ಬ್ರೇಕಿಂಗ್ ನ್ಯೂಸ್
11-04-26 12:04 pm HK News Desk ಕ್ರೈಂ
ಹುಬ್ಬಳ್ಳಿ, ಎಪ್ರಿಲ್ 11: ಧಾರವಾಡ ಯೂತ್ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಅವರನ್ನು ದುಷ್ಕರ್ಮಿಗಳು ಅವರ ಮನೆಯಲ್ಲೇ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಮದುವೆ ಸಿದ್ಧತೆಯಲ್ಲಿದ್ದ ಅವರನ್ನು ನಗರದ ಹಾಶ್ಮಿ ನಗರದ ನಿವಾಸದಲ್ಲಿ ಶುಕ್ರವಾರ ರಾತ್ರಿ ಬರ್ಬರವಾಗಿ ಕಡಿದು ಕೊಲೆ ಮಾಡಲಾಗಿದೆ.
ಈ ಹಿಂದೆ ಎನ್ಎಸ್ಯುಐ ವಿದ್ಯಾರ್ಥಿ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದ ಫೈರೋಜ್ ಪಠಾಣ್, ಬಳಿಕ ಯುವ ಕಾಂಗ್ರೆಸ್ನಲ್ಲಿ ಜವಾಬ್ದಾರಿ ವಹಿಸಿಕೊಂಡಿದ್ದರು. ಶುಕ್ರವಾರ ರಾತ್ರಿ ಅವರು ತಮ್ಮ ಮನೆಯಲ್ಲಿದ್ದ ಸಂದರ್ಭದಲ್ಲಿ ಮಾರಕಾಸ್ತ್ರಗಳೊಂದಿಗೆ ನುಗ್ಗಿದ ಆರು ಮಂದಿಯ ತಂಡವು ಮನೆಯವರ ಎದುರಲ್ಲೇ ಕೊಲೆ ಕೃತ್ಯವೆಸಗಿದೆ. ಏಕಾಏಕಿ ದಾಳಿ ಮಾಡಿದ ಆರೋಪಿಗಳು, ತಡೆಯಲು ಬಂದ ಮನೆಯವರ ಮೇಲೂ ಹಲ್ಲೆಗೆ ಯತ್ನಿಸಿದ್ದಾರೆ. ಘಟನೆ ತಿಳಿಯುತ್ತಿದ್ದಂತೆ ಉಪ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ದುಷ್ಕರ್ಮಿಗಳ ಮಾಹಿತಿ ಕಲೆಹಾಕಿದ್ದಾರೆ.
ಕ್ಷಿಪ್ರ ಕಾರ್ಯಾಚರಣೆಯಲ್ಲಿ ಕೊಲೆಗೆ ಸಂಚು ರೂಪಿಸಿದ್ದಾರೆ ಎನ್ನಲಾದ ಅರ್ಬಾಜ್ ಪಠಾಣ್ ಮತ್ತು ಗುಲಾಬ್ ಎಂಬವರನ್ನು ವಶಕ್ಕೆ ಪಡೆದಿದ್ದಾರೆ. ದಾಳಿಯಲ್ಲಿ ನೇರವಾಗಿ ಭಾಗಿಯಾಗಿರುವ ಮೊಹಮ್ಮದ್ ಶಾ, ಸದ್ದಾಂ, ಗೌಸ್ ಮತ್ತು ಪರ್ವೇಜ್ ಎಂಬವರ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿಯೇ ಹತ್ಯೆ ನಡೆದಿದೆ ಎಂದು ಶಂಕಿಸಲಾಗಿದ್ದು, ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ತನಿಖೆ ಚುರುಕುಗೊಳಿಸಿದ್ದಾರೆ. ಇದೇ ಎಪ್ರಿಲ್ 26ರಂದು ಫೈರೋಜ್ ಮದುವೆ ನಿಗದಿಯಾಗಿತ್ತು.
30-07-26 09:27 pm
HK News Staffer
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
ಸಂಪುಟ ವಿಸ್ತರಣೆ ಫಿಕ್ಸ್ ಆಗುತ್ತಿದ್ದಂತೆ ಹೈಕಮಾಂಡ್...
28-07-26 08:12 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
30-07-26 07:51 pm
HK News Staffer
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಮಂಗಳೂರು, ಉಳ್ಳಾಲದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ದ...
28-07-26 10:28 pm
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
30-07-26 09:24 pm
HK News Staffer
ಫೇಸ್ಬುಕ್ ಫ್ರೆಂಡ್ಶಿಪ್ ದುಬಾರಿ ! ಚಿನ್ನದ ಪಾರ್ಸೆ...
30-07-26 08:31 pm
ನಿವೃತ್ತ ಬಸ್ ಡ್ರೈವರ್ ಮನೆಯಲ್ಲಿ 48 ಕೋಟಿಗೂ ಅಧಿಕ...
30-07-26 02:16 pm
ಪರಿಷತ್ ಸ್ಥಾನ ಕೊಡಿಸುವುದಾಗಿ ಹೇಳಿ ಒಂದೂವರೆ ಕೋಟಿ ಪ...
30-07-26 12:18 pm
ಮಂಗಳೂರು ಪೊಲೀಸರಿಂದ 82 ಕೋಟಿ ರೂ. ಮೌಲ್ಯದ ಡ್ರಗ್ಸ್...
29-07-26 10:45 pm