ಬ್ರೇಕಿಂಗ್ ನ್ಯೂಸ್
20-01-26 07:51 pm Bangalore Correspondent ಕ್ರೈಂ
ಬೆಂಗಳೂರು, ಜ.20: ನಟ ಕಿಚ್ಚ ಸುದೀಪ್ ಹಾಗೂ ಮ್ಯಾನೇಜರ್ ಚಂದ್ರಚೂಡ್ 60 ಲಕ್ಷ ವಂಚನೆ ಮಾಡಿದ್ದಾರೆಂದು ಕಾಫಿ ತೋಟದ ಮಾಲೀಕರಿಬ್ಬರು ಬೆಂಗಳೂರು ಪೊಲೀಸ್ ಕಮಿಷನರ್ ಗೆ ದೂರು ನೀಡಿದ್ದಾರೆ.
ಕಾಫಿ ತೋಟದ ಮಾಲೀಕ ದೀಪಕ್ ಎಂಬವರು ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಗೆ ಆಗಮಿಸಿ, ನಟ ಕಿಚ್ಚ ಸುದೀಪ್ ಹಾಗೂ ಅವರ ಮ್ಯಾನೇಜರ್ ಚಂದ್ರಚೂಡ್ ವಿರುದ್ಧ ವಂಚನೆ ದೂರು ನೀಡಿದ್ದಾರೆ. ದೀಪಕ್ ಅವರಿಗೆ ಸೇರಿದ್ದ ಮನೆ ಹಾಗೂ ಕಾಫಿ ತೋಟದಲ್ಲಿ ಧಾರಾವಾಹಿ ಚಿತ್ರೀಕರಣಕ್ಕಾಗಿ ಅಗ್ರಿಮೆಂಟ್ ಮಾಡಿಕೊಂಡಿದ್ದರು. ಅಗ್ರಿಮೆಂಟ್ ಪ್ರಕಾರ ಹಣ ನೀಡದೇ ವಂಚಿಸಿದ್ದಾರೆ ಎಂದು ಆರೋಪಿಸಿದ್ದಾರೆ.
'ವಾರಸ್ಥಾರ' ಎಂಬ ಧಾರಾವಾಹಿಗಾಗಿ ಮನೆ ಹಾಗೂ ಕಾಫಿ ತೋಟದಲ್ಲಿ ಚಿತ್ರೀಕರಣ ಮಾಡಲು ಎರಡು ವರ್ಷಗಳ ಅಗ್ರಿಮೆಂಟ್ ಮಾಡಿಕೊಂಡಿದ್ದರು. ಚಿತ್ರೀಕರಣ ಆರಂಭಿಸಿದ ಕೆಲವೇ ದಿನಗಳಲ್ಲಿ ಚಿತ್ರೀಕರಣ ಸ್ಥಗಿತಗೊಳಿಸಿದ್ದಾರೆ. ಚಿತ್ರೀಕರಣ ಉದ್ದೇಶಕ್ಕಾಗಿ ಕಾಫಿ ತೋಟ, ಮರಗಳನ್ನು ನಾಶ ಮಾಡಿದ್ದಾರೆ. ಆದರೆ ಅಗ್ರಿಮೆಂಟ್ ನಂತೆ ಹಣ ಪಾವತಿಸಿಲ್ಲ. ಈ ಹಿನ್ನೆಲೆಯಲ್ಲಿ 95 ಲಕ್ಷ ಪರಿಹಾರ ನೀಡುವಂತೆ ಕಿಚ್ಚ ಸುದೀಪ್ ಹಾಗೂ ಚಂದ್ರಚೂಡ್ ವಿರುದ್ಧ ಕೋರ್ಟ್ ಕೇಸ್ ಹಾಕಿದ್ದರು. ಬಳಿಕ ಕೇಸ್ ವಾಪಸ್ ಪಡೆಯಿರಿ 60 ಲಕ್ಷ ಹಣ ನೀಡುವುದಾಗಿ ನಟ ಕಿಚ್ಚ ಸುದೀಪ್ ಭರವಸೆ ನೀಡಿದ್ದರು. ಮಾತುಕತೆ ಬಳಿಕ ಪ್ರಕರಣ ವಾಪಸ್ ಪಡೆದಿದ್ದರೂ ಹಣ ನೀಡಿರಲಿಲ್ಲ.
ಪ್ರಕರಣ ಹಿಂಪಡೆಯುವ ಮುನ್ನ ನಟ ಸುದೀಪ್ ಅವರ ಮ್ಯಾನೇಜರ್ ಚಂದ್ರಚೂಡ್ 10 ಲಕ್ಷ ರೂ. ಚೆಕ್ ನೀಡಿದ್ದರು. ಆದರೆ ಆನಂತರ ಬಾಕಿ ಹಣ ನೀಡದೇ ವಂಚಿಸಿದ್ದಾರೆ ಎಂದು ದೀಪಕ್ ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನಟ ಸುದೀಪ್, ಮ್ಯಾನೇಜರ್ ಚಂದ್ರಚೂಡ್ ವಿರುದ್ಧ ದೂರು ನೀಡಿದ್ದಾರೆ.
Actor Kiccha Sudeep and his manager Chandrachood have been accused of cheating to the tune of ₹60 lakh by two coffee estate owners, who have filed a complaint with the Bengaluru Police Commissioner.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
16-09-26 10:51 am
HK News Staffer
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm