ಬ್ರೇಕಿಂಗ್ ನ್ಯೂಸ್
12-03-26 12:12 pm HK News Staffer ಕ್ರೈಂ
ಬೆಂಗಳೂರು, ಮಾ 13: ಟಿಪ್ಪರ್ ಲಾರಿ ಹರಿದು ವೈದ್ಯಕೀಯ ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ಮೈಸೂರು ರಸ್ತೆಯ ಆರ್.ಆರ್.ವೈದ್ಯಕೀಯ ಕಾಲೇಜು ಬಳಿ ನಡೆದಿದೆ. ಕಾಲೇಜಿನಲ್ಲೇ ನಾಲ್ಕನೇ ವರ್ಷದ ವೈದ್ಯಕೀಯ ವಿದ್ಯಾರ್ಥಿನಿಯಾಗಿದ್ದ ಕೃತಿಕಾ (21) ಮೃತ ಯುವತಿ.
ಸ್ಕೂಟರ್ ಚಲಾಯಿಸುತ್ತಿದ್ದ ಮತ್ತೋರ್ವ ವಿದ್ಯಾರ್ಥಿನಿ ಹಂಸ ಕೂಡ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ನಿನ್ನೆ ಸಂಜೆ 4:15ರ ಸುಮಾರಿಗೆ ಸ್ಕೂಟರ್ ಮೂಲಕ ಹೊರಟ ಕೃತಿಕಾ ಹಾಗೂ ಹಂಸ ಆರ್.ಆರ್.ವೈದ್ಯಕೀಯ ಕಾಲೇಜಿನ ಎಕ್ಸಿಟ್ ನಿಂದ ಮೈಸೂರು ರಸ್ತೆಯ ಕಡೆ ತೆರಳುತ್ತಿದ್ದರು. ಈ ವೇಳೆ ಮೈಸೂರು ಕಡೆಗೆ ಸಾಗುತ್ತಿದ್ದ ಟಿಪ್ಪರ್ ಲಾರಿ ಸ್ಕೂಟರ್‌ಗೆ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಸ್ಕೂಟರ್ ಚಲಾಯಿಸುತ್ತಿದ್ದ ಹಂಸ ರಸ್ತೆಯ ಎಡಭಾಗಕ್ಕೆ ಬಿದ್ದರೆ, ಹಿಂಬದಿ ಸವಾರೆ ಕೃತಿಕಾ ಬಲಭಾಗಕ್ಕೆ ಬಿದ್ದಿದ್ದಾರೆ.
ದುರಾದೃಷ್ಟವಶಾತ್ ಕೃತಿಕಾ ಅವರ ದೇಹದ ಮೇಲೆ ಟಿಪ್ಪರ್ ಲಾರಿಯ ಚಕ್ರ ಹರಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಕೆಂಗೇರಿ ಸಂಚಾರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಮತ್ತೊಬ್ಬ ವಿದ್ಯಾರ್ಥಿನಿ ಹಂಸ ಅವರನ್ನು ಆರ್.ಆರ್.ವೈದ್ಯಕೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆ ಸಂಬಂಧ ಕೆಂಗೇರಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಲಾರಿ ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಬೆಂಗಳೂರು ಪಶ್ಚಿಮ ಸಂಚಾರ ವಿಭಾಗದ ಡಿಸಿಪಿ ಡಾ.ಅನೂಪ್ ಎ.ಶೆಟ್ಟಿ ತಿಳಿಸಿದ್ದಾರೆ.
30-07-26 09:27 pm
HK News Staffer
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
ಸಂಪುಟ ವಿಸ್ತರಣೆ ಫಿಕ್ಸ್ ಆಗುತ್ತಿದ್ದಂತೆ ಹೈಕಮಾಂಡ್...
28-07-26 08:12 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
30-07-26 07:51 pm
HK News Staffer
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಮಂಗಳೂರು, ಉಳ್ಳಾಲದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ದ...
28-07-26 10:28 pm
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
31-07-26 12:00 pm
HK News Staffer
ಸ್ಟಿಂಗ್ ವಿಡಿಯೋದಲ್ಲಿ ಲಂಚ ಸ್ವೀಕಾರ ದೃಶ್ಯ ಸೆರೆ ;...
30-07-26 09:24 pm
ಫೇಸ್ಬುಕ್ ಫ್ರೆಂಡ್ಶಿಪ್ ದುಬಾರಿ ! ಚಿನ್ನದ ಪಾರ್ಸೆ...
30-07-26 08:31 pm
ನಿವೃತ್ತ ಬಸ್ ಡ್ರೈವರ್ ಮನೆಯಲ್ಲಿ 48 ಕೋಟಿಗೂ ಅಧಿಕ...
30-07-26 02:16 pm
ಪರಿಷತ್ ಸ್ಥಾನ ಕೊಡಿಸುವುದಾಗಿ ಹೇಳಿ ಒಂದೂವರೆ ಕೋಟಿ ಪ...
30-07-26 12:18 pm