ಬ್ರೇಕಿಂಗ್ ನ್ಯೂಸ್
23-03-26 11:17 am HK News Staffer ಕ್ರೈಂ
ರಾಮನಗರ, ಮಾರ್ಚ್ 23: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ ದುರ್ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಸಂಕಲಗೆರೆ ಗ್ರಾಮದ ಬಳಿ ನಡೆದಿದೆ. ಕೇರಳದಿಂದ ಬೆಂಗಳೂರಿನತ್ತ ಬರುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಫೆನ್ಸಿಂಗ್ಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ.
ಪಿಕೆ ಟ್ರಾವೆಲ್ಸ್ಗೆ ಸೇರಿದ ಈ ಬಸ್ ತಡರಾತ್ರಿ ಕೇರಳದ ಕ್ಯಾಲಿಕಟ್ನಿಂದ ಹೊರಟಿದ್ದು, ಬೆಳಗಿನ ಜಾವ ಸುಮಾರು 4.10ಕ್ಕೆ ಅಪಘಾತಕ್ಕೀಡಾಗಿದೆ. ಪ್ರಾಥಮಿಕ ತನಿಖೆಯ ಪ್ರಕಾರ, ಚಾಲಕ ನಿದ್ರೆ ಮಂಪರಿನಿಂದ ವಾಹನದ ನಿಯಂತ್ರಣ ಕಳೆದುಕೊಂಡಿರುವ ಶಂಕೆ ವ್ಯಕ್ತವಾಗಿದೆ. ಡಿಕ್ಕಿಯ ತೀವ್ರತೆ ಎಷ್ಟಿತ್ತೆಂದರೆ, ಬಸ್ ಫೆನ್ಸಿಂಗ್ಗೆ ಡಿಕ್ಕಿ ಹೊಡೆದ ಬಳಿಕವೂ ಸುಮಾರು 100 ಮೀಟರ್ ದೂರ ಸಂಚರಿಸಿದೆ.

ಘಟನೆಯಲ್ಲಿ ಕೇರಳದ ಕಾಜೀಕೋಟೆಯ ಮೊಹಮ್ಮದ್ ಫರಾನ್ (22), ಸುಲ್ಫಿ (45) ಹಾಗೂ ಬೆಂಗಳೂರಿನ ಕಲಾಸಿಪಾಳ್ಯದ ನಿವಾಸಿ ರಶೀದ್ (45) ಮತ್ತು ಆಡುಗೋಡಿಯ ಸಾಕೇರ್ ಮೃತಪಟ್ಟಿದ್ದಾರೆ. ಇನ್ನೂ ಕೆಲ ಪ್ರಯಾಣಿಕರು ಗಾಯಗೊಂಡಿದ್ದು, ಕಣ್ಣೂರಿನ ಅಬ್ದುಲ್ ಮತ್ತು ಅಲೇನ್ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಬಸ್ನಲ್ಲಿ ಒಟ್ಟು 42 ಮಂದಿ ಪ್ರಯಾಣಿಸುತ್ತಿದ್ದರು.
ಮಾಹಿತಿ ತಿಳಿದ ತಕ್ಷಣ ಚನ್ನಪಟ್ಟಣ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಮೃತದೇಹಗಳನ್ನು ಚನ್ನಪಟ್ಟಣ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ. ಅಪಘಾತಕ್ಕೆ ಸಂಬಂಧಿಸಿದಂತೆ ಬಸ್ ಚಾಲಕ ರಿಯಾಜ್ನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ತಡೆಗೋಡೆ ಇಲ್ಲದೇ ಇದ್ದರೆ ಅಪಘಾತದ ಪ್ರಮಾಣ ಇನ್ನಷ್ಟು ಭೀಕರವಾಗಿರುತ್ತಿತ್ತು ಎಂದು ಸ್ಥಳೀಯರು ಹೇಳಿದ್ದಾರೆ. ಈ ಘಟನೆ ಮತ್ತೆ ರಸ್ತೆ ಸುರಕ್ಷತೆ ಮತ್ತು ದೀರ್ಘ ಪ್ರಯಾಣದ ವೇಳೆ ಚಾಲಕರ ಜಾಗೃತಿಯ ಅಗತ್ಯತೆಯನ್ನು ಒತ್ತಿಹೇಳಿದೆ. ಚನ್ನಪಟ್ಟಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಮುಂದುವರಿದಿದೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am