ಬ್ರೇಕಿಂಗ್ ನ್ಯೂಸ್
29-12-25 02:07 pm Bangalore Correspondent ಕ್ರೈಂ
ಬೆಂಗಳೂರು, ಡಿ 29 : ರಾಜ್ಯದ ಸಾಂಸ್ಕೃತಿಕ ನಗರಿ ಮೈಸೂರಿನ ನಂತರ ರಾಜಧಾನಿ ಬೆಂಗಳೂರು ಹಾಗೂ ಸುತ್ತಮತ್ತ ಸಕ್ರಿಯವಾಗಿದ್ದ ಮಾದಕ ವಸ್ತು ತಯಾರಿಕಾ ಜಾಲವನ್ನು ಮಹಾರಾಷ್ಟ್ರ ಪೊಲೀಸರು ಪತ್ತೆ ಮಾಡಿ, 55.88 ಕೋಟಿ ರೂ. ಮೌಲ್ಯದ ಎಂಡಿಎಂಎ ವಶಪಡಿಸಿಕೊಂಡಿದ್ದಾರೆ. ಇದರ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಮತ್ತು ಪ್ರತಿಪಕ್ಷಗಳ ನಡುವೆ ರಾಜಕೀಯ ಕೆಸರೆರಚಾಟ ಶುರುವಾಗಿದೆ.
ಮಾದಕ ವಸ್ತು ತಯಾರಿಕಾ ಜಾಲದ ವಿಚಾರವು ರಾಜಕೀಯ ಸ್ವರೂಪ ಪಡೆದಿದ್ದು, ಬಿಜೆಪಿ ನಾಯಕರು ರಾಜ್ಯ ಸರಕಾರದ ವಿರುದ್ಧ ಮುಗಿಬಿದ್ದಿದ್ದಾರೆ. ಇದಕ್ಕೆ ತಿರುಗೇಟು ಕೊಟ್ಟಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್, ''ಮಹಾರಾಷ್ಟ್ರದ ಮಾದಕ ದ್ರವ್ಯ ನಿಗ್ರಹ ಕಾರ್ಯಪಡೆ (ಎಂಎಎನ್‌ಟಿಎಫ್) ಬೆಂಗಳೂರಿನಲ್ಲಿ55 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿರುವುದಾಗಿ ಹೇಳಿದೆ. ಆದರೆ, ಇದು ಸತ್ಯಕ್ಕೆ ದೂರವಾದ ಮಾಹಿತಿ,'' ಎಂದು ಸ್ಪಷ್ಟಪಡಿಸಿದ್ದಾರೆ.



ಮಹಾರಾಷ್ಟ್ರ ಎಎನ್‌ಟಿಎಫ್ ಪೊಲೀಸರು ಮುಂಬಯಿನಲ್ಲಿಇತ್ತೀಚೆಗೆ 1.50 ಕೋಟಿ ರೂ. ಮೌಲ್ಯದ ಮಾದಕ ವಸ್ತುಗಳನ್ನು ಜಪ್ತಿ ಮಾಡಿ, ಅಬ್ದುಲ್ಲಾ ಖಾದರ್ ಶೇಕ್ ಎಂಬಾತನನ್ನು ಬಂಧಿಸಿದ್ದರು. ಆರೋಪಿ ಅಬ್ದುಲ್ಲಾ ಖಾದರ್ ಶೇಕ್, ಪೊಲೀಸರ ವಿಚಾರಣೆ ವೇಳೆ ಮಹತ್ವದ ವಿಚಾರ ಬಾಯ್ಬಿಟ್ಟಿದ್ದ. ಈ ಮಾಹಿತಿ ಆಧರಿಸಿ ಮಹಾರಾಷ್ಟ್ರ ಪೊಲೀಸರು, ಬೆಳಗಾವಿಯ ಪ್ರಶಾಂತ್ ಯಲ್ಲಪ್ಪ ಪಾಟೀಲ್ ಎಂಬಾತನನ್ನು ಬಂಧಿಸಿದ್ದರು. ಪ್ರಶಾಂತ್ ಯಲ್ಲಪ್ಪ ಪಾಟೀಲ್ ನೀಡಿದ ಮಾಹಿತಿ ಆಧರಿಸಿ ಮಹಾರಾಷ್ಟ್ರ ಪೊಲೀಸರು ಬೆಂಗಳೂರಿನ ಮೂರು ಕಡೆ ಮಾದಕ ವಸ್ತು ತಯಾರಿಕಾ ಘಟಕಗಳ ಮೇಲೆ ದಾಳಿ ಮಾಡಿದ್ದಾರೆ.
ಪ್ರಕರಣ ಸಂಬಂಧ ರಾಜಸ್ತಾನದ ಸೂರಜ್ ರಮೇಶ್ ಯಾದವ್, ಮಲ್ಖಾನ್ ರಾಮಲಾಲ್ ಬಿಷ್ಣೋಯ್ ಸೇರಿದಂತೆ ನಾಲ್ವರನ್ನು ಬಂಧಿಸಿ, 4.1 ಕೆ.ಜಿ ಘನ ರೂಪದ ಎಂಡಿಎಂಎ ಹಾಗೂ 17 ಕೆ.ಜಿ. ದ್ರವ ರೂಪದ ಎಂಡಿಎಂಎ ಸೇರಿದಂತೆ 55.88 ಕೋಟಿ ರೂ. ಮೌಲ್ಯದ ಮಾದಕ ವಸ್ತು ವಶಪಡಿಸಿಕೊಂಡಿರುವುದಾಗಿ ಮಹಾರಾಷ್ಟ್ರ ಎಎನ್‌ಟಿಎಫ್ ಅಧಿಕಾರಿಗಳು ಹೇಳಿದ್ದಾರೆ.
ರಾಜಸ್ತಾನ ಮೂಲದ ಕಿಂಗ್‌ಪಿನ್‌ಗಳು ಬೆಂಗಳೂರಿನಲ್ಲಿಮಾದಕ ವಸ್ತು ತಯಾರಿಕಾ ಕಾರ್ಖಾನೆಗಳನ್ನು ನಡೆಸುತ್ತಿದ್ದರು. ಯೋಗಿರಾಜ್‌ಕುಮಾರ್ ಮತ್ತು ನಯನ್ ಪವರ್ ಎಂಬುವರು ಈ ಜಾಲದ ರೂವಾರಿಗಳು. ಇವರು ಕರ್ನಾಟಕ ಮಾತ್ರವಲ್ಲದೆ ದೇಶದ ಹಲವೆಡೆ ಡ್ರಗ್ಸ್ ಕಾರ್ಖಾನೆ ನಡೆಸುತ್ತಿದ್ದಾರೆ. ಆರೋಪಿಗಳು ಬೆಂಗಳೂರಿನ ಮಾದಕ ವಸ್ತು ತಯಾರಿಕಾ ಘಟಕಗಳಿಂದ ದೇಶದ ಹಲವು ರಾಜ್ಯಗಳಿಗೆ ಮಾದಕ ವಸ್ತು ಪೂರೈಸುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
In a major interstate operation, the Maharashtra Anti-Narcotics Task Force (ANTF) raided three drug manufacturing units in Bengaluru and surrounding areas, seizing MDMA worth ₹55.88 crore. The crackdown followed the arrest of Abdullah Khadar Sheikh in Mumbai, who revealed crucial information during interrogation.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 11:28 am
HK News Staffer
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm