ಬ್ರೇಕಿಂಗ್ ನ್ಯೂಸ್
21-02-26 05:50 pm HK News Desk ಕ್ರೈಂ
ಗದಗ, ಫೆ.21: ಸಣ್ಣ ನೀರಾವರಿ ಇಲಾಖೆಯ ಕಾಮಗಾರಿ ಗುತ್ತಿಗೆ ನೀಡಲು 5 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ ಸೇರಿ ಮೂವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಲಕ್ಷ್ಮೇಶ್ವರ ಪಟ್ಟಣದಲ್ಲಿರುವ ಬಾಲಾಜಿ ಆಸ್ಪತ್ರೆಯಲ್ಲಿ ಧಾರವಾಡ ಲೋಕಾಯುಕ್ತ ಎಸ್ಪಿ ಸಿದ್ದಲಿಂಗಪ್ಪ ನೇತೃತ್ವದ ತಂಡ ದಾಳಿ ನಡೆಸಿ ಶಾಸಕರನ್ನು ರೆಡ್ ಹ್ಯಾಂಡ್ ಆಗಿ ಬಂಧಿಸಿದೆ.
ಬಂಧಿತರಲ್ಲಿ ಶಾಸಕ ಚಂದ್ರು ಲಮಾಣಿ, ಅವರ ಸರ್ಕಾರಿ ಪಿಎ ಮಂಜುನಾಥ ವಾಲ್ಮೀಕಿ ಹಾಗೂ ಖಾಸಗಿ ಪಿಎ ಗುರುನಾಯ್ಕ್ ಸೇರಿದ್ದಾರೆ. ದಾಳಿಯ ವೇಳೆ ಕಂತೆ ಕಂತೆ ನಗದು ಹಣ ವಶಪಡಿಸಿರುವುದಾಗಿ ತಿಳಿದುಬಂದಿದೆ.

ಒಂದು ಕೋಟಿ ಕಾಮಗಾರಿಗೆ 11 ಲಕ್ಷ ಕಮಿಷನ್ ಆರೋಪ
ಸಂಕದಾಳ ಗ್ರಾಮದ ರಸ್ತೆ ಬದಿ ತಡೆಗೋಡೆ ನಿರ್ಮಾಣ ಕಾಮಗಾರಿಗೆ 1 ಕೋಟಿ ರೂಪಾಯಿ ಮೌಲ್ಯ ನಿಗದಿಯಾಗಿತ್ತು. ಕಾಮಗಾರಿಯನ್ನು ಒಪ್ಪಿಸಲು ಕ್ಲಾಸ್-1 ಗುತ್ತಿಗೆದಾರ ವಿಜಯ ಪೂಜಾರ ಅವರ ಬಳಿ 11 ಲಕ್ಷ ರೂಪಾಯಿ ಕಮಿಷನ್ ಬೇಡಿಕೆಯಿಟ್ಟಿದ್ದರೆಂದು ಆರೋಪಿಸಲಾಗಿದೆ. ಮೊದಲ ಹಂತದ ಹಣವಾಗಿ 5 ಲಕ್ಷ ರೂಪಾಯಿ ಸ್ವೀಕರಿಸುವ ವೇಳೆ ಲೋಕಾಯುಕ್ತ ಅಧಿಕಾರಿಗಳು ಟ್ರ್ಯಾಪ್ ನಡೆಸಿ ಬಂಧಿಸಿದ್ದಾರೆ.
ಕಮಿಷನ್ ನೀಡಲು ನಿರಾಕರಿಸಿದ ಗುತ್ತಿಗೆದಾರ ಲೋಕಾಯುಕ್ತಕ್ಕೆ ದೂರು ನೀಡಿದ ಹಿನ್ನೆಲೆಯಲ್ಲಿ ಎಸ್ಪಿ ಸಿದ್ದಲಿಂಗಪ್ಪ ನೇತೃತ್ವದಲ್ಲಿ ಬಲೆ ಬೀಸಲಾಗಿತ್ತು. ಮುಂಗಡ ಹಣ ಹಸ್ತಾಂತರದ ಕ್ಷಣದಲ್ಲೇ ಕಾರ್ಯಾಚರಣೆ ನಡೆಸಿ ಶಾಸಕರನ್ನ ಖೆಡ್ಡಾಕ್ಕೆ ಕೆಡವಲಾಗಿದೆ.
ಆಡಿಯೋ ಸಾಕ್ಷ್ಯ ಆಧಾರವಾಗಿ ಎಫ್ಐಆರ್
ಲೋಕಾಯುಕ್ತ ಮೂಲಗಳ ಪ್ರಕಾರ, ಎರಡು ದಿನಗಳ ಹಿಂದೆಯೇ ಹಣಕ್ಕೆ ಬೇಡಿಕೆಯಿಟ್ಟಿದ್ದ ಆಡಿಯೋ ದಾಖಲೆ ಲಭ್ಯವಾಗಿತ್ತು. ಆ ಆಧಾರದ ಮೇಲೆ ಎಫ್ಐಆರ್ ದಾಖಲಿಸಲಾಗಿತ್ತು. ಇಂದು ಹಣ ಸ್ವೀಕಾರದ ವೇಳೆ ಟ್ರ್ಯಾಪ್ ಮಾಡಿ ಬಂಧನ ಪ್ರಕ್ರಿಯೆ ಪೂರ್ಣಗೊಳಿಸಲಾಗಿದೆ. ಬಾಲಾಜಿ ಆಸ್ಪತ್ರೆಯಲ್ಲಿ ಬಂಧನವಾದ ನಂತರ ಶಾಸಕರ ಮನೆಯ ಮೇಲೂ ಲೋಕಾಯುಕ್ತ ಅಧಿಕಾರಿಗಳು ಶೋಧ ನಡೆಸಿದ್ದಾರೆ. ಸಂಬಂಧಿತ ದಾಖಲೆಗಳು ಹಾಗೂ ಹಣಕಾಸು ವ್ಯವಹಾರಗಳ ಕುರಿತು ಪರಿಶೀಲನೆ ಮುಂದುವರೆದಿದೆ.
ರಾಜಕೀಯ ವಲಯದಲ್ಲಿ ಸಂಚಲನ
ರಾಜ್ಯ ಸರ್ಕಾರದ ವಿರುದ್ಧ ಕಮಿಷನ್ ಆರೋಪ ಮಾಡುತ್ತಿದ್ದ ಬಿಜೆಪಿಗೆ ಈ ಬೆಳವಣಿಗೆ ಭಾರೀ ಮುಜುಗರ ತಂದಿದೆ. ತಮ್ಮದೇ ಪಕ್ಷದ ಶಾಸಕ ಲಂಚ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವುದು ರಾಜಕೀಯವಾಗಿ ಚರ್ಚೆಗೆ ಗ್ರಾಸವಾಗಿದೆ. ವಿಧಾನಪರಿಷತ್ ವಿಪಕ್ಷ ನಾಯಕ ಚಲವಾದಿ ನಾರಾಯಣಸ್ವಾಮಿ ಪ್ರತಿಕ್ರಿಯಿಸಿ, ಪ್ರಕರಣದ ಸತ್ಯಾಸತ್ಯತೆ ಪರಿಶೀಲನೆ ಆಗಬೇಕು. ನಮ್ಮ ಪಕ್ಷ ಲಂಚ ಸ್ವೀಕಾರವನ್ನು ಯಾವತ್ತೂ ಬೆಂಬಲಿಸುವುದಿಲ್ಲ ಎಂದು ತಿಳಿಸಿದ್ದಾರೆ.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
14-06-26 09:47 pm
HK News Staffer
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
15-06-26 11:50 am
HK News Staffer
ಧರ್ಮಸ್ಥಳಕ್ಕೆ ತೆರಳಿದ್ದ ಬೆಂಗಳೂರಿನ ಮೂವರು ಯುವಕರು...
15-06-26 11:27 am
ರೇಣುಕಾಸ್ವಾಮಿ ಕೇಸ್ ಮಾದರಿಯಲ್ಲೇ ಬಳ್ಳಾರಿಯಲ್ಲಿ ಭೀಕ...
14-06-26 10:30 pm
ಮಂಜೇಶ್ವರ; ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಬಾಲಕಿಯರು...
14-06-26 05:08 pm
ಪತ್ನಿ ಮನೆ ಬಿಟ್ಟು ಹೋಗಿದ್ದಕ್ಕೆ ಅಪಪ್ರಚಾರ; ಸ್ನೇಹಿ...
13-06-26 09:17 pm