ಬ್ರೇಕಿಂಗ್ ನ್ಯೂಸ್
18-02-26 07:10 pm HK News Desk ಕ್ರೈಂ
ಹಾಸನ, ಫೆ 18: ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಕೆಎಸ್ಆರ್ಟಿಸಿ ಚಾಲಕನನ್ನು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಆಲೂರು ತಾಲೂಕಿನ ರಾಜನಹಳ್ಳಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.
ಸಾರಿಗೆ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ವೀರಪ್ಪ (58) ಕೊಲೆಯಾದ ವ್ಯಕ್ತಿ. ಕುಟುಂಬ ಸದಸ್ಯರ ಪ್ರಕಾರ, ದಾಯಾದಿಗಳ ನಡುವೆ ಆಸ್ತಿ ವಿವಾದ ನಡೆಯುತ್ತಿದ್ದು, ಇದೇ ಕಾರಣಕ್ಕೆ ಹತ್ಯೆ ನಡೆದಿರುವ ಶಂಕೆ ವ್ಯಕ್ತಪಡಿಸಿದ್ದಾರೆ. ಮಂಗಳವಾರ ಆಲೂರಿನಲ್ಲಿ ಕೋರ್ಟ್ ವಿಚಾರಣೆಗೆ ಹಾಜರಾಗಿ ಬಳಿಕ ತಮ್ಮ ಜಮೀನಿನ ಕಡೆಗೆ ಬಂದಿದ್ದ ವೀರಪ್ಪ ಅವರನ್ನ ದುಷ್ಕರ್ಮಿಗಳು ಹಿಂಬಾಲಿಸಿ ಹಲ್ಲೆ ನಡೆಸಿದ್ದಾರೆ. ಬಳಿಕ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ ಎಂದು ತಿಳಿಸಿದ್ದಾರೆ.
ಕೋರ್ಟ್ ಕೇಸ್ ಮುಗಿಸಿ ಬಂದ ಸಂಜೆಯೇ ಹತ್ಯೆ:
ಮೃತ ವೀರಪ್ಪ ಕೆಎಸ್ಆರ್ಟಿಸಿ ಹಾಸನ ಡಿಪೋದಲ್ಲಿ ಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದು, ನಿವೃತ್ತಿ ಹೊಂದುವ ಹಂತದಲ್ಲಿದ್ದರು. ಕೆಲ ವರ್ಷಗಳ ಹಿಂದೆ ವೀರಪ್ಪನ ಚಿಕ್ಕಪ್ಪ ಬಾಗಲಯ್ಯ ತನ್ನ 2 ಎಕರೆ ಆಸ್ತಿಯನ್ನು ಅವರಿಗೆ ಕೊಡುವುದಾಗಿ ದಾನಪತ್ರ ನೀಡಿದ್ದರು. ಚಿಕ್ಕಪ್ಪನ ನಿಧನದ ಬಳಿಕ ಆ ಆಸ್ತಿ ವೀರಪ್ಪನ ಹೆಸರಿಗೆ ರಿಜಿಸ್ಟರ್ ಆಗಿತ್ತು. ಆದರೆ ಆತನ ಮಕ್ಕಳಾದ ಮಲ್ಲಮ್ಮ ಹಾಗೂ ಮಹದೇವಮ್ಮ ಮತ್ತು ಅವರ ಕುಟುಂಬಸ್ಥರು ಆಸ್ತಿ ಹಂಚಿಕೆ ವಿಚಾರವಾಗಿ ನ್ಯಾಯಾಲಯದ ಮೆಟ್ಟಿಲೇರಿದ್ದರು. ಈ ಹಿನ್ನೆಲೆ ಮಂಗಳವಾರ ಆಲೂರು ಜೆಎಂಎಫ್ಸಿ ನ್ಯಾಯಾಲಯದಲ್ಲಿ ನಡೆದ ವಿಚಾರಣೆಗೆ ವೀರಪ್ಪ ಹಾಜರಾಗಿದ್ದರು. ವಿಚಾರಣೆಗೆ ಹಾಜರಾದ ನಂತರ ಜಮೀನಿನ ಕಡೆ ಹೋದ ವೀರಪ್ಪ ಅವರನ್ನು ದಾಯಾದಿಗಳೇ ಸಂಜೆ ಕೊಲೆ ಮಾಡಿ ಪೆಟ್ರೋಲ್ ಸುರಿದು ಸುಟ್ಟು ಹಾಕಿದ್ದಾರೆ ಎಂದು ಸಂಬಂಧಿಕರು ಆರೋಪಿಸಿದ್ದಾರೆ.
ಪೊಲೀಸ್ ತನಿಖೆ ಆರಂಭ:
ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ಅಧೀಕ್ಷಕಿ ಶುಭಾನ್ವಿತ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವೀರಪ್ಪ ಅವರ ಪುತ್ರ ವಿವೇಕ್, ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ವಿವೇಕ್ ಬೆಂಗಳೂರಿನಲ್ಲಿ ಸಾಫ್ಟ್ವೇರ್ ಇಂಜಿನಿಯರ್ ಆಗಿದ್ದಾರೆ. ವೀರಪ್ಪ ಅವರ ಮೃತದೇಹ ಸಂಪೂರ್ಣ ಸುಟ್ಟು ಹೋಗಿದೆ. ಪೊಲೀಸರು ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಆರೋಪಿಗಳ ಬಂಧನಕ್ಕಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ.
ವೀರಪ್ಪ ಹತ್ಯೆ ಪ್ರಕರಣದಲ್ಲಿ, ಮಲ್ಲಮ್ಮ, ಮಹದೇವಮ್ಮ, ಹರೀಶ, ಲೋಕೇಶ, ಮಹದೇವ, ಬಾಗಲಯ್ಯ, ಸತೀಶ, ಜಯರಾಮ, ಧರ್ಮ, ಸ್ವಾಮಿ ಎಂಬ 10 ಮಂದಿ ವಿರುದ್ಧ ಆಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am