ಯೆಯ್ಯಾಡಿ ಬಳಿ ನಡೆದು ಹೋಗುತ್ತಿದ್ದ ಮಹಿಳೆಯ ಕರಿಮಣಿ ಸರ ಕಸಿದು ಪರಾರಿ ; ಬಂಟ್ವಾಳದ ಝೊಮೆಟೋ ಉದ್ಯೋಗಿ ಸೆರೆ 

29-12-25 03:02 pm       Mangalore Correspondent   ಕ್ರೈಂ

ನಗರದ ಯೆಯ್ಯಾಡಿ ಕೊಪ್ಪಳಕಾಡು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಚಿನ್ನದ ಕರಿಮಣಿ ಸರ ಸುಲಿಗೆ ಮಾಡಿದ ಆರೋಪಿಯನ್ನು ಕದ್ರಿ ಪೊಲೀಸರು ಕೆಲವೇ ದಿನಗಳಲ್ಲಿ ಬಂಧಿಸಿದ್ದಾರೆ.  

ಮಂಗಳೂರು, ಡಿ.28 : ನಗರದ ಯೆಯ್ಯಾಡಿ ಕೊಪ್ಪಳಕಾಡು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಚಿನ್ನದ ಕರಿಮಣಿ ಸರ ಸುಲಿಗೆ ಮಾಡಿದ ಆರೋಪಿಯನ್ನು ಕದ್ರಿ ಪೊಲೀಸರು ಕೆಲವೇ ದಿನಗಳಲ್ಲಿ ಬಂಧಿಸಿದ್ದಾರೆ.  

ಡಿ.25ರಂದು ಸಂಜೆ 6.30ಕ್ಕೆ ಗುರುನಗರ ನಿವಾಸಿಯಾದ ಮಹಿಳೆಯೊಬ್ಬರು ತಮ್ಮ ಮಗಳೊಂದಿಗೆ ಯೆಯ್ಯಾಡಿಯಲ್ಲಿ ತಮ್ಮ ಅಂಗಡಿಯಿಂದ ಮನೆಯ ಕಡೆಗೆ ಶಂಕರಭವನ ಹೊಟೇಲ್ ಬಳಿಯ ಕೊಪ್ಪಳಕಾಡು ರಸ್ತೆಯಲ್ಲಿ ನಡೆದುಕೊಂಡು ಹೋಗುವಾಗ, ಹಿಂದಿನಿಂದ ಬಂದ ಓರ್ವ ಅಪರಿಚಿತ ವ್ಯಕ್ತಿ ಏಕಾಏಕಿ ಮಹಿಳೆಯ ಕುತ್ತಿಗೆಯಲ್ಲಿದ್ದ 32 ಗ್ರಾಂ ತೂಕದ ಚಿನ್ನದ ಕರಿಮಣಿ ಸರವನ್ನು ಕಸಿದು ಓಡಿ ಹೋಗಿರುತ್ತಾನೆ. ಈ ಬಗ್ಗೆ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ 128/2025 ಕಲಂ: 304(2) ಭಾರತೀಯ ನ್ಯಾಯ ಸಂಹಿತೆ-2023 ರಂತೆ ಪ್ರಕರಣ ದಾಖಲಿಸಲಾಗಿದೆ. 

ಗ್ರಾಮಾಂತರ ಠಾಣೆಯ ಪೊಲೀಸ್‌ ನಿರೀಕ್ಷಕ ಗವಿರಾಜ್‌ ಮತ್ತು ಅರುಣ್‌ ಕುಮಾರ್‌, ಪಿ.ಎಸ್.ಐ ಅವರು, ಠಾಣೆಯ ಕ್ರೈಂ ಸಿಬ್ಬಂದಿಗಳು ಮತ್ತು ಎಸಿಪಿ ದಕ್ಷಿಣ ಉಪ ವಿಭಾಗದ ಕ್ರೈಂ ಸಿಬ್ಬಂದಿಗಳು ಸೇರಿ ಆರೋಪಿಯ ಪತ್ತೆ ಕಾರ್ಯ ನಡೆಸಿದ್ದು, ಸಾಕ್ಷ್ಯಾಧಾರಗಳ ಮೇಲೆ ಡಿ.28 ರಂದು ಬೆಳಗ್ಗೆ ಸುಮಾರು 9.30 ಗಂಟೆಗೆ ಪ್ರಕರಣದ ಆರೋಪಿ ರೋಹಿತ್ ಬಿ. ದಾಸ್ ಎಂಬಾತನನ್ನು ಬಂಟ್ವಾಳದ ಕುಕ್ಕೆಪದವು ಎಂಬಲ್ಲಿ ದಸ್ತಗಿರಿ ಮಾಡಿ, ಸುಲಿಗೆ ಮಾಡಿದ 32 ಗ್ರಾಂ ಚಿನ್ನದ ಕರಿಮಣಿ ಸರ ಮೌಲ್ಯ ರೂ.3,50,000/- ಮತ್ತು ಕೃತ್ಯಕ್ಕೆ ಉಪಯೋಗಿಸಿದ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ವಶಪಡಿಸಿದ್ದಾರೆ.

ತನಿಖೆಯಲ್ಲಿ ಆರೋಪಿ ಸ್ವಿಗ್ಗಿ ಮತ್ತು ಝೋಮೆಟೋ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದು, ಇತ್ತೀಚೆಗೆ ಸ್ಕೂಟರ್‌ ಖರೀದಿಸಿದ್ದು ಮತ್ತು ಇತರ ವಿಚಾರಗಳಿಗೆ ಲಕ್ಷಾಂತರ ರೂಪಾಯಿಗಳ ಸಾಲ ಮಾಡಿದ್ದು, ಸಾಲವನ್ನು ತೀರಿಸಲು ಈ ಕೃತ್ಯವನ್ನು ಎಸಗಿರುವುದು ತನಿಖೆಯಲ್ಲಿ ತಿಳಿದುಬಂದಿದೆ. 

ಆರೋಪಿ ರೋಹಿತ್ ಬಿ. ದಾಸ್ (24) ಬಂಟ್ವಾಳ ತಾಲೂಕಿನ ಕಕ್ಕೆಪದವು ನಿವಾಸಿಯಾಗಿದ್ದು ಮೊದಲ ಬಾರಿಗೆ ಅಪರಾಧ ಕೃತ್ಯದಲ್ಲಿ ತೊಡಗಿ ಜೈಲು ಪಾಲಾಗಿದ್ದಾನೆ. 2025ರ ಸಾಲಿನಲ್ಲಿ ಮಂಗಳೂರು ನಗರ ಪೊಲೀಸ್‌ ಕಮೀಷನರೇಟ್‌ ವ್ಯಾಪ್ತಿಯಲ್ಲಿ 07 ಸರಗಳ್ಳತನ ಪ್ರಕರಣಗಳು ವರದಿಯಾಗಿದ್ದು, ಎಲ್ಲ ಪ್ರಕರಣಗಳನ್ನು ಭೇದಿಸಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರ ಪ್ರಕಟಣೆ ತಿಳಿಸಿದೆ.

A woman walking with her daughter on the Yeyyadi–Koppalakadu Road in Mangaluru was robbed of her 32-gram gold karimani chain on the evening of December 25. An unidentified man suddenly snatched the chain and fled. A case was registered at Mangaluru Rural Police Station under IPC 304(2) of the Bharatiya Nyaya Sanhita, 2023.