ಬ್ರೇಕಿಂಗ್ ನ್ಯೂಸ್
20-02-26 11:31 am Mangalore Correspondent ಕ್ರೈಂ
ಪುತ್ತೂರು, ಫೆ.20: ಪುತ್ತೂರು ಕಡೆಯಿಂದ ಸುಳ್ಯಕ್ಕೆ ಅಕ್ರಮವಾಗಿ MDMA ಮಾದಕ ವಸ್ತು ಸಾಗಾಟ ಮಾಡುತ್ತಿದ್ದ ವಾಹನವನ್ನು ತಡೆದ ಪುತ್ತೂರು ಪೊಲೀಸರು ಕೇರಳ ಮೂಲದ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಕೇರಳದ ಕೋಝಿಕೋಡ್ ನಿವಾಸಿಗಳಾದ ಮಹಮ್ಮದ್ ಅಜ್ಮಲ್ (30), ಸಂಶೀರ್ (27), ವಯನಾಡ್ ಜಿಲ್ಲೆಯ ಮೂಲದ ಇಸ್ಮಾಯಿಲ್ (28) ಬಂಧಿತರು. ವಾಹನದಲ್ಲಿ ಮಾರಾಕಾಯುಧ ತಲವಾರನ್ನು ಇಟ್ಟುಕೊಂಡು, ಸುಮಾರು 5,38,800 ರೂ. ಮೌಲ್ಯದ 53.58 ಗ್ರಾಂ MDMA ನಿಷೇದಿತ ಮಾದಕ ವಸ್ತುವನ್ನು ಮಾರಾಟ ಮಾಡಲು ಒಯ್ಯುತ್ತಿರುವುದು ಪತ್ತೆಯಾಗಿದೆ.
ಆರೋಪಿಗಳಿಂದ ಒಂದು ಕಾರು, ಮಾರಕಾಸ್ತ್ರ, ಮೊಬೈಲ್ಗಳು ಹಾಗೂ ನಗದು ರೂ. 10,000/- ವಶಪಡಿಸಿ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಅ.ಕ್ರ 25/2026 ಕಲಂ 8C, 22(C), 29 NDPS Act 1985 & ಕಲಂ: 25(1B)(B) Arms Act ನಂತೆ ಪ್ರಕರಣ ದಾಖಲಿಸಲಾಗಿದೆ. ಸದ್ರಿ ಆರೋಪಿಗಳು ಕೇರಳ ,ಗೋವಾ, ಹಾಗೂ ಕರ್ನಾಟಕ ರಾಜ್ಯಗಳಿಗೆ ಮಾದಕ ವಸ್ತುವನ್ನು ಸರಬರಾಜು ಮಾಡುತ್ತಿದ್ದು, ಕೇರಳ ರಾಜ್ಯದ ಕೋಝಿಕೋಡು, ಕಣ್ಣೂರು, ವಯನಾಡ್ ಜಿಲ್ಲೆಗಳಲ್ಲಿ ಪ್ರಕರಣ ದಾಖಲಾಗಿದ್ದು ತಲೆಮರೆಸಿಕೊಂಡಿದ್ದರು. ಅಲ್ಲದೆ ಮುಹಮ್ಮದ್ ಅಜ್ಮಲ್ ಸಿ @ ಅಜ್ಜು ಎಂಬಾತನು ಇತ್ತೀಚೆಗೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ದಾಖಲಾದ ಅ.ಕ್ರ: 04/2026 ಕಲಂ 8C, 21(b),NDPS Act 1985 ರ ಪ್ರಕರಣದ ಆರೋಪಿ. ಅಜ್ಮಲ್ ಸಹಚರನಾದ ಇಸ್ಮಾಯಿಲ್ ಮೇಲೆ ಕೋಝಿಕೋಡು ಜಿಲ್ಲೆಯಲ್ಲಿ ಮಾದಕ ವಸ್ತು ಸಾಗಾಟದ ಪ್ರಕರಣ ದಾಖಲಾಗಿದೆ.
ಪತ್ತೆ ಕಾರ್ಯದಲ್ಲಿ ಪುತ್ತೂರು ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಪ್ರಮೋದ್ ಕುಮಾರ್, ಪುತ್ತೂರು ಗ್ರಾಮಾಂತರ ಠಾಣಾ ಪ್ರಭಾರ ಪೊಲೀಸ್ ನಿರೀಕ್ಷಕರಾದ ಸುನಿಲ್ ಕುಮಾರ್, ದ.ಕ ಜಿಲ್ಲಾ ಡಿ.ಎಸ್.ಬಿ ವಿಭಾಗದ ಪೊಲೀಸ್ ನಿರೀಕ್ಷಕರಾದ ನಂದ ಕುಮಾರ್, ಪುತ್ತೂರು ಗ್ರಾಮಾಂತರ ಠಾಣಾ ಉಪ ನಿರೀಕ್ಷಕರಾದ ಗುಣಪಾಲ ಹಾಗೂ ಸುಶ್ಮಾ ಜೆ ಭಂಡಾರಿ ಹಾಗೂ ವಿಶೇಷ ತಂಡದ ಸಿಬ್ಬಂದಿಗಳಾದ ಅದ್ರಾಮ, ಪ್ರಶಾಂತ್ ರೈ, ಪ್ರಶಾಂತ್ ಎಂ, ಪ್ರವೀಣ್ ರೈ, ಹರ್ಷಿತ್ ಹಾಗೂ ಪುತ್ತೂರು ಗ್ರಾಮಾಂತರ ಠಾಣಾ ಸಿಬ್ಬಂಧಿಗಳಾದ ಪರಮೇಶ್ವರ ಗೌಡ, ಹರೀಶ್, ಸುಬ್ರಹ್ಮಣ್ಯ, ಬೀಮಸೇನ್, ಭವಿತ್ ರೈ, ನಾಗಾರಾಜ್, ಕಾರ್ತಿಕ್ ಜಿಲ್ಲಾ ಗಣಕ ಯಂತ್ರ ಸಿಬ್ಬಂದಿಗಳಾದ ದಿವಾಕರ್, ಸಂಪತ್ ಮತ್ತು ಗೃಹ ರಕ್ಷಕ ಸಿಬ್ಬಂದಿಗಳು ಕಾರ್ಯ ನಿರ್ವಹಿಸಿರುತ್ತಾರೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am