ಬ್ರೇಕಿಂಗ್ ನ್ಯೂಸ್
22-02-26 10:00 pm HK News Desk ಕ್ರೈಂ
ನವದೆಹಲಿ, ಫೆ.22: ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ನಲ್ಲಿ ನಡೆದ ಸೇನಾ ಪಡೆಯ ಕಾರ್ಯಾಚರಣೆಯಲ್ಲಿ ಜೈಶ್ ಇ -ಮಹಮ್ಮದ್ ಕಮಾಂಡರ್ ಸೈಫುಲ್ಲಾ ಸೇರಿದಂತೆ ಮೂವರು ಉಗ್ರರು ಹತರಾಗಿದ್ದಾರೆ. ಪರ್ವತ ಪ್ರದೇಶ ಕಿಶ್ತ್ವಾರ್ ಜಿಲ್ಲೆಯ ಚತ್ರೂ ಅರಣ್ಯ ಪ್ರದೇಶದಲ್ಲಿ ಭಾನುವಾರ ಬೆಳಗ್ಗೆ ಸೈನಿಕರು ಮತ್ತು ಜಮ್ಮು ಕಾಶ್ಮೀರ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರು ಸಾವನ್ನಪ್ಪಿದ್ದಾರೆ.
ಜಮ್ಮು ಮತ್ತು ಕಾಶ್ಮೀರ ಪೊಲೀಸರು, ಗುಪ್ತಚರ ಬ್ಯೂರೋ ಮತ್ತು ಇತರ ಗುಪ್ತಚರ ಮೂಲಗಳಿಂದ ಬಂದ ಮಾಹಿತಿಯ ಮೇರೆಗೆ, ಸೇನೆ, ಪೊಲೀಸರು ಮತ್ತು ಅರೆಸೈನಿಕ ಸಿಆರ್‌ಪಿಎಫ್ ಜಂಟಿ ಕಾರ್ಯಾಚರಣೆಯನ್ನು ನಡೆಸಿತ್ತು. ಕಿಶ್ತ್ವಾರ್‌ನ ಚತ್ರೂ ಅರಣ್ಯ ಪ್ರದೇಶದಲ್ಲಿ ಕಾರ್ಯಾಚರಣೆ ಆರಂಭಿಸಿತ್ತು.
ಈ ವೇಳೆ, ಇಬ್ಬರು ಉಗ್ರರು ಹತರಾಗಿದ್ದು ತಿಳಿದುಬಂದಿತ್ತು. ಎನ್‌ಕೌಂಟರ್ ಸ್ಥಳದಿಂದ ಎರಡು ಎಕೆ-47 ರೈಫಲ್‌ಗಳು ಮತ್ತು ಇತರ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಆದರೆ ಸಂಜೆಯ ವೇಳೆಗೆ, ಇಂಡಿಯಾ ಟಿವಿ ಮೂವರು ಉಗ್ರರನ್ನು ಹೊಡೆದುರುಳಿಸಿದ ಬಗ್ಗೆ ಮಾಹಿತಿ ನೀಡಿದೆ.
ಎನ್ಕೌಂಟರ್ ನಲ್ಲಿ ಹತನಾಗಿರುವ ಪಾಕಿಸ್ತಾನ ಮೂಲದ ಜೈಶ್ ಉಗ್ರ ಸೈಫುಲ್ಲಾ ಕಳೆದ ಕೆಲವು ವರ್ಷಗಳಿಂದ ಈ ಪ್ರದೇಶದಲ್ಲಿ ಸಕ್ರಿಯನಾಗಿದ್ದ ಮತ್ತು ಭದ್ರತಾ ಪಡೆಗಳ ಮೇಲಿನ ಹಲವಾರು ದಾಳಿಗಳಲ್ಲಿ ಭಾಗಿಯಾಗಿದ್ದ. ಜನವರಿ 18 ರಂದು ನಡೆದ ಎನ್‌ಕೌಂಟರ್‌ನಲ್ಲಿ ಪ್ಯಾರಾ ಕಮಾಂಡೋ ಸಾವನ್ನಪ್ಪಿ ಇತರರು ಗಾಯಗೊಂಡ ನಂತರ, ಭದ್ರತಾ ಪಡೆಗಳು ಚತ್ರೂ ಮತ್ತು ಕಿಶ್ತ್ವಾರ್‌ನ ಪಕ್ಕದ ಅರಣ್ಯ ಪ್ರದೇಶಗಳಲ್ಲಿ ಬೃಹತ್ ಶೋಧ ಕಾರ್ಯಾಚರಣೆಯನ್ನು ನಡೆಸುತ್ತಿವೆ.
ಸೇನಾ ಕಾರ್ಯಾಚರಣೆ ಸಂದರ್ಭದಲ್ಲಿ ಪೊಲೀಸರ ಜೊತೆಗಿದ್ದ ಟೈಸನ್ ಎಂಬ ಗೂಢಚರ್ಯೆ ಮಾಡುತ್ತಿದ್ದ ಜರ್ಮನ್ ಶೆಫರ್ಡ್ ನಾಯಿ ಗುಂಡೇಟಿಗೆ ಒಳಗಾಗಿದೆ. ಕೂಡಲೇ ಅದನ್ನು ಹೆಲಿಕಾಪ್ಟರ್ ನಲ್ಲಿ ಏರ್ ಲಿಫ್ಟ್ ಮಾಡಿ ಚಿಕಿತ್ಸೆ ನೀಡಲಾಗಿದೆ..
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am