ಬ್ರೇಕಿಂಗ್ ನ್ಯೂಸ್
09-04-26 01:03 pm HK News Staffer ಕ್ರೈಂ
ಬೆಂಗಳೂರು, ಏಪ್ರಿಲ್ 9: ಸಿಲಿಕಾನ್ ಸಿಟಿಯಲ್ಲಿ ಪೋಷಕರ ಎದೆನಡುಗಿಸುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ನಾಯಂಡಹಳ್ಳಿಯಲ್ಲಿ ವಾಸವಾಗಿರುವ ನವೀನ್ ಮತ್ತು ಜಯಶ್ರೀ ದಂಪತಿಯ ಒಂದೂವರೆ ವರ್ಷದ ಪುತ್ರಿ ಸಹನಾ, ಏಪ್ರಿಲ್ 6ರಂದು ಮನೆಯೊಳಗೆ ಆಟವಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಮೊದಲ ಮಹಡಿಯಿಂದ ಕೆಳಕ್ಕೆ ಬಿದ್ದಿದ್ದು ಘಟನೆ ದೃಶ್ಯ ಸಿಸಿಟಿವಿಯಲ್ಲಿ ವೈರಲ್ ಆಗಿದೆ.
ಮನೆಯೊಳಗೆ ಆಟವಾಡುತ್ತಿದ್ದ ಮಗ ಮನೆಯ ಮುಖ್ಯ ಬಾಗಿಲು ದಾಟಿ ಹೊರಬಂದಿದ್ದು, ವರಾಂಡದಲ್ಲಿ ಇಟ್ಟಿದ್ದ ಕುರ್ಚಿಯ ಮೇಲೆ ಹತ್ತಿ ನಿಯಂತ್ರಣ ತಪ್ಪಿ ಕೆಳಕ್ಕೆ ಬಿದ್ದಿದೆ. ಮಗು ನೆಲಕ್ಕಪ್ಪಳಿಸುತ್ತಿದ್ದಂತೆಯೇ ತಲೆಗೆ ಗಂಭೀರ ಗಾಯಗಳಾಗಿದ್ದು, ರಕ್ತದ ಮಡುವಿನಲ್ಲಿ ಬಿದ್ದಿರುವ ದೃಶ್ಯ ಕಂಡ ತಾಯಿ ಜಯಶ್ರೀ ಆಘಾತದಿಂದಲೇ ರಸ್ತೆಯಲ್ಲೇ ಮೂರ್ಛೆ ಹೋಗಿದ್ದಾರೆ. ತಕ್ಷಣವೇ ಸ್ಥಳೀಯರು ತಾಯಿ ಹಾಗೂ ಮಗುವನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಸದ್ಯ ಮಗುವಿಗೆ ಬಸವನಗುಡಿಯ ರಂಗದೊರೈ ಆಸ್ಪತ್ರೆಯ ಐಸಿಯು ವಿಭಾಗದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಗುವಿನ ತಲೆಗೆ ಮೂರು ಹೊಲಿಗೆ ಹಾಕಲಾಗಿದ್ದು ಮಗುವಿನ ಸ್ಥಿತಿ ಸುಧಾರಿಸುತ್ತಿದೆ. ಕಳೆದ ಎರಡು ವರ್ಷಗಳ ಹಿಂದೆಯಷ್ಟೇ ಮದುವೆಯಾಗಿದ್ದ ದಂಪತಿಗೆ ಸಹನಾ ಒಬ್ಬಳೆ ಮಗಳು. ಪ್ರಸ್ತುತ ಮಗುವಿನ ಆರೋಗ್ಯದಲ್ಲಿ ಅಲ್ಪ ಚೇತರಿಕೆ ಕಂಡುಬರುತ್ತಿದೆ ಎಂದು ಹೇಳಲಾಗುತ್ತಿದೆ.
ಘಟನೆಯ ಬಗ್ಗೆ ಮಾತನಾಡಿದ ಮಗುವಿನ ತಂದೆ ನವೀನ್, “ಇದು ಸಂಪೂರ್ಣ ಆಕಸ್ಮಿಕ ಘಟನೆ. , 'ಮನೆಯ ಮೊದಲನೇ ಮಹಡಿಯಿಂದ ಮಗು ಆಯತಪ್ಪಿ ಕೆಳಕ್ಕೆ ಬಿದ್ದಿದೆ. ಪತ್ನಿ ಅಡುಗೆಮನೆಯಲ್ಲಿ ಹಾಲು ಕಾಯಿಸುತ್ತಿದ್ದ ವೇಳೆ ಕೆಲವೇ ಕ್ಷಣಗಳಲ್ಲಿ ಇದು ಸಂಭವಿಸಿದೆ. ಮಗುವಿನ ತಲೆಗೆ ಮೂರು ಹೊಲಿಗೆಗಳನ್ನು ಹಾಕಲಾಗಿದ್ದು, ಸದ್ಯ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿದಿದೆ. ಮಗು ಈಗ ಪ್ರಾಣಾಪಾಯದಿಂದ ಪಾರಾಗಿದೆ” ಎಂದು ವೈದ್ಯರು ಹೇಳಿದ್ದಾಗಿ ತಿಳಿಸಿದ್ದಾರೆ.
ಈ ಘಟನೆ ಪೋಷಕರಿಗೆ ಎಚ್ಚರಿಕೆಯ ಗಂಟೆಯಾಗಿ ಪರಿಣಮಿಸಿದ್ದು, ಮಕ್ಕಳ ಸುರಕ್ಷತೆ ಬಗ್ಗೆ ಮತ್ತೊಮ್ಮೆ ಜಾಗೃತಿ ಮೂಡಿಸಿದೆ.
Could This Have Been Prevented? Questions Raised Over Parental Supervision
— Karnataka Portfolio (@karnatakaportf) April 9, 2026
A deeply distressing incident has occurred in the Nayandahalli area of Bengaluru. A one-and-a-half-year-old baby girl, who was playing at home, accidentally stepped out through the main door and fell from… pic.twitter.com/8DAJMg3Mnm
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
14-06-26 09:46 pm
HK News Staffer
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
ದಿನಕ್ಕೆ ಒಂದು ವಾಹನಕ್ಕೆ 200 ಲೀಟರ್ ಡೀಸೆಲ್ ಮಾತ್ರ...
13-06-26 03:01 pm
14-06-26 09:47 pm
HK News Staffer
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
14-06-26 10:30 pm
HK News Staffer
ಮಂಜೇಶ್ವರ; ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಬಾಲಕಿಯರು...
14-06-26 05:08 pm
ಪತ್ನಿ ಮನೆ ಬಿಟ್ಟು ಹೋಗಿದ್ದಕ್ಕೆ ಅಪಪ್ರಚಾರ; ಸ್ನೇಹಿ...
13-06-26 09:17 pm
ಬೆಂಗಳೂರಿನ ನ್ಯಾಯಮಿತ್ರ ಸಹಕಾರಿ ಬ್ಯಾಂಕ್ ನಲ್ಲಿ ಅನ್...
13-06-26 08:43 pm
ಕಾಲೇಜು ಫೀಸ್ಗೆ ಕೊಟ್ಟ 10 ಸಾವಿರವೇ ಜೀವ ತೆಗೆಯಿತು!...
13-06-26 06:14 pm