ಬ್ರೇಕಿಂಗ್ ನ್ಯೂಸ್
07-02-26 10:48 pm HK News Desk ಕ್ರೈಂ
ಬೆಂಗಳೂರು, ಫೆ.7: ನಗರದ ಸೋಲದೇವನಹಳ್ಳಿ ಠಾಣೆ ವ್ಯಾಪ್ತಿಯ ಒಂದೇ ಕುಟುಂಬದ ನಾಲ್ಕು ಮಂದಿ ಬಿಹಾರದ ನಲಂದಾ ಜಿಲ್ಲೆಯ ಧರ್ಮಶಾಲೆಯೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕೆಲವು ತಿಂಗಳ ಹಿಂದೆ ಫ್ರೀಫೈರ್ ವಿಡಿಯೋ ಗೇಮ್ ಅಡಿಕ್ಟ್ ಆಗಿದ್ದ ತನ್ನ ಅಕ್ಕನ ಮಗನನ್ನು ಕೊಲೆ ಮಾಡಿ ಜೈಲು ಸೇರಿದ್ದ ನಾಗಪ್ರಸಾದ್ ಸೇರಿ ನಾಲ್ವರು ಸಾವಿಗೆ ಶರಣಾಗಿದ್ದಾರೆ.
ಮೃತರನ್ನು ಸುಮಂಗಲ (78), ಅವರ ಪುತ್ರಿಯರಾದ ಶಿಲ್ಪಾ (48) ಮತ್ತು ಶ್ರುತಾ ಜಿ.ಬಿ. (43) ಮತ್ತು ಮಗ ನಾಗಪ್ರಸಾದ್ (50) ಎಂದು ಗುರುತಿಸಲಾಗಿದೆ. ಇವರು ತುಮಕೂರು ಜಿಲ್ಲೆಯ ಗುಬ್ಬಿ ಮೂಲದ ಜೈನ ಸಂಪ್ರದಾಯದ ನಿವಾಸಿಗಳಾಗಿದ್ದು, ಕೆಲವು ವರ್ಷಗಳಿಂದ ಬೆಂಗಳೂರಿನ ಸೋಲದೇವನಹಳ್ಳಿ ವ್ಯಾಪ್ತಿಯಲ್ಲಿ ವಾಸವಾಗಿದ್ದರು.
ಫ್ರೀಫೈರ್ ಗೇಮ್ ಚಟಕ್ಕೆ ಬಿದ್ದು ಹಣಕ್ಕಾಗಿ ಪೀಡಿಸುತ್ತಿದ್ದ ಅಕ್ಕನ ಮಗ ಅಮೋಘ ಕೀರ್ತಿಯನ್ನು ಮಾವ ನಾಗಪ್ರಸಾದ್ ಕಳೆದ ವರ್ಷ ಆಗಸ್ಟ್ 8ರಂದು ಕತ್ತು ಸೀಳಿ ಕೊಲೆ ಮಾಡಿದ್ದ ಘಟನೆ ನಡೆದಿತ್ತು. ಬಾಲಕನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಘಟನೆಯ ಬಳಿಕ ಮೆಜೆಸ್ಟಿಕ್‌ನಲ್ಲಿ ಮೂರು ದಿನ ತಂಗಿದ್ದ ನಾಗಪ್ರಸಾದ್, ನಂತರ ಸೋಲದೇವನಹಳ್ಳಿ ಪೊಲೀಸ್ ಠಾಣೆಗೆ ಸರೆಂಡರ್ ಆಗಿದ್ದ. ಪೊಲೀಸರು ಆತನ ಮೇಲೆ ಎಫ್ಐಆರ್ ದಾಖಲಿಸಿ ಜೈಲಿಗಟ್ಟಿದ್ದರು. ಬಳಿಕ ಆತನ ತಂಗಿ ಶಿಲ್ಪಾನೇ ಮಗ ಹೇಗೂ ಹೋದ, ಅಣ್ಣನಾದ್ರೂ ಜೊತೆಗಿರಲಿ ಎಂದು ಜಾಮೀನು ಕೊಡಿಸಿ ಜೈಲಿನಿಂದ ಹೊರ ತಂದಿದ್ದಳು.
ಅಕ್ಕನ ಮಗ ಅಮೋಘ ಕೀರ್ತಿಯನ್ನು ಕೊಂದ ಪಾಪ ಪರಿಹಾರಕ್ಕಾಗಿ ಇಡೀ ಕುಟುಂಬ ಕೆಲವು ತಿಂಗಳಿಂದ ದೇವಾಲಯಗಳಿಗೆ ಭೇಟಿ ನೀಡುತ್ತಿತ್ತು ಎಂದು ತಿಳಿದುಬಂದಿದೆ. ಆನಂತರ, ಉತ್ತರ ಭಾರತದ ವಿವಿಧ ಕಡೆಗೆ ತೆರಳಿ ಬಿಹಾರಕ್ಕೆ ತಲುಪಿದ್ದರು. ಅಲ್ಲಿ ಜೈನ ಮತಸ್ಥರ ಧರ್ಮಶಾಲೆಯಲ್ಲಿ ತಂಗಿದ್ದಾಗ ಸಾವಿಗೆ ಶರಣಾಗಿದ್ದಾರೆ. ಮೃತ ಶರೀರಗಳ ಬಳಿ ನಿದ್ದೆ ಮಾತ್ರೆಗಳು ಸಿಕ್ಕಿದ್ದು, ಮಾತ್ರೆಗಳ ಓವರ್ ಡೋಸ್ನಿಂದಲೇ ಕುಟುಂಬ ಮೃತಪಟ್ಟಿದೆ ಎನ್ನಲಾಗಿದೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am