ಬ್ರೇಕಿಂಗ್ ನ್ಯೂಸ್
27-01-26 10:18 pm Bangalore Correspondent ಕ್ರೈಂ
ಬೆಂಗಳೂರು, ಜ.27 : ಚಿನ್ನದ ರೇಟು ಹೆಚ್ಚುತ್ತಿದ್ದಂತೆ ಚಿನ್ನದ ಅಂಗಡಿಗಳಿಗೆ ನುಗ್ಗಿ ದರೋಡೆ ನಡೆಸುವ ಕೃತ್ಯಗಳು ಹೆಚ್ಚುತ್ತಿವೆ. ನಿನ್ನೆ ವಿಜಯಪುರದಲ್ಲಿ ಗನ್ ತೋರಿಸಿ ಜುವೆಲ್ಲರಿ ದರೋಡೆ ನಡೆಸಲಾಗಿತ್ತು. ಇಂದು ಬೆಂಗಳೂರಿನಿಂದ ನೆಲಮಂಗಲದಲ್ಲಿ ಮೂವರು ಆಗಂತುಕರು ಹಾಡಹಗಲೇ ಜುವೆಲ್ಲರಿ ನುಗ್ಗಿ ಗನ್ ತೋರಿಸಿ ಬಂಗಾರದ ಒಡವೆಗಳನ್ನು ದೋಚಿಕೊಂಡು ಹೋಗಿದ್ದಾರೆ.
ನೆಲಮಂಗಲ ಬಳಿಯ ದಾಸನಪುರದ ರಾಮದೇವ್ ಜ್ಯುವೆಲ್ಲರಿ ಅಂಗಡಿಗೆ ಸಂಜೆ 5.30ರ ವೇಳೆಗೆ ಆಗಂತುಕರು ನುಗ್ಗಿದ್ದು ಅಂಗಡಿ ಮಾಲೀಕನಿಗೆ ಗನ್ ತೋರಿಸಿ ದರೋಡೆ ಮಾಡಿದ್ದಾರೆ. ಪ್ಲಾಸ್ಟಿಕ್ ರೀತಿಯ ಗನ್ ತೋರಿಸಿ ಬೆದರಿಸಿದ ದುಷ್ಕರ್ಮಿಗಳು 28 ಗ್ರಾಂ ಚಿನ್ನದ ಸರ, ಐವತ್ತು ಸಾವಿರ ನಗದು ಹಣವನ್ನು ಕಸಿದು ಪರಾರಿಯಾಗಿದ್ದಾರೆ. ಜ್ಯುವೆಲ್ಲರಿ ಶಾಪ್ ಮಾಲೀಕ ಪ್ರತಿರೋಧ ತೋರುತ್ತಿದ್ದಂತೆ ಸ್ಥಳದಿಂದ ಎಸ್ಕೇಪ್ ಆಗಿದ್ದಾರೆ.
ಮೂವರು ಚಿನ್ನದ ಒಡವೆಗಳನ್ನು ಕದ್ದೊಯ್ಯುವುದು, ಮಾಲೀಕನನಿಗೆ ಬೆದರಿಕೆ ಹಾಕುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇವರು ರಾಜಸ್ಥಾನಿ ಭಾಷೆ ಮಾತನಾಡುತ್ತಿದ್ದರು ಎಂಬ ಮಾಹಿತಿ ಸ್ಥಳೀಯರಿಂದ ತಿಳಿದುಬಂದಿದೆ. ಸಾಕಷ್ಟು ಜನರು ಇರುವಾಗಲೇ ಕಳ್ಳರು ಒಳಗಡೆ ಬಂದು ಗನ್ ತೋರಿಸಿ ರಾಜಾರೋಷವಾಗಿ ಪರಾರಿಯಾಗಿದ್ದಾರೆ.
ಎರಡು ದಿನಗಳ ಹಿಂದೆಯಷ್ಟೇ ಬೆಳಗಾವಿ ಗಡಿಯಲ್ಲಿ 400 ಕೋಟಿ ದರೋಡೆ ಆಗಿರುವುದು ಬೆಳಕಿಗೆ ಬಂದಿತ್ತು. ಮರುದಿನವೇ ವಿಜಯಪುರ ಜಿಲ್ಲೆಯ ಚಡಚಣದಲ್ಲಿ ಗನ್ ತೋರಿಸಿ ದರೋಡೆ ಮಾಡಲಾಗಿತ್ತು. ಇದೀಗ ರಾಜಧಾನಿ ಬೆಂಗಳೂರಿನಲ್ಲು ದರೋಡೆಯಾಗಿದ್ದು ಮಾದನಾಯಕಹಳ್ಳಿ ಠಾಣೆಯಲ್ಲಿ ಜುವೆಲ್ಲರಿ ಮಾಲೀಕ ದೂರು ದಾಖಲಿಸಿದ್ದಾರೆ.
In a daylight robbery, three miscreants barged into a jewellery shop in Dasanapura near Nelamangala and escaped after looting gold ornaments and cash. The accused threatened the shop owner with a gun and fled with 28 grams of gold and ₹50,000. The entire incident was caught on CCTV, and police have registered a case at Madanayakanahalli police station.
29-01-26 11:03 pm
Bangalore Correspondent
ಡಿಕೆ ಮುಖ್ಯಮಂತ್ರಿ ಸ್ಥಾನಕ್ಕೆ ಹೋಗಲು ಭಗವಂತ ಅವಕಾಶ...
29-01-26 10:48 pm
18 ಕೋಟಿ ಮೌಲ್ಯದ 11 ಕೇಜಿ ಚಿನ್ನ ಲೂಟಿ ; ಬೆಂಗಳೂರಿನ...
29-01-26 01:16 pm
ಮೈಸೂರಿನಲ್ಲಿ ಮತ್ತೆ ಡ್ರಗ್ಸ್ ಫ್ಯಾಕ್ಟರಿ ಶಂಕೆಯಲ್ಲಿ...
28-01-26 09:54 pm
ಅಕ್ರಮ ಮರಳು ಗಣಿಗಾರಿಕೆ, ಮಟ್ಕಾ, ಜೂಜು, ಇಸ್ಪೀಟು ದಂ...
27-01-26 09:57 pm
29-01-26 11:07 pm
HK News Desk
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
ಬೌದ್ಧ ಧರ್ಮಕ್ಕೆ ಮತಾಂತರಗೊಂಡು ಅಲ್ಪಸಂಖ್ಯಾತ ಮೀಸಲಾತ...
28-01-26 11:14 pm
ಶಿಮ್ಲಾದಲ್ಲಿ ಹಿಮಪಾತ ; ರೀಲ್ಸ್ ಮಾಡಲು ಹೋಗಿದ್ದ ಹುಡ...
28-01-26 02:35 pm
ತಮ್ಮ ಕರ್ಮಭೂಮಿಯಲ್ಲೇ ಅಜಿತ್ ಪವಾರ್ ಕೊನೆಯುಸಿರು ; ವ...
28-01-26 01:28 pm
29-01-26 10:38 pm
Mangalore Correspondent
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
ಫೆ.1ರಂದು "ನಮ್ಮ ನಡಿಗೆ ತಲಪಾಡಿ ದೇವಿಪುರದ ಕಡೆಗೆ" ಬ...
27-01-26 08:58 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm