸಿ ಮರಳುತ್ತಿದ್ದ ಸಂದರ್ಭ ಒಂದೇ ದ್ವಿಚಕ್ರ ವಾಹನದಲ್ಲಿ ನಾಲ್ಕು ಮಂದಿ ತಲವಾರು ಹಿಡಿದು ಹೋಗುತ್ತಿದ್ದುದನ್ನು ಗಮನಿಸಿ ಮೊಬೈಲ್ ನಲ್ಲಿ ವೀಡಿಯೊ ಚಿತ್ರೀಕರಿಸಲು ಮುಂದಾಗಿದ್ದಾರೆ. ಇದನ್ನು ಕಂಡ ಆರೋಪಿಗಳು ರಸ್ತೆಯಲ್ಲಿ ಅಖಿಲೇಶ್ ಮೇಲೆ ದಾಳಿ ನಡೆಸಿದ್ದರು. ಈ ವೇಳೆ, ತನ್ನ ಗೆಳೆಯರಿಗೆ ವಿಷಯ ತಿಳಿಸಿದ್ದು ಸ್ಥಳೀಯರು ಎಡಪದವು ಬಳಿ ಅಡ್ಡಹಾಕಿದ್ದಾರೆ.
ಈ ವೇಳೆ, ಹಿಂಬದಿ ಇದ್ದ ಯುವಕ ಸಿನಾನ್ ಬೈಕಿನಿಂದ ಇಳಿದು ಓಡಲು ಯತ್ನಿಸಿದ್ದು ಎಡಪದವು ಕಡೆಯಿಂದ ಮೇಲಕ್ಕೆ ಇಳಿಜಾರು ರಸ್ತೆಯಲ್ಲಿ ಓಡಿದ್ದಾನೆ. ಅಲ್ಲದೆ, ಬಸ್ ಇನ್ನಿತರ ವಾಹನಗಳನ್ನು ನಿಲ್ಲಿಸಿ ಡ್ರಾಪ್ ಕೇಳಿದ್ದಾನೆ. ವಾಹನ ನಿಲ್ಲಿಸದೇ ಹೋದಾಗ ಸ್ಥಳೀಯರು ಸೇರಿ ಹಿಡಿದಿದ್ದು ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ. ಅಖಿಲೇಶ್ ಕೈಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಮಂಗಳೂರು ಬಂದರು ನಿವಾಸಿ ಸಿನಾನ್ ನನ್ನು ಸಾರ್ವಜನಿಕರು ಸ್ಥಳದಲ್ಲೇ ಪೊಲೀಸರಿಗೆ ಒಪ್ಪಿಸಿದ್ದರು. ಉಳಿದಂತೆ, ವೇಣೂರು ನಿವಾಸಿ ಇರ್ಷಾದ್ ನನ್ನು ಬಜ್ಪೆ ಪೊಲೀಸರು ಬಂಧಿಸಿದ್ದರು. ಜೊತೆಗೆ ವಾಮಂಜೂರು ನಿವಾಸಿ ಸುಹೈಲ್ ಅಕ್ರಮ್ ಮತ್ತು ಪಿಲಿಕುಳ ನಿವಾಸಿ ನಿಸಾನ್ ನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಘಟನೆ ನಡೆದ ಕೆಲವೇ ಗಂಟೆಯಲ್ಲಿ ಎಲ್ಲ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
Bajpe police have arrested four men for attacking a youth with a sword on Edapadavu Road in Mangaluru. The incident occurred when the victim tried to record a video of the accused riding on a bike with weapons. Local residents helped capture one of the attackers, and police arrested all four — Sinan, Irshad, Suhail Akram, and Nisan — within hours.
29-01-26 11:03 pm
Bangalore Correspondent
ಡಿಕೆ ಮುಖ್ಯಮಂತ್ರಿ ಸ್ಥಾನಕ್ಕೆ ಹೋಗಲು ಭಗವಂತ ಅವಕಾಶ...
29-01-26 10:48 pm
18 ಕೋಟಿ ಮೌಲ್ಯದ 11 ಕೇಜಿ ಚಿನ್ನ ಲೂಟಿ ; ಬೆಂಗಳೂರಿನ...
29-01-26 01:16 pm
ಮೈಸೂರಿನಲ್ಲಿ ಮತ್ತೆ ಡ್ರಗ್ಸ್ ಫ್ಯಾಕ್ಟರಿ ಶಂಕೆಯಲ್ಲಿ...
28-01-26 09:54 pm
ಅಕ್ರಮ ಮರಳು ಗಣಿಗಾರಿಕೆ, ಮಟ್ಕಾ, ಜೂಜು, ಇಸ್ಪೀಟು ದಂ...
27-01-26 09:57 pm
29-01-26 11:07 pm
HK News Desk
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
ಬೌದ್ಧ ಧರ್ಮಕ್ಕೆ ಮತಾಂತರಗೊಂಡು ಅಲ್ಪಸಂಖ್ಯಾತ ಮೀಸಲಾತ...
28-01-26 11:14 pm
ಶಿಮ್ಲಾದಲ್ಲಿ ಹಿಮಪಾತ ; ರೀಲ್ಸ್ ಮಾಡಲು ಹೋಗಿದ್ದ ಹುಡ...
28-01-26 02:35 pm
ತಮ್ಮ ಕರ್ಮಭೂಮಿಯಲ್ಲೇ ಅಜಿತ್ ಪವಾರ್ ಕೊನೆಯುಸಿರು ; ವ...
28-01-26 01:28 pm
29-01-26 10:38 pm
Mangalore Correspondent
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
ಫೆ.1ರಂದು "ನಮ್ಮ ನಡಿಗೆ ತಲಪಾಡಿ ದೇವಿಪುರದ ಕಡೆಗೆ" ಬ...
27-01-26 08:58 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm