ಬ್ರೇಕಿಂಗ್ ನ್ಯೂಸ್
21-02-26 04:29 pm HK News Desk ಕ್ರೈಂ
ಬೆಂಗಳೂರು, ಫೆ.21: ಭಯೋತ್ಪಾದಕ ಸಂಘಟನೆ ಲಷ್ಕರ್ ಎ ತೊಯ್ಬಾ (ಎಲ್ಇಟಿ)ಗೆ ಉಗ್ರ ಜುನೈದ್ ಅಹ್ಮದ್ ಕುರಿತು ಮಾಹಿತಿ ನೀಡುವವರಿಗೆ 5 ಲಕ್ಷ ರೂಪಾಯಿ ನಗದು ಬಹುಮಾನ ನೀಡುವುದಾಗಿ ಎನ್ಐಎ ಘೋಷಿಸಿದೆ. 33 ವರ್ಷದ ಜುನೈದ್ ಘೋಷಿತ ಅಪರಾಧಿಯಾಗಿದ್ದು, ಶಸ್ತ್ರಾಸ್ತ್ರ ಹಾಗೂ ಸ್ಫೋಟಕ ವಸ್ತುಗಳ ವಶಪಡಿಸಿದ ಪ್ರಕರಣದಲ್ಲಿ ತನಿಖಾ ಸಂಸ್ಥೆಯ ಮೋಸ್ಟ್ ವಾಂಟೆಡ್ ಪಟ್ಟಿಯಲ್ಲಿದ್ದಾನೆ.
ಜುನೈದ್ ಅಹ್ಮದ್ ವಿವಿಧ ಹೆಸರುಗಳನ್ನು ಬಳಸಿಕೊಂಡು ಬೆಂಗಳೂರಿನ ನಾಗಶೆಟ್ಟಿಹಳ್ಳಿಯ ಮಲ್ಲಿಗೆ ಲೇಔಟ್ ಪ್ರದೇಶದಲ್ಲಿ ವಾಸವಾಗಿದ್ದ ಎಂದು ತನಿಖೆಯಲ್ಲಿ ತಿಳಿದುಬಂದಿದೆ. ಜುನೈದ್, ಜೆಡಿ ಜಮ್ಶೀದಾ, ಜಾನ್, ಸುಹಾನಾ, ಡಿಜೆ ರಿಟ್ಜ್, ಜಮೀಲಾ ಹಾಗೂ ಜನ್ನು ಎಂಬ ಹೆಸರುಗಳನ್ನು ಬಳಸುತ್ತಿದ್ದ ಎಂಬ ಆರೋಪ ಕೇಳಿಬಂದಿದೆ.
ಜುನೈದ್ ಅಹ್ಮದ್ ಬಂಧನಕ್ಕೆ ನೆರವಾಗುವ ಯಾವುದೇ ಮಾಹಿತಿಯನ್ನು 080-29510900 ಅಥವಾ 8904241100 ಸಂಖ್ಯೆಗೆ ಹಂಚಿಕೊಳ್ಳಬಹುದು ಎಂದು ಎನ್ಐಎ ತಿಳಿಸಿದೆ. ಮಾಹಿತಿದಾರರ ಗುರುತನ್ನು ಸಂಪೂರ್ಣ ಗೌಪ್ಯವಾಗಿಡಲಾಗುವುದು ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಭಯೋತ್ಪಾದಕ ಜಾಲ ನಿರ್ಮಾಣ
2023ರ ಜುಲೈನಲ್ಲಿ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಯೋತ್ಪಾದಕ ಚಟುವಟಿಕೆ ಸಂಬಂಧ ಪ್ರಕರಣ ದಾಖಲಾಗಿತ್ತು. ಅದೇ ವರ್ಷ ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಅಧಿಕಾರಿಗಳು ಪರಪ್ಪನ ಅಗಹಾರದಲ್ಲಿರುವ ಕೇಂದ್ರ ಕಾರಾಗೃಹದಿಂದ ಐವರು ಶಂಕಿತ ಭಯೋತ್ಪಾದಕರನ್ನು ಬಂಧಿಸಿದ್ದರು. ಆರೋಪಿಗಳಿಂದ ಏಳು ದೇಶೀಯ ಪಿಸ್ತೂಲ್ಗಳು, 45 ಜೀವಂತ ಗುಂಡುಗಳು, ವಾಕಿ ಟಾಕಿ ಸೆಟ್ಗಳು, ಚಾಕು ಹಾಗೂ 12 ಮೊಬೈಲ್ ಫೋನ್ಗಳನ್ನು ವಶಪಡಿಸಲಾಗಿತ್ತು. ಜುನೈದ್ ಹಾಗೂ ಮತ್ತೊಬ್ಬ ಉಗ್ರ ಟಿ. ನಸೀರ್ ಅಲಿಯಾಸ್ ಉಮ್ಮರ್ ಹಾಜಿ ವಿರುದ್ಧ ಎಫ್ಐಆರ್ ದಾಖಲಾಗಿತ್ತು.
