ಬ್ರೇಕಿಂಗ್ ನ್ಯೂಸ್
07-02-26 08:14 pm Mangalore Correspondent ಕ್ರೈಂ
ಮಂಗಳೂರು, ಫೆ.7: ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇತ್ತೀಚೆಗೆ ರೂ. 53 ಲಕ್ಷ ಮೌಲ್ಯದ 1 ಕ್ವಿಂಟಾಲ್ 6 ಕೆ.ಜಿ 50 ಗ್ರಾಂ ಗಾಂಜಾ ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ತನಿಖೆ ಮುಂದುವರಿಸಿದ್ದು, ಪ್ರಕರಣದ ಆರೋಪಿಗಳಿಗೆ ಹಣ ಮತ್ತು ವಾಹನದ ವ್ಯವಸ್ಥೆಯನ್ನು ಮಾಡಿದ ಇಬ್ಬರು ಸೇರಿ ಲ, ಗಾಂಜಾ ಪೂರೈಕೆ ಮಾಡಿದ ಒರಿಸ್ಸಾ ಮೂಲದ ಆರೋಪಿಯನ್ನು ಬಂಧಿಸಿದ್ದಾರೆ.
ಹಣ ಮತ್ತು ವಾಹನ ವ್ಯವಸ್ಥೆ ಮಾಡಿದ್ದ ಬೆಳ್ತಂಗಡಿ ಚಾರ್ಮಾಡಿ ನಿವಾಸಿ ಮಹಮ್ಮದ್ ಫಯಾಜ್ ಡಿ.ಕೆ (27) ಹಾಗೂ ಬೆಳ್ತಂಗಡಿ ಕಕ್ಕಿಂಜೆ ನಿವಾಸಿ ನಝಿರ್ (42) ಎಂಬವರನ್ನು ದಸ್ತಗಿರಿ ಮಾಡಲಾಗಿರುತ್ತದೆ. ಆರೋಪಿಗಳಿಗೆ ಮಾದಕ ವಸ್ತು ಗಾಂಜಾವನ್ನು ಪೂರೈಕೆ ಮಾಡುತ್ತಿದ್ದ ಒರಿಸ್ಸಾ ಮೂಲದ ದೀಪಕ್ ಪಾತ್ರ (37) ಎಂಬಾತನನ್ನು ಪುತ್ತೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಪ್ರಮೋದ್ ಕುಮಾರ್ ನೇತೃತ್ವದಲ್ಲಿ ತನಿಖಾ ತಂಡವು ಒರಿಸ್ಸಾ ರಾಜ್ಯಕ್ಕೆ ತೆರಳಿ ದಸ್ತಗಿರಿ ಮಾಡಿದೆ. ಈ ವೇಳೆ ಆತನಿಂದ ರೂ. 80,000/- ಮೌಲ್ಯದ 1 ಕೆ.ಜಿ 788 ಗ್ರಾಂ ಗಾಂಜಾವನ್ನು ವಶಕ್ಕೆ ಪಡೆಯಲಾಗಿದೆ.
ಸದ್ರಿ ಕಾರ್ಯಾಚರಣೆಯಲ್ಲಿ ಪುತ್ತೂರು ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಪ್ರಮೋದ್ ಕುಮಾರ್, ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ಪೊಲೀಸ್ ಉಪ ನಿರೀಕ್ಷಕರಾದ ಗುಣಪಾಲ ಜೆ ಹಾಗೂ ಸಿಬ್ಬಂದಿಗಳಾದ ದೇವರಾಜ್, ಹರ್ಷಿತ್, ಪ್ರಶಾಂತ್, ಅದ್ರಾಮ, ಪ್ರಶಾಂತ್ ರೈ, ಪ್ರವೀಣ್ ರೈ, ಸುಬ್ರಮಣಿ, ಭೀಮಸೇನ್, ಸುರೇಶ ಹಾಗೂ ದಿವ್ಯಾಪ್ರಕಾಶ್ ಅವರನ್ನು ಒಳಗೊಂಡ ತಂಡ ಭಾಗಿಯಾಗಿರುತ್ತದೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am