ಬ್ರೇಕಿಂಗ್ ನ್ಯೂಸ್
23-03-26 03:08 pm HK News Staffer ಕ್ರೈಂ
ಮಂಗಳೂರು, ಮಾರ್ಚ್ 23: ನಿಷೇಧಿತ ಮಾದಕ ವಸ್ತು ಎಂಡಿಎಂಎ ಡ್ರಗ್ಸ್ ಅನ್ನು ಮಂಗಳೂರು ನಗರದ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಆಟೋ ರಿಕ್ಷಾದಲ್ಲಿ ಪಂಪವೆಲ್-ಎಕ್ಕೂರು ಪರಿಸರದಲ್ಲಿ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿದ್ದಾರೆ.
ಮಾರ್ಚ್ 22ರಂದು ಎಂಡಿಎಂಎ ಡ್ರಗ್ಸ್ ವಸ್ತುವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಆಟೋ ರಿಕ್ಷಾವನ್ನು ಪತ್ತೆಹಚ್ಚಿ ತೊಕ್ಕೊಟ್ಟು ಚೆಂಬುಗುಡ್ಡೆ ನಿವಾಸಿಗಳಾದ ಹೈದರ್ @ ಹೈದರ್ ಆಲಿ (53), ಮೊಹಮ್ಮದ್ ಸಜಾದ್ (29), ಕಾಪು ಮೂಲದ ಹಾಲಿ ಮಂಗಳೂರಿನ ಉಜ್ಜೋಡಿ ನಿವಾಸಿ ಜೈಸನ್ ಮೆನೆಜಸ್ (26) ಎಂಬವರನ್ನು ಬಂಧಿಸಲಾಗಿದೆ.
ಆರೋಪಿಗಳ ವಶದಿಂದ ರೂ.2,50,000 ಮೌಲ್ಯದ 26 ಗ್ರಾಂ ತೂಕದ ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ, ನಗದು ಹಣ 37,000, ಮೊಬೈಲ್ ಫೋನ್-5, ತೂಕಮಾಪನ, KA-19-AC-2245ನೇ ನಂಬ್ರದ ಆಟೋ ರಿಕ್ಷಾ, ಸಹಿತ ಒಟ್ಟು ರೂ. 4,37,500/- ಮೌಲ್ಯದ ಸೊತ್ತುಗಳನ್ನು ಸ್ವಾಧೀನ ಪಡಿಸಲಾಗಿದೆ. ಈ ಬಗ್ಗೆ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಆರೋಪಿ ಹೈದರ್ ಆಲಿ ಮೇಲೆ ಈ ಹಿಂದೆ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರರಣ ಹಾಗೂ 2024ನೇ ವರ್ಷದಲ್ಲಿ ಮಾದಕ ವಸ್ತು ಮಾರಾಟ ಮಾಡಿದ ಪ್ರಕರಣ ದಾಖಲಾಗಿದ್ದು, ಹಾಗೂ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಮಹಿಳೆಯೊಬ್ಬರಿಗೆ ಹಲ್ಲೆ ಮಾಡಿದ ಬಗ್ಗೆ ಪ್ರಕರಣ ದಾಖಲಾಗಿರುತ್ತದೆ. ಮಾದಕ ವಸ್ತು ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರೆದಿದೆ. ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿಗಳು ಭಾಗವಹಿಸಿರುತ್ತಾರೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am