ಅಪಹರಣ ಮತ್ತು ಕೊಲೆ ಪ್ರಕರಣಗಳ ಆರೋಪ
ಜುನೈದ್ ಅಹ್ಮದ್ ಜೊತೆಗೆ ಬಂಧಿತ ಐವರು 2017ರಲ್ಲಿ ಆರ್ಟಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನೂರ್ ಅಹ್ಮದ್ ಎಂಬ ವ್ಯಕ್ತಿಯನ್ನು ಅಪಹರಿಸಿ ಕೊಲೆ ಮಾಡಿದ್ದರೆಂದು ಆರೋಪಿಸಲಾಗಿದೆ. ಸುಮಾರು 18 ತಿಂಗಳು ವಿಚಾರಣಾಧೀನ ಕೈದಿಗಳಾಗಿ ಜೈಲು ಶಿಕ್ಷೆ ಅನುಭವಿಸಿದ ಬಳಿಕ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು.
ಮತ್ತೆ ಅಪರಾಧ ಚಟುವಟಿಕೆಗಳಲ್ಲಿ ಭಾಗಿ
2020ರಲ್ಲಿ ರಕ್ತಚಂದನ ಕಳ್ಳಸಾಗಣೆ ಪ್ರಕರಣದಲ್ಲಿ ಜುನೈದ್ ಬಂಧನಕ್ಕೊಳಗಾಗಿದ್ದ. 2021ರಲ್ಲಿ ಡಕಾಯಿತಿ ಪ್ರಕರಣದಲ್ಲೂ ಬಂಧನವಾಗಿ ಜಾಮೀನಿನ ಮೇಲೆ ಹೊರಬಂದ ಬಳಿಕ ದೇಶ ತೊರೆದು ಮಧ್ಯಪ್ರಾಚ್ಯ ರಾಷ್ಟ್ರದಲ್ಲಿ ಆಶ್ರಯ ಪಡೆದಿದ್ದಾನೆ ಎಂದು ಶಂಕಿಸಲಾಗಿದೆ. ಎರಡು ವರ್ಷಗಳ ಹಿಂದೆ ಉಗ್ರ ಚಟುವಟಿಕೆಗಳಿಗೆ ಸಹಾಯ ಮಾಡಿದ ಆರೋಪದಡಿ ಜುನೈದ್ ಅಹ್ಮದ್ ತಾಯಿ ಅನೀಸ್ ಫಾತಿಮಾ ಅವರನ್ನು ಎನ್ಐಎ ಬಂಧಿಸಿತ್ತು. ಅಲ್ಲದೆ ನಗರ ಸಶಸ್ತ್ರ ಮೀಸಲು-ದಕ್ಷಿಣದ ಸಹಾಯಕ ಸಬ್ ಇನ್ಸ್ಪೆಕ್ಟರ್ ಚಾಂದ್ ಪಾಷಾ ಹಾಗೂ ಬೆಂಗಳೂರಿನ ಕೇಂದ್ರ ಕಾರಾಗೃಹದ ಮನೋವೈದ್ಯ ಡಾ. ನಾಗರಾಜ್ ಅವರನ್ನು ಸಹ ಬಂಧಿಸಲಾಗಿತ್ತು.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am