ಬ್ರೇಕಿಂಗ್ ನ್ಯೂಸ್
20-02-26 08:44 pm mangalore ಕ್ರೈಂ
ಬೆಂಗಳೂರು, ಫೆ.20 ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣದ ವಿರುದ್ಧ ಧ್ವನಿ ಎತ್ತಿ ಸಿಎಂ ಸಿದ್ದರಾಮಯ್ಯ ಅವರನ್ನೇ ಕಟಕಟೆಯಲ್ಲಿ ನಿಲ್ಲುವಂತೆ ಮಾಡಿದ್ದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸರ್ಕಾರದ ಉನ್ನತ ಅಧಿಕಾರಿಗಳ ವಿರುದ್ಧ ದೂರು ನೀಡಿ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದ ಸ್ನೇಹಮಯಿ ಕೃಷ್ಣ ಅವರನ್ನು ಬೆಂಗಳೂರು ಸಿಸಿಬಿ ಪೊಲೀಸರು ಶುಕ್ರವಾರ ವಶಕ್ಕೆ ಪಡೆದಿದ್ದಾರೆ. ನಗರದ ಸಿಟಿ ಸಿವಿಲ್ ಕೋರ್ಟ್ ಬಳಿ ಕೃಷ್ಣ ಅವರನ್ನು ಪೊಲೀಸರು ನಾಟಕೀಯವಾಗಿ ವಶಕ್ಕೆ ಪಡೆದಿದ್ದು, ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಆಯುಕ್ತ ಡಿ.ಬಿ. ನಟೇಶ್ ನೀಡಿದ ದೂರಿನ ಮೇರೆಗೆ ಸಿಸಿಬಿ ಬಂಧನ ಕ್ರಮ ಕೈಗೊಂಡಿದೆ. ಡಿ.ಬಿ. ನಟೇಶ್ ಅವರು ತಮಗೆ ಮುಂಬಡ್ತಿ ನೀಡುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಸುಮಾರು 1.60 ಕೋಟಿ ರೂಪಾಯಿ ಲಂಚ ನೀಡಿದ್ದಾರೆ ಎಂದು ಸ್ನೇಹಮಯಿ ಕೃಷ್ಣ ಸಾರ್ವಜನಿಕವಾಗಿ ಆರೋಪಿಸಿದ್ದರು. ಈ ಕುರಿತು ಹೇಳಿಕೆಗಳನ್ನು ನೀಡುವ ಮೂಲಕ ತಮ್ಮ ವ್ಯಕ್ತಿತ್ವಕ್ಕೆ ಕಳಂಕ ತರಲಾಗುತ್ತಿದೆ ಎಂದು ನಟೇಶ್ ಅವರು ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದರು. 'ನಾನು ಯಾವುದೇ ಹಣ ನೀಡಿಲ್ಲ, ಕೃಷ್ಣ ಅವರು ಮಾಡಿರುವ ಆರೋಪಗಳು ಸಂಪೂರ್ಣ ಸುಳ್ಳು ಮತ್ತು ಆಧಾರ ರಹಿತ' ಎಂದು ನಟೇಶ್ ದೂರಿನಲ್ಲಿ ತಿಳಿಸಿದ್ದರು. ದೂರನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು, ಪ್ರಕರಣವನ್ನು ಸಿಸಿಬಿಗೆ ವರ್ಗಾಯಿಸಿದ್ದರು.
ಸ್ನೇಹಮಯಿ ಕೃಷ್ಣ ಅವರು ಶುಕ್ರವಾರ ಕೆಲಸದ ನಿಮಿತ್ತ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್‌ಗೆ ಆಗಮಿಸಿದ್ದರು. ಈ ಬಗ್ಗೆ ಮುನ್ಸೂಚನೆ ಪಡೆದಿದ್ದ ಸಿಸಿಬಿ ಪೊಲೀಸರು, ಕೋರ್ಟ್ ಆವರಣದ ಬಳಿಯೇ ಅವರನ್ನು ವಶಕ್ಕೆ ಪಡೆದಿದ್ದಾರೆ. ಹಠಾತ್ ನಡೆದ ಈ ಬೆಳವಣಿಗೆಯಿಂದ ಕೋರ್ಟ್ ಆವರಣದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am