ಬ್ರೇಕಿಂಗ್ ನ್ಯೂಸ್
28-03-26 06:13 pm HK News Staffer ಕ್ರೈಂ
ಮೈಸೂರು, ಮಾರ್ಚ್ 28: ಸರ್ಕಾರಿ ಕಚೇರಿ, ಶಾಲೆಗಳಿಗೆ ಹುಸಿ ಬಾಂಬ್ ಸಂದೇಶ ನೀಡಿ ಆತಂಕ ಸೃಷ್ಟಿಸುತ್ತಿದ್ದ ಮೈಸೂರು ಮೂಲದ ವ್ಯಕ್ತಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.
ಮೈಸೂರಿನಲ್ಲಿ ಅಡಗಿ ಕುಳಿತು ಬಾಂಬ್ ಸ್ಪೋಟಿಸುವ ಬಗ್ಗೆ ಬೆದರಿಕೆ ಸಂದೇಶ ಹಾಕುತ್ತಿದ್ದ ವ್ಯಕ್ತಿಯನ್ನು ಶ್ರೀನಿವಾಸ್ ಎಂದು ಗುರುತಿಸಲಾಗಿದೆ. ಈತ ಮೈಸೂರಿನ ಪ್ರತಿಷ್ಠಿತ ಬೃಂದಾವನ ಬಡಾವಣೆ ಎರಡನೇ ಹಂತದ 6ನೇ ಕ್ರಾಸ್ ನ ಮನೆಯೊಂದರಲ್ಲಿ ಕುಳಿತು ಕಾರ್ಯಾಚರಣೆ ನಡೆಸುತ್ತಿದ್ದ ಎನ್ನುವುದನ್ನು ಪತ್ತೆ ಮಾಡಲಾಗಿದೆ.
ಇತ್ತೀಚೆಗೆ ಸರ್ಕಾರಿ ಕಚೇರಿಗಳು, ಶಾಲಾ ಕಟ್ಟಡಗಳು ಹಾಗೂ ನ್ಯಾಯಾಲಯಗಳಿಗೆ ಬಾಂಬ್ ಸ್ಪೋಟಗೊಳಿಸುವ ಬಗ್ಗೆ ಬೆದರಿಕೆ ಸಂದೇಶ ರವಾನೆ ಮಾಡಲಾಗಿತ್ತು. ಒಂದೇ ತಿಂಗಳಿನಲ್ಲಿ ಹಲವು ಬಾರಿ ಇಮೇಲ್ ಮೂಲಕ ಸಂದೇಶ ರವಾನಿಸಲಾಗಿತ್ತು. ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿದ್ದ ದೆಹಲಿ ಪೊಲೀಸರು ಇಮೇಲ್ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ. ಈತ ಮೈಸೂರಿನಿಂದ ಕಾರ್ಯಾಚರಣೆ ಮಾಡಿರುವ ಬಗ್ಗೆ ಮಾಹಿತಿ ಪಡೆದು ದೆಹಲಿ ಪೊಲೀಸರು ದಿಢೀರ್ ದಾಳಿ ನಡೆಸಿ, ಆರೋಪಿ ಶ್ರೀನಿವಾಸ್ ನನ್ನು ಬಂಧಿಸಿದ್ದಾರೆ.
ದೆಹಲಿ ಪೊಲೀಸರಿಗೆ ಮೈಸೂರಿನ ವಿವಿ ಪುರಂ ಠಾಣೆ ಪೊಲೀಸರು ಸಾಥ್ ನೀಡಿದ್ದಾರೆ. ಆರೋಪಿಯನ್ನು ಹೆಚ್ಚಿನ ವಿಚಾರಣೆಗೆ ದೆಹಲಿಗೆ ಕರೆದೊಯ್ಯಲಿದ್ದು ಆರೋಪಿ ಮನೆಯಲ್ಲಿ ಹಲವು ಸಿಮ್ ಗಳು ಹಾಗೂ ಲ್ಯಾಪ್ ಟ್ಯಾಪ್ ಸೀಜ್ ಮಾಡಲಾಗಿದೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am