ಬ್ರೇಕಿಂಗ್ ನ್ಯೂಸ್
02-02-26 10:37 pm Bangalore Correspondent ಕ್ರೈಂ
ಬೆಂಗಳೂರು, ಫೆ.2 : 65 ವರ್ಷದ ವೃದ್ಧ ಮಹಿಳೆಯನ್ನು ಅತ್ಯಾಚಾರವೆಸಗಿ ಕೊಲೆಗೈದ ವ್ಯಕ್ತಿಯೊಬ್ಬ ಬಳಿಕ ಸಾವಿಗೆ ಶರಣಾದ ಘಟನೆ ನಗರದ ಮೈಕೋ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಹಲವು ವರ್ಷಗಳಿಂದ ವೃದ್ಧೆಯ ಮನೆಯಲ್ಲಿ ಮನೆಗೆಲಸ ಮಾಡಿಕೊಂಡಿದ್ದ ವ್ಯಕ್ತಿಯೇ ಈ ನೀಚ ಕೃತ್ಯವೆಸಗಿದ್ದಾನೆ. ಆರೋಪಿ ದೇವರಾಜು (50) ತಮಿಳುನಾಡಿನ ಹೊಸೂರು ಮೂಲದವನಾಗಿದ್ದು, ಎಂಟು ವರ್ಷಗಳಿಂದ ವೃದ್ಧೆ ಮನೆಯಲ್ಲಿ ಸೇರಿದಂತೆ ಕಾಲೋನಿಯ ಇತರ ಮನೆಗಳಲ್ಲಿಯೂ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ.
ಘಟನೆ ಸಮಯದಲ್ಲಿ ಮೃತ ಮಹಿಳೆಯ 27 ವರ್ಷದ ಪುತ್ರಿ ಮನೆಯ ಮೊದಲ ಮಹಡಿಯಲ್ಲಿ ವಾಸವಿದ್ದು, ಆಕೆಗೆ ಮಾಹಿತಿಯೇ ಇರಲಿಲ್ಲ. ಭಾನುವಾರ ಬೆಳಗಿನ ಜಾವ ಘಟನೆ ನಡೆದಿದ್ದು, ಮೈಕೋ ಲೇಔಟ್ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ. ಅತ್ಯಾಚಾರವೆಸಗಿದ ಬಳಿಕ ಆರೋಪಿ ಮಹಿಳೆಯ ಕುತ್ತಿಗೆಯನ್ನು ಹಿಸುಕಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಮೃತ ಮಹಿಳೆಯ ಕುತ್ತಿಗೆಯಲ್ಲಿ ಗಾಯದ ಗುರುತುಗಳಿದ್ದು ಫಾರೆನ್ಸಿಕ್ ವರದಿ ಬಂದ ಬಳಿಕವೇ ಸ್ಪಷ್ಟತೆ ಸಿಗಲಿದೆ.
ಕೃತ್ಯದ ಬಗ್ಗೆ ಭಯಗೊಂಡ ಆರೋಪಿ ಮನೆಯೊಳಗೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತ ಮಹಿಳೆಯ ಪತಿ ಖ್ಯಾತ ಕಂಪನಿಯೊಂದರಲ್ಲಿ ಉನ್ನತ ಹುದ್ದೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಕೆಲಸದ ನಿಮಿತ್ತ ವಿದೇಶದಲ್ಲಿದ್ದರು. ಭಾನುವಾರ ಬೆಳಗ್ಗೆ 5 ಗಂಟೆ ಸುಮಾರಿಗೆ ಮನೆಗೆ ಮರಳಿದ ವೇಳೆ ಈ ಘಟನೆ ಬೆಳಕಿಗೆ ಬಂದಿದೆ. ಮನೆಯ ಬಾಗಿಲು ತೆರೆಯುತ್ತಿದ್ದಂತೆ, ಮಲಗುವ ಕೋಣೆಯಲ್ಲಿ ಆರೋಪಿ ನೇಣು ಬಿಗಿದುಕೊಂಡಿರುವುದು ಹಾಗೂ ಪತ್ನಿ ನೆಲದಲ್ಲಿ ಬಿದ್ದಿರುವುದನ್ನು ಕಂಡು ಬೆಚ್ಚಿಬಿದ್ದಿದ್ದಾರೆ. ಅವರ ಕೂಗು ಕೇಳಿ ಪುತ್ರಿ ಸ್ಥಳಕ್ಕೆ ಧಾವಿಸಿ ಬಂದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
A 65-year-old woman was allegedly raped and murdered by a domestic worker at her residence in Bengaluru’s Mico Layout area. The accused, who had been working at the house for years, later died by suicide at the same location. Police have registered a case and are awaiting forensic reports for further investigation.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am