ಬ್ರೇಕಿಂಗ್ ನ್ಯೂಸ್
21-12-25 09:36 pm Mangalore Correspondent ಕ್ರೈಂ
ಮಂಗಳೂರು, ಡಿ.21 : ವಾಹನ ಸಂಚಾರ ನಿಯಮ ಉಲ್ಲಂಘನೆಯ ದಂಡ ಕಟ್ಟುವಂತೆ ಮೊಬೈಲಿಗೆ ಬಂದಿದ್ದ ಸಂದೇಶವನ್ನು ನಂಬಿ ಎಪಿಕೆ ಲಿಂಕ್ ಕ್ಲಿಕ್ ಮಾಡಿದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ 1.43 ಲಕ್ಷ ಮತ್ತು 5.85 ಲಕ್ಷ ರೂ. ವಂಚನೆ ನಡೆದಿರುವ ಬಗ್ಗೆ ಸುರತ್ಕಲ್ ಮತ್ತು ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವ್ಯಕ್ತಿಯೊಬ್ಬರಿಗೆ ಡಿ.4ರಂದು ಮೊಬೈಲ್ ಸಂದೇಶ ಬಂದಿದ್ದು, ಅದನ್ನು ನಂಬಿ ಆರ್ಟಿಒ ಹೆಸರಿನಲ್ಲಿದ್ದ ಎಪಿಕೆ ಫೈಲ್ ಡೌನ್ ಲೋಡ್ ಮಾಡಿದ್ದಾರೆ. ಬಳಿಕ ಅದು ವಂಚನಾ ಜಾಲದ ಲಿಂಕ್ ಎಂದು ತಿಳಿದು ಅದೇ ದಿನ ಡಿಲೀಟ್ ಮಾಡಿದ್ದಾರೆ. ಆದರೆ ಡಿ.16ರಂದು ಅವರ ಖಾತೆಯಿಂದ 99 ಸಾವಿರ ಹಾಗೂ 44 ಸಾವಿರ ರೂ. ಕಡಿತವಾಗಿದೆ. ಈ ಬಗ್ಗೆ ಬ್ಯಾಂಕ್ಗೆ ತೆರಳಿ ವಿಚಾರಿಸಿದಾಗ ಅರವಿಂದ್ ಕೆ. ಮತ್ತು ಶ್ರೀರಾಮ್ ಎಂಬವರ ಯುಪಿಐ ಐಡಿಗೆ ಹಣ ವರ್ಗಾವಣೆಯಾಗಿದೆ ಎಂದು ಬ್ಯಾಂಕ್ ಸಿಬಂದಿ ತಿಳಿಸಿದ್ದಾರೆ. ಈ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನೊಂದು ಪ್ರಕರಣದಲ್ಲಿ ಗೋವಾಕ್ಕೆ ತೆರಳಿದ್ದ ಮಂಗಳೂರಿನ ವ್ಯಕ್ತಿಯೊಬ್ಬರಿಗೆ ಡಿ.3ರಂದು ಸಂಜೆ ಅವರ ವಾಟ್ಸ್ ಆ್ಯಪ್ ಗೆ ಅಪರಿಚಿತ ಸಂಖ್ಯೆಯಿಂದ ಆರ್ ಟಿಓ ದಂಡ ಇರುವ ಬಗ್ಗೆ ಮೆಸೇಜ್ ಬಂದಿದೆ. ಅದರಲ್ಲಿ ಎಪಿಕೆ ಟ್ರಾಫಿಕ್ ವೆಹಿಕಲ್ ನೋಟಿಸ್ ಎಂದಿತ್ತು. ವಾಹನದ ಸಂಚಾರ ನಿಯಮ ಉಲ್ಲಂಘನೆಯಾಗಿರುವ ಬಗ್ಗೆ ಚಲನ್ ಹಣ ಪಾವತಿ ಮಾಡಲು ಹಾಗೂ ರಸ್ತೆ ಸಂಚಾರ ನಿಯಮ ಉಲ್ಲಂಘನೆ ಫೋಟೊ, ವಿಡಿಯೋ ನೋಡಲು ಮೆಸೇಜ್ ಡೌನ್ ಲೋಡ್ ಮಾಡುವಂತೆ ತಿಳಿಸಲಾಗಿತ್ತು. ಅದನ್ನು ಡೌನ್ ಲೋಡ್ ಮಾಡುತ್ತಿದ್ದಂತೆ ಅವರ ಮೊಬೈಲಿಗೆ ಹಲವು ಓಟಿಪಿಗಳು ಬಂದಿವೆ. ಈ ಎಲ್ಲ ಓಟಿಪಿಗಳು ಅಪರಿಚಿತ ನಂಬರ್ಗಳ ಹ್ಯಾಕಿಂಗ್ ಮೂಲಕ ಫಾರ್ವರ್ಡ್ ಆಗಿದ್ದವು. ಇದೇ ವೇಳೆ ಅವರ ಕ್ರೆಡಿಟ್ ಕಾರ್ಡ್ಗಳಿಂದ ಒಟ್ಟು 5,85,084 ರೂ.ವನ್ನು ಸೈಬರ್ ವಂಚಕರು ಶಾಪಿಂಗ್ ಇನ್ನಿತರ ವ್ಯವಹಾರಗಳಿಗೆ ದುರ್ಬಳಕೆ ಮಾಡಿದ್ದಾರೆ. ಮಂಗಳೂರಿಗೆ ಬಂದ ಬಳಿಕ ಅವರಿಗೆ ಫೋನ್ ಹ್ಯಾಕ್ ಆಗಿರುವ ಬಗ್ಗೆ ತಿಳಿದುಬಂದಿದ್ದು ಆ್ಯಪ್ ಡಿಲೀಟ್ ಮಾಡಿ ಪಾಂಡೇಶ್ವರ ಪೊಲೀಸರಿಗೆ ದೂರು ನೀಡಿದ್ದಾರೆ.
Cyber fraudsters have cheated two city residents of ₹1.43 lakh and ₹5.85 lakh in separate incidents after tricking them into downloading malicious APK files sent under the guise of traffic fine notices. Cases have been registered at the Surathkal and Pandeshwar police stations.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am