ಬ್ರೇಕಿಂಗ್ ನ್ಯೂಸ್
04-04-26 05:42 pm HK News Staffer ಕ್ರೈಂ
ನಾಸಿಕ್, ಏಪ್ರಿಲ್ 4: ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ದಿಂಡೋರಿ ತಾಲೂಕಿನ ಶಿವಾಜಿನಗರ ಪ್ರದೇಶದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಕಾರೊಂದು ಬಾವಿಗೆ ಉರುಳಿ ಬಿದ್ದ ಪರಿಣಾಮ ಒಂದೇ ಕುಟುಂಬದ 9 ಮಂದಿ ಮೃತಪಟ್ಟಿದ್ದಾರೆ.
ಶುಕ್ರವಾರ ರಾತ್ರಿ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ದರ್ಗುಡೆ ಕುಟುಂಬ, ಕಾರ್ಯಕ್ರಮ ಮುಗಿಸಿ ಮನೆಗೆ ವಾಪಸ್ ಆಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ರಾತ್ರಿ ಸುಮಾರು 10 ಗಂಟೆಯ ವೇಳೆಗೆ ಮಾರುತಿ XL6 ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಕಾರು ನಿಯಂತ್ರಣ ಕಳೆದುಕೊಂಡು ಬಾವಿಗೆ ಬಿದ್ದಿದೆ. ಪರಿಣಾಮ ಕಾರಿನಲ್ಲಿದ್ದ ರೇಷ್ಮಾ ಸುನಿಲ್ ದರ್ಗುಡೆ (27), ಆಶಾ ಅನಿಲ್ ದರ್ಗುಡೆ (32), ಶ್ರಿಷ್ಟಿ ಅನಿಲ್ ದರ್ಗುಡೆ (14), ಶ್ರೇಯಸ್ ಅನಿಲ್ ದರ್ಗುಡೆ (11), ರಾಖಿ ಸುನಿಲ್ ದರ್ಗುಡೆ, ಶ್ರಾವಣಿ ಅನಿಲ್ ದರ್ಗುಡೆ (11), ಸಮೃದ್ಧಿ ರಾಜೇಂದ್ರ ದರ್ಗುಡೆ (7), ಮಾಧುರಿ ಅನಿಲ್ ದರ್ಗುಡೆ (13) ಮತ್ತು ಸುನಿಲ್ ದತ್ತು ದರ್ಗುಡೆ (32) ಮೃತಪಟ್ಟಿದ್ದಾರೆ. ಮೃತರೆಲ್ಲರೂ ದಿಂಡೋರಿ ತಾಲೂಕಿನ ಇಂದೋರ್ ಗ್ರಾಮದ ನಿವಾಸಿಗಳು ಎಂದು ತಿಳಿದು ಬಂದಿದೆ.
ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ರಕ್ಷಣಾ ತಂಡಗಳು ಸ್ಥಳಕ್ಕಾಗಮಿಸಿ ಕಾರ್ಯಾಚರಣೆ ಆರಂಭಿಸಿವೆ. ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ (ಎನ್ಡಿಆರ್ಎಫ್) ತಂಡವೂ ರಕ್ಷಣಾ ಕಾರ್ಯದಲ್ಲಿ ಭಾಗವಹಿಸಿದೆ. ಆದರೆ ಸ್ಥಳದಲ್ಲಿ ಜನಸಂದಣಿ ಹೆಚ್ಚಿದ್ದರಿಂದ ಕಾರ್ಯಾಚರಣೆಗೆ ಅಡಚಣೆ ಉಂಟಾಗಿದೆ ಎನ್ನಲಾಗಿದೆ. ತಡರಾತ್ರಿ ವರೆಗೆ ರಕ್ಷಣಾ ಕಾರ್ಯಗಳು ಮುಂದುವರಿದಿದ್ದು, ಮೃತದೇಹಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.
ಅಪಘಾತಕ್ಕೆ ನಿಖರ ಕಾರಣ ಏನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲದಿದ್ದರೂ, ಕಾರು ನಿಯಂತ್ರಣ ಕಳೆದುಕೊಂಡಿರುವ ಸಾಧ್ಯತೆ ಇದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ದಿಂಡೋರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ.
30-07-26 09:27 pm
HK News Staffer
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
ಸಂಪುಟ ವಿಸ್ತರಣೆ ಫಿಕ್ಸ್ ಆಗುತ್ತಿದ್ದಂತೆ ಹೈಕಮಾಂಡ್...
28-07-26 08:12 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
30-07-26 07:51 pm
HK News Staffer
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಮಂಗಳೂರು, ಉಳ್ಳಾಲದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ದ...
28-07-26 10:28 pm
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
30-07-26 09:24 pm
HK News Staffer
ಫೇಸ್ಬುಕ್ ಫ್ರೆಂಡ್ಶಿಪ್ ದುಬಾರಿ ! ಚಿನ್ನದ ಪಾರ್ಸೆ...
30-07-26 08:31 pm
ನಿವೃತ್ತ ಬಸ್ ಡ್ರೈವರ್ ಮನೆಯಲ್ಲಿ 48 ಕೋಟಿಗೂ ಅಧಿಕ...
30-07-26 02:16 pm
ಪರಿಷತ್ ಸ್ಥಾನ ಕೊಡಿಸುವುದಾಗಿ ಹೇಳಿ ಒಂದೂವರೆ ಕೋಟಿ ಪ...
30-07-26 12:18 pm
ಮಂಗಳೂರು ಪೊಲೀಸರಿಂದ 82 ಕೋಟಿ ರೂ. ಮೌಲ್ಯದ ಡ್ರಗ್ಸ್...
29-07-26 10:45 pm