ಶಿರಿಯಾರ ಸೇವಾ ಸಹಕಾರಿ ಸಂಘದಲ್ಲಿ ಕೋಟ್ಯಂತರ ವಂಚನೆ ; ಮ್ಯಾನೇಜರ್ ಮತ್ತು ಗುಮಾಸ್ತನ ಬಂಧನ 

14-12-25 05:33 pm       Udupi Correspondent   ಕ್ರೈಂ

ಸಾಬರಕಟ್ಟೆಯ ಶಿರಿಯಾರ ಸೇವಾ ಸಹಕಾರಿ ಸಂಘದ ಕಾವಡಿ ಶಾಖೆಯಲ್ಲಿ ಕೋಟ್ಯಂತರ ರೂ. ವಂಚನೆ ಎಸಗಿರುವ ಘಟನೆ ನಡೆದಿದ್ದು ಪ್ರಕರಣಕ್ಕೆ ಸಂಬಂಧಿಸಿ ಮತ್ತೋರ್ವ ಆರೋಪಿಯನ್ನು ಕೋಟ ಪೊಲೀಸರು ಬಂಧಿಸಿದ್ದಾರೆ. 

ಉಡುಪಿ, ಡಿ.14 : ಸಾಬರಕಟ್ಟೆಯ ಶಿರಿಯಾರ ಸೇವಾ ಸಹಕಾರಿ ಸಂಘದ ಕಾವಡಿ ಶಾಖೆಯಲ್ಲಿ ಕೋಟ್ಯಂತರ ರೂ. ವಂಚನೆ ಎಸಗಿರುವ ಘಟನೆ ನಡೆದಿದ್ದು ಪ್ರಕರಣಕ್ಕೆ ಸಂಬಂಧಿಸಿ ಮತ್ತೋರ್ವ ಆರೋಪಿಯನ್ನು ಕೋಟ ಪೊಲೀಸರು ಬಂಧಿಸಿದ್ದಾರೆ. 

ಕಾವಡಿ ಗ್ರಾಮದ ಹವರಾಲು ನಿವಾಸಿ ಹರೀಶ್ ಕುಲಾಲ್ (32) ಬಂಧಿತ ಆರೋಪಿ. ಸಂಘದ ಕಾವಡಿ ಶಾಖೆಯ ಪ್ರಭಾರ ಮ್ಯಾನೇಜರ್, ಹೆಗ್ಗುಂಜೆ ಗ್ರಾಮದ ಜಾನುವಾರಕಟ್ಟೆ ನಿವಾಸಿ ಸುರೇಶ ಭಟ್ ಹಾಗೂ ಶಾಖೆಯ ಕಿರಿಯ ಗುಮಾಸ್ತ ಹರೀಶ್ ಕುಲಾಲ್‌ ಸಂಘಕ್ಕೆ 1.70 ಕೋಟಿ ರೂ. ಹಣ ವಂಚಿಸಿ ತಲೆಮರೆಸಿಕೊಂಡಿದ್ದರು. ಈ ಬಗ್ಗೆ ಕೋಟ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ತನಿಖೆ ನಡೆಸಿದ ಪೊಲೀಸರು ನ.18ರಂದು ಸುರೇಶ್ ಭಟ್‌ನನ್ನು ಬಂಧಿಸಿದ್ದರು. ಇದೀಗ ಹರೀಶ್ ಕುಲಾಲ್‌ನನ್ನು ಉಡುಪಿ ಡಿವೈಎಸ್ಪಿ ಪ್ರಭು ಡಿ.ಟಿ. ಹಾಗೂ ಬ್ರಹ್ಮಾವರ ವೃತ್ತ ನಿರೀಕ್ಷಕ ಗೋಪಿಕೃಷ್ಣ ಮಾರ್ಗದರ್ಶನದಲ್ಲಿ ಕೋಟ ಪೊಲೀಸ್‌ ಠಾಣೆಯ ಪೊಲೀಸ್ ಉಪ ನಿರೀಕ್ಷಕ ಪ್ರವೀಣ್ ಕುಮಾರ್, ಎಸ್ಐ ಮಾಂತೇಶ್ ಜಾಭಗೌಡ ಹಾಗೂ ಠಾಣಾ ಸಿಬ್ಬಂದಿ ಕೃಷ್ಣ ಶೇರೆಗಾರ, ಶ್ರೀಧರ್, ಶರತ್ ಅವರಿದ್ದ ತಂಡವು ಬಂಧಿಸಿದೆ.

A major financial fraud amounting to ₹1.70 crore has come to light at the Kavadi branch of the Shiriyara Service Cooperative Society in Sabarkatte, Udupi district. The police have arrested both the branch manager and a junior clerk in connection with the case.