ಬ್ರೇಕಿಂಗ್ ನ್ಯೂಸ್
27-03-26 09:34 pm HK News Staffer ಕ್ರೈಂ
ಬೆಂಗಳೂರು, ಮಾ. 27: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಕಾರು ಡ್ರೀಫ್ಟ್ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ರಿಕ್ಕಿ ರೈ ವಿರುದ್ಧ ವಂಚನೆ ಕೇಸ್ ದಾಖಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ, ರಿಕ್ಕಿ ರೈ ದೆಹಲಿಯಿಂದ ಖರೀದಿಸಿದ ದುಬಾರಿ ಲ್ಯಾಂಬೋರ್ಗಿನಿ ಕಾರನ್ನು ಬೆಂಗಳೂರಿನಲ್ಲಿ ರಿಜಿಸ್ಟರ್ ಮಾಡಿಸದೇ, ಲಕ್ಷಾಂತರ ರೂಪಾಯಿ ಟ್ಯಾಕ್ಸ್ ಕಟ್ಟದೇ, ಫ್ಯಾನ್ಸಿ ನಂಬರ್ ಪ್ಲೇಟ್ ಅಳವಡಿಸಿ ಓಡಿಸುತ್ತಿದ್ದಾರೆಯೆಂದು ವಿಚಾರಣೆ ವೇಳೆ ತಿಳಿದು ಬಂದಿದೆ.
ರಿಕ್ಕಿ ರೈ ಕಾರಿನ ಹೊಸ ಬಣ್ಣ ಮಾಡಿಸಿ ಬೆಂಗಳೂರಿಗೆ ತಂದು, ಆರ್‌ಟಿಒದಲ್ಲಿ ರಿಜಿಸ್ಟ್ರೇಶನ್ ಮಾಡಿಸದೇ, KA-05 NR 0009 ನಕಲಿ ನಂಬರ್ ಪ್ಲೇಟ್ ಅಳವಡಿಸಿದ್ದರು. ಕಾರಿನ ವಾಸ್ತವಿಕ ನೋಂದಣಿ DL 1 CT 1515 ಆಗಿದ್ದು ಗುಜರಾತ್ ಮೂಲದ ರಬಾರ ಭಾವನಾಬೆನ್ ವಿನೋದ್ ಕುಮಾರ್ ಅವರ ಹೆಸರಿನಲ್ಲಿ ಇದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಕಬ್ಬನ್ ಪಾರ್ಕ್ ಸಂಚಾರ ಪೊಲೀಸರು ದಾಖಲೆ ಪರಿಶೀಲನೆ ವೇಳೆ ಈ ಅಕ್ರಮ ಬೆಳವಣಿಗೆ ಪತ್ತೆಯಾಗಿದ್ದು, ಹಿಂದೆ ಆರ್‌ಟಿಒ ಅಧಿಕಾರಿಗಳು ರಿಕ್ಕಿ ರೈ ಅವರನ್ನು ಎರಡು ಬಾರಿ ದಂಡಿಸಿದರೂ, ಅವರು ಟ್ಯಾಕ್ಸ್ ಕಟ್ಟದೆ ಮತ್ತು ರಿಜಿಸ್ಟ್ರೇಷನ್ ಮಾಡಿಸದೇ ಕಾರು ಓಡಿಸುತ್ತಿದ್ದರು ಎಂದು ತಿಳಿಸಿದ್ದಾರೆ.
ರಿಕ್ಕಿ ರೈ ಕಾರನ್ನು ಎರಡು ಸ್ಥಳಗಳಲ್ಲಿ ಡ್ರೀಫ್ಟ್ ಮಾಡಿದ್ದು ವಿಡಿಯೋ ದೃಶ್ಯಗಳಿಂದ ಗೊತ್ತಾಗಿದೆ. ಮೊದಲು ಅನಿಲ್ ಕುಂಬ್ಳೆ ಸರ್ಕಲ್, ನಂತರ ಕಬ್ಬನ್ ಸರ್ಕಲ್. ಈ ಹಿನ್ನೆಲೆಯಲ್ಲಿ, ಪೊಲೀಸ್ ಅಧಿಕಾರಿಗಳು ರಿಕ್ಕಿ ರೈಗೆ ನೋಟಿಸ್ ನೀಡಿದ್ದಾರೆ. ರಿಕ್ಕಿ ರೈ ತಾತ್ಕಾಲಿಕವಾಗಿ “ಹೊರ ರಾಜ್ಯದಲ್ಲಿದ್ದೇನೆ, ಬರುತ್ತೇನೆ” ಎಂದು ಪ್ರತಿಕ್ರಿಯಿಸಿದ್ದಾರೆ, ಆದರೆ ಎರಡು ದಿನಗಳಿಂದ ಸರಿಯಾಗಿ ಪ್ರತಿಕ್ರಿಯೆ ನೀಡುತ್ತಿಲ್ಲ ಎಂದು ಪೊಲೀಸರು ಹೇಳಿದ್ದಾರೆ. ಕಾರು ಪ್ರಸ್ತುತ ಪೊಲೀಸ್ ವಶದಲ್ಲಿರಿಸಲಾಗಿದೆ.
ಪೊಲೀಸರು ಈಗ ಡ್ರೀಫ್ಟ್ ಪ್ರಕರಣದ ಜೊತೆಗೆ ವಂಚನೆ ಪ್ರಕರಣಕ್ಕೂ ಮತ್ತೊಂದು ಎಫ್‌ಐಆರ್ ದಾಖಲಿಸಿದ್ದಾರೆ. ಐಷಾರಾಮಿ ಕಾರಿನ ನಕಲಿ ನೋಂದಣಿ ಮತ್ತು ಟ್ಯಾಕ್ಸ್ ತಪ್ಪಿಸುವ ಪ್ರಕರಣವು ಸಾರ್ವಜನಿಕರ ಗಮನ ಸೆಳೆದಿದ್ದು, ಇದು ಬೆಂಗಳೂರಿನ ಸಂಚಾರ ನಿಯಮ ಉಲ್ಲಂಘನೆಯ ಹೊಸ ಬೆಳವಣಿಗೆ ಎಂದು ಚಿತ್ರಿಸಲಾಗಿದೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am