ಬ್ರೇಕಿಂಗ್ ನ್ಯೂಸ್
02-02-26 12:16 pm HK News Desk ಕ್ರೈಂ
ಉಡುಪಿ, ಫೆ.2 : ನಗರದ ಪಿಪಿಸಿ ಕ್ರಾಸ್ ಬಳಿ ಕಾಂಗ್ರೆಸ್ ಯುವ ಮುಖಂಡ ಹಾಗೂ ಉಡುಪಿ ಜಿಲ್ಲಾ ಎನ್‌ಎಸ್‌ಯುಐ ಉಪಾಧ್ಯಕ್ಷ ಶರತ್ ಕುಂದರ್ (25) ಎಂಬವರ ಮೇಲೆ 6–7 ಮಂದಿಯಿದ್ದ ದುಷ್ಕರ್ಮಿಗಳ ತಂಡ ತಲವಾರು ದಾಳಿ ನಡೆಸಿದ್ದು, ಕೊಲೆಗೆ ಯತ್ನಿಸಿದ್ದಾರೆಂಬ ಆರೋಪ ಕೇಳಿಬಂದಿದೆ.
ಜನವರಿ 30ರಂದು ರಾತ್ರಿ ಮಣಿಪಾಲದ ಹೋಟೆಲ್ ಒಂದರಲ್ಲಿ ಊಟದ ವೇಳೆ ನಡೆದ ಕ್ಷುಲ್ಲಕ ಮಾತಿನ ಚಕಮಕಿಯೇ ದಾಳಿಗೆ ಕಾರಣವಾಗಿದೆ ಎಂದು ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಶರತ್ ಕುಂದರ್ ತನ್ನ ಸ್ನೇಹಿತರೊಂದಿಗೆ ಹೋಟೆಲ್‌ಗೆ ತೆರಳಿದ್ದಾಗ, ರಮಾನಂದ ಪೈ ಎಂಬವರ ಜೊತೆಗೆ ಮಾತಿನ ಗಲಾಟೆ ನಡೆದಿದೆ. ಘಟನೆಯ ಬಳಿಕ ಶರತ್ ಕುಂದರ್ ಮನೆಗೆ ಹೊರಟಿದ್ದರು. ಈ ನಡುವೆ ಅಕ್ಷತ್ ಪೈ ಎಂಬವರು ಹೋಟೆಲ್‌ನಲ್ಲಿ ನಡೆದ ಗಲಾಟೆ ಕುರಿತು ಮಾತನಾಡಲು ಇದೆ ಎಂದು ಹೇಳಿ, ಪಿಪಿಸಿ ಕ್ರಾಸ್ ಬಳಿಗೆ ಕರೆಸಿದ್ದಾರೆ. ಅದರಂತೆ ಶರತ್ ಕುಂದರ್ ತನ್ನ ಸ್ನೇಹಿತರಾದ ಧ್ರುವ, ಸಿಲಾನ್ ಗಗನ್ ಮತ್ತು ರೋಹಿತ್ ಜೊತೆ ಪಿಪಿಸಿ ಕ್ರಾಸ್ ಸಮೀಪ ರಸ್ತೆ ಬದಿಯಲ್ಲಿ ಕಾಯುತ್ತಿದ್ದರು.
ರಾತ್ರಿ ಸುಮಾರು 11.30ರ ವೇಳೆಗೆ ಟಾಟಾ ಸಫಾರಿ ಹಾಗೂ ಮಹೀಂದ್ರ ಥಾರ್ ವಾಹನಗಳಲ್ಲಿ ಆಗಮಿಸಿದ ಆರೋಪಿಗಳು, ತಲ್ವಾರ್ ಹಾಗೂ ಕಬ್ಬಿಣದ ಚೇರ್ ಹಿಡಿದು, ಶರತ್ ಕುಂದರ್ ಅವರನ್ನು ಕೊಲ್ಲುವ ಉದ್ದೇಶದಿಂದ ದಾಳಿ ನಡೆಸಿದ್ದಾರೆ. ದಾಳಿ ವೇಳೆ ರಮಾನಂದ ಪೈ ತಲ್ವಾರ್ ಬೀಸಿದ್ದು ಶರತ್ ಕುಂದರ್ ಅವರ ಅಂಗೈ ಮತ್ತು ಬೆರಳುಗಳಿಗೆ ಗಂಭೀರ ಗಾಯಗಳಾಗಿವೆ. ದಾಳಿ ನಡೆಯುವಾಗ ಜೊತೆಯಲ್ಲಿದ್ದ ಸ್ನೇಹಿತರು ಬೊಬ್ಬೆ ಹಾಕಿದ್ದರಿಂದ ಆರೋಪಿಗಳು ಜೀವ ಬೆದರಿಕೆ ಹಾಕಿ ಸ್ಥಳದಿಂದ ಪರಾರಿಯಾಗಿದ್ದಾರೆ. ಶರತ್ ಕುಂದರ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಬಂಧನಕ್ಕಾಗಿ ವಿಶೇಷ ತಂಡ ರಚಿಸಲಾಗಿದೆ.
Congress youth leader and NSUI district vice-president Sharath Kunder (25) was allegedly attacked with a sword by a group of 6–7 men near PPC Cross in Udupi late at night. Police said the attack stemmed from a minor argument at a hotel in Manipal on January 30. The accused allegedly lured Kunder to the spot and assaulted him with a sword and iron rod around 11.30 pm. He sustained serious injuries to his hand and fingers and was admitted to hospital.
08-07-26 02:06 pm
HK News Staffer
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
ದೇಶದ 'ತೂಗುಸೇತುವೆಗಳ ಸರದಾರ' ಪದ್ಮಶ್ರೀ ಡಾ. ಗಿರೀಶ್...
07-07-26 10:52 am
ಮೈಸೂರು ದಸರಾದಲ್ಲಿ ಕಂಬಳ ಬೇಡವೇ ಬೇಡ ; ಯದುವೀರ್ ಒಡ...
06-07-26 04:40 pm
07-07-26 03:22 pm
HK News Staffer
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
ಚೀನಾ ಮಹಾಗೋಡೆ ಮಾದರಿಯಲ್ಲೇ ಆಫ್ರಿಕಾ ಮರುಭೂಮಿಯಲ್ಲಿ...
04-07-26 08:09 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
07-07-26 08:07 pm
HK News Staffer
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm
Panambur Gold Robbery, Photo Released: ಚಿನ್ನದ...
06-07-26 12:28 pm
ಬಂಟ್ವಾಳ ; ಬಸ್ಸಿಗೆ ನಿಂತಿದ್ದ ಪಿಯುಸಿ ವಿದ್ಯಾರ್ಥಿನ...
06-07-26 11:59 am