ಬ್ರೇಕಿಂಗ್ ನ್ಯೂಸ್
21-04-26 12:44 pm HK News Staffer ಕ್ರೈಂ
ಮಂಗಳೂರು, ಎಪ್ರಿಲ್ 21: ನಗರದ ನಂತೂರು ಜಂಕ್ಷನ್ನಲ್ಲಿ ಸಂಚಾರ ನಿಯಂತ್ರಣ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿ ಮೇಲೆ ಬೈಕ್ ಸವಾರನೊಬ್ಬ ಹಲ್ಲೆ ನಡೆಸಿ, ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿರುವ ಘಟನೆ ಏಪ್ರಿಲ್ 18ರಂದು ನಡೆದಿದೆ. ಹಲ್ಲೆಯಿಂದ ಗಾಯಗೊಂಡ ಪೊಲೀಸ್ ಸಿಬಂದಿ ಪ್ರವೀಣ್ ಅವರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಎಪ್ರಿಲ್ 18 ರಂದು ಮಧ್ಯಾಹ್ನ 12:37ರ ಸುಮಾರಿಗೆ ಸಂಚಾರ ಪೂರ್ವ ಪೊಲೀಸ್ ಠಾಣೆಯ ಹಲೇಷಾ, ಪ್ರವೀಣ್ ಮತ್ತು ಚಂಪಾ ಅವರು ನಂತೂರು ಜಂಕ್ಷನ್ನಲ್ಲಿ ಕರ್ತವ್ಯದಲ್ಲಿದ್ದರು. ಈ ವೇಳೆ ಪದವು ಕಡೆಯಿಂದ ಬೈಕ್ನಲ್ಲಿ ಮಹಿಳೆಯೊಂದಿಗೆ ಬಂದ ಸವಾರ, ಬಿಕರ್ನಕಟ್ಟೆ ಕಡೆಗೆ ತೆರಳುವ ‘ಫ್ರೀ ಲೆಫ್ಟ್’ ರಸ್ತೆಯಲ್ಲಿ ವಾಹನವನ್ನು ಅಡ್ಡಲಾಗಿ ