ಬ್ರೇಕಿಂಗ್ ನ್ಯೂಸ್
18-02-26 09:16 pm Mangaluru Staffer ಕ್ರೈಂ
ಮಂಗಳೂರು, ಫೆ.18: ದೇರಳಕಟ್ಟೆ ಗ್ಯಾಂಗ್ ರೇಪ್ ಪ್ರಕರಣದ ಪ್ರಮುಖ ಆರೋಪಿ ಮತ್ತು ಮಂಗಳೂರು, ಉಡುಪಿ ಸೇರಿ ಸುಮಾರು 31 ಪ್ರಕರಣಗಳಲ್ಲಿ ಆರೋಪಿಯಾಗಿದ್ದು, 9 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ನಟೋರಿಯಸ್ ರೌಡಿಶೀಟರ್ ಮೂಲ್ಕಿ ಮೂಲದ ಸಫ್ವಾನ್ ಹುಸೇನ್ (42) ಎಂಬಾತನನ್ನು ಮಂಗಳೂರಿನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2008ರಲ್ಲಿ ನಡೆದಿದ್ದ ಪ್ರವೀಣ್ ಅಪಹರಣ, ದರೋಡೆ ಮತ್ತು ಕೊಲೆ ಪ್ರಕರಣದಲ್ಲಿ 2020ರಲ್ಲಿ ಸಫ್ವಾನ್ ಗೆ ಜೀವಾವಧಿ ಶಿಕ್ಷೆಯಾಗಿತ್ತು. ಇದಲ್ಲದೆ, ಕಾರ್ಕಳ ಠಾಣೆ ವ್ಯಾಪ್ತಿಯಲ್ಲಿ 2008ರಲ್ಲಿ ನಡೆದ ದರೋಡೆ ಪ್ರಕರಣದಲ್ಲಿ ಮೂರು ವರ್ಷಗಳ ಶಿಕ್ಷೆಗೆ ಗುರಿಯಾಗಿದ್ದ. ಆದರೆ ಮುಲ್ಕಿ ಹಳೆಯಂಗಡಿ ನಿವಾಸಿಯಾಗಿರುವ ಸಫ್ವಾನ್ 2017ರಲ್ಲಿ ಸುರತ್ಕಲ್ ಠಾಣೆ ವ್ಯಾಪ್ತಿಯಲ್ಲಿ ಲೆಫ್ಸಿ ಸಫ್ವಾನ್ ಎಂಬಾತನನ್ನು ಅಪಹರಿಸಿ ಹಲ್ಲೆ ನಡೆಸಿ ಕೊಲೆಗೈದು ಆಗುಂಬೆ ಘಾಟಿಯಲ್ಲಿ ಎಸೆದ ಕೃತ್ಯದ ಬಳಿಕ ತಲೆಮರೆಸಿಕೊಂಡಿದ್ದ.

ಬಳಿಕ ಆಂಧ್ರಪ್ರದೇಶದ ರಾಯ್ ಚೋಟಿ ಪ್ರದೇಶದಲ್ಲಿ ತನ್ನ ಹೆಸರನ್ನು ಉಮ್ಮರ್ ಮೊಹಮ್ಮದ್ ನಾಸಿರ್ ಎಂದು ಬದಲಿಸಿಕೊಂಡು ನಕಲಿ ಆಧಾರ್ ಕಾರ್ಡ್, ಪಾಸ್ಪೋರ್ಟ್ ಮಾಡಿಸಿಕೊಂಡು 2018ರಲ್ಲಿ ವಿದೇಶಕ್ಕೆ ಪರಾರಿಯಾಗಿ ತಲೆಮರೆಸಿಕೊಂಡಿದ್ದ. ಈ ವೇಳೆ, ಮಂಗಳೂರು ಮೂಲದ ಮುಸ್ಲಿಂ ಉದ್ಯಮಿಗಳನ್ನು ಬೆದರಿಸಿ ಹಣ ವಸೂಲಿ ಮಾಡುತ್ತಿದ್ದ ಬಗ್ಗೆ ದೂರುಗಳು ಕೇಳಿಬಂದಿದ್ದವು. ಇದರಂತೆ ಮಂಗಳೂರು ಸಿಸಿಬಿ ಪೊಲೀಸರು ಸಫ್ವಾನ್ ಬಂಧನಕ್ಕಾಗಿ ಬಲೆ ಬೀಸಿದ್ದರು.
ಇದರ ನಡುವೆ, ಆಂಧ್ರಕ್ಕೆ ಬಂದು ಹೋಗುತ್ತಿದ್ದ ಬಗ್ಗೆ ಮಾಹಿತಿ ಪಡೆದು ಸಿಸಿಬಿ ಪೊಲೀಸರು ಅಲ್ಲಿನ ರಾಯ್ ಚೋಟಿ ಎಂಬಲ್ಲಿಗೆ ತೆರಳಿ ವಶಕ್ಕೆ ಪಡೆದಿದ್ದಾರೆ. ಈತನಿಗೆ ತಲೆಮರೆಸಿಕೊಳ್ಳಲು ನಕಲಿ ದಾಖಲೆ, ಪಾಸ್ಪೋರ್ಟ್ ಮಾಡಿಸಲು ಸಹಕರಿಸಿದ ವ್ಯಕ್ತಿಗಳನ್ನು ಕೂಡ ವಶಕ್ಕೆ ಪಡೆಯಲಾಗುವುದು ಎಂದು ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ತಿಳಿಸಿದ್ದಾರೆ.

ಸಫ್ವಾನ್ ವಿರುದ್ಧ ಮಂಗಳೂರು ಮತ್ತು ಉಡುಪಿ ಜಿಲ್ಲೆಯಲ್ಲಿ ಒಟ್ಟು 31 ಪ್ರಕರಣಗಳು ದಾಖಲಾಗಿದ್ದು, ಆರು ಪ್ರಕರಣಗಳಲ್ಲಿ ಘೋಷಿತ ಅಪರಾಧಿ ಆಗಿದ್ದಾನೆ. ಇದಲ್ಲದೆ, 13 ಪ್ರಕರಣಗಳು ವಿಚಾರಣೆಗೆ ಬಾಕಿಯಿದ್ದು, ದೇರಳಕಟ್ಟೆ ಗ್ಯಾಂಗ್ ರೇಪ್ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದು ಈತನನ್ನು ಹೊರತುಪಡಿಸಿ ಟ್ರಯಲ್ ಆಗುತ್ತಿತ್ತು. ಈಗ ಈತನನ್ನು ಒಳಗೊಂಡು ವಿಚಾರಣೆ ಆರಂಭವಾಗಲಿದೆ. ವಿದೇಶದಲ್ಲಿ ಡ್ರೈವರ್ ಆಗಿ ಕೆಲಸ ಮಾಡುವುದರ ಜೊತೆಗೆ ಹಣಕ್ಕಾಗಿ ಉದ್ಯಮಿಗಳನ್ನು ಪೀಡಿಸುತ್ತಿದ್ದ ಎನ್ನುವ ಮಾಹಿತಿ ಇದೆ.
ಈ ಹಿಂದೆ ಉಳ್ಳಾಲದಲ್ಲಿ ಸಕ್ರಿಯವಾಗಿದ್ದ ಟಾರ್ಗೆಟ್ ಗ್ಯಾಂಗಿನ ಸದಸ್ಯ ಇಲ್ಯಾಸ್ ಮೇಲೆ ಹಲ್ಲೆ ನಡೆಸಿದ್ದ ಪ್ರಕರಣವೂ ಈತನ ಮೇಲಿದೆ. ಹಿಂದು- ಮುಸ್ಲಿಂ ಅಂತ ಎಲ್ಲರನ್ನೂ ಪೀಡಿಸಿ ಹಣ ಪಡೆಯುವುದು, ಕೊಲೆ ಮಾಡಿರುವುದು ಈತನ ಚರಿತ್ರೆ ಇದೆ. ಈತನ ಬಗ್ಗೆ ಮಾಹಿತಿ ಕಲೆಹಾಕಿ ಪೊಲೀಸರು ಬಂಧನ ಮಾಡಿದ್ದಾರೆ. ಈಗಾಗಲೇ ಜೀವಾವಧಿ ಶಿಕ್ಷೆ ಆಗಿರುವುದರಿಂದ ಜೈಲಿಗೆ ಹಾಕಲಾಗುವುದು ಎಂದು ಕಮಿಷನರ್ ತಿಳಿಸಿದ್ದಾರೆ.
Join our WhatsApp Group for regular news updates and exclusive stories from Headline Karnataka:
https://t.ly/yCmFN
The Mangaluru City Crime Branch (CCB) has arrested notorious rowdy-sheeter Safwan Hussain (42), a key accused in the Deralakatte gang rape case and several other serious crimes, after he evaded arrest for nearly nine years. Safwan, a native of Mulki, is accused in around 31 criminal cases across Mangaluru and Udupi districts, including murder, kidnapping, robbery, and extortion. He had been declared a proclaimed offender in six cases.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am