ಬ್ರೇಕಿಂಗ್ ನ್ಯೂಸ್
18-02-26 01:52 pm Udupi Staffer ಕ್ರೈಂ
ಉಡುಪಿ, ಫೆ.18: ಮಲ್ಪೆಯಲ್ಲಿ ಭಾರತೀಯ ನೌಕಾಪಡೆಯ ರಹಸ್ಯ ಮಾಹಿತಿಗಳನ್ನು ಪಾಕಿಸ್ತಾನಕ್ಕೆ ರವಾನಿಸುತ್ತಿದ್ದ ಗಂಭೀರ ಆರೋಪದಲ್ಲಿ ಮತ್ತೊಬ್ಬ ಆರೋಪಿಯನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.
ಮಲ್ಪೆ ಬಂದರಿನಲ್ಲಿರುವ ಕೊಚ್ಚಿನ್ ಶಿಪ್ ಯಾರ್ಡ್ ಘಟಕದಲ್ಲಿ ಕೆಲಸ ಮಾಡುತ್ತಿದ್ದ ಕೆಲ ನೌಕರರು ಭಾರತೀಯ ನೌಕಾಪಡೆಯ ಹಡಗುಗಳ ಸಂಖ್ಯೆ, ಚಲನವಲನ ಮತ್ತು ತಾಂತ್ರಿಕ ಮಾಹಿತಿಗಳನ್ನು ರಹಸ್ಯ ದಾಖಲೆಗಳಾಗಿ ವಾಟ್ಸ್ಆ್ಯಪ್ ಹಾಗೂ ಫೇಸ್ಬುಕ್ ಮೂಲಕ ಪಾಕಿಸ್ತಾನದಲ್ಲಿರುವ ಕೆಲವು ಸಂಪರ್ಕ ಸಂಖ್ಯೆಗಳಿಗೆ ಹಂಚಿಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಬಂಧಿತನನ್ನು ಪಶ್ಚಿಮ ಬಂಗಾಳ ಮೂಲದ 21 ವರ್ಷದ ಆಲಿಫ್ ಇಸ್ಲಾಂ ಎಂದು ಗುರುತಿಸಲಾಗಿದೆ. ಆತ ಪ್ರಸ್ತುತ ಕೇರಳದ ಇಡುಕ್ಕಿ ಜಿಲ್ಲೆಯ ಮರಾಯು ಪ್ರದೇಶದಲ್ಲಿ ವಾಸಿಸುತ್ತಿದ್ದು ಈತ ಬಾಂಗ್ಲಾದೇಶ ಮೂಲದವನು ಆಗಿರಬಹುದೆಂಬ ಅನುಮಾನವನ್ನೂ ಪೊಲೀಸರು ವ್ಯಕ್ತಪಡಿಸಿದ್ದಾರೆ. ಅವನ ಪೌರತ್ವದ ಬಗ್ಗೆ ಪೊಲೀಸರು ತನಿಖೆ ನಡೆಸಿದ್ದಾರೆ.
ಪ್ರಕರಣದಲ್ಲಿ 2025ರ ನವೆಂಬರ್ ಹಾಗೂ ಡಿಸೆಂಬರ್ ತಿಂಗಳಲ್ಲಿ ಗುಜರಾತ್ ಮೂಲದ ಹಿರೇಂದ್ರ ಕುಮಾರ್ ಹಾಗೂ ಉತ್ತರ ಪ್ರದೇಶ ಮೂಲದ ರೋಹಿತ್ ಮತ್ತು ಸಂತ್ರಿ ಎಂಬವರನ್ನು ಬಂಧಿಸಲಾಗಿತ್ತು. ಇವರು ಗುತ್ತಿಗೆ ಆಧಾರದಲ್ಲಿ ಸುಷ್ಮಾ ಮೆರೀನ್ ಪ್ರೈವೇಟ್ ಲಿಮಿಟೆಡ್ ಮೂಲಕ ಕೊಚ್ಚಿನ್ ಶಿಪ್ ಯಾರ್ಡ್ನಲ್ಲಿ ಕೆಲಸ ಮಾಡುತ್ತಿದ್ದರು. ಇದೀಗ ನಾಲ್ಕನೇ ಆರೋಪಿ ಬಂಧನದೊಂದಿಗೆ ಪ್ರಕರಣ ಮತ್ತಷ್ಟು ಗಂಭೀರ ಸ್ವರೂಪ ಪಡೆದುಕೊಂಡಿದೆ.
ಆರೋಪಿಗಳು ಕಳೆದ ಒಂದೂವರೆ ವರ್ಷಗಳಿಂದ ಹಡಗುಗಳಿಗೆ ಸಂಬಂಧಿಸಿದ ರಹಸ್ಯ ಮಾಹಿತಿಗಳನ್ನು ವಾಟ್ಸ್ಆ್ಯಪ್ ಮೂಲಕ ಪಾಕಿಸ್ತಾನದಲ್ಲಿದ್ದ ಸಂಪರ್ಕ ಸಂಖ್ಯೆಗೆ ಕಳುಹಿಸುತ್ತಿದ್ದರು ಎಂಬುದು ತನಿಖೆಯಲ್ಲಿ ಪತ್ತೆಯಾಗಿದೆ. ಮಾಹಿತಿ ಹಂಚಿಕೆಗಾಗಿ ಹಣ ವ್ಯವಹಾರ ನಡೆದಿರುವ ಸುಳಿವೂ ಪೊಲೀಸರಿಗೆ ಲಭಿಸಿದೆ. ಕೊಚ್ಚಿನ್ ಶಿಪ್ ಯಾರ್ಡ್ನ ಸಿಇಒ ನೀಡಿದ ದೂರಿನ ಮೇರೆಗೆ ಉಡುಪಿ ಪೊಲೀಸರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ದೇಶದ ಸಾರ್ವಭೌಮತೆಗೆ ಧಕ್ಕೆ ತರುವ ಮತ್ತು ಗೌಪ್ಯ ಮಾಹಿತಿ ಮಾರಾಟ ನಡೆಸಿದ ಆರೋಪಗಳಡಿ ಪ್ರಕರಣ ದಾಖಲಿಸಲಾಗಿದೆ.
ಪ್ರಕರಣದ ಗಂಭೀರತೆಯನ್ನು ಗಮನಿಸಿ ರಾಷ್ಟ್ರೀಯ ಮಟ್ಟದ ತನಿಖಾ ಸಂಸ್ಥೆಗಳು ಕೂಡ ಈ ಪ್ರಕರಣದಲ್ಲಿ ಕೈಜೋಡಿಸುವ ಸಾಧ್ಯತೆ ಇದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ತಿಳಿಸಿದ್ದಾರೆ. ಇನ್ನೂ ಒಬ್ಬ ಪ್ರಮುಖ ಆರೋಪಿ ಹಾಗೂ ಮಾಹಿತಿ ರವಾನಿಸಲು ಬಳಸಿದ ಫೇಸ್ಬುಕ್ ಪೇಜ್ನ ಆಡ್ಮಿನ್ ಬಂಧನ ಬಾಕಿಯಿದ್ದು, ಅವರ ಶೋಧ ಕಾರ್ಯ ತೀವ್ರಗೊಂಡಿದೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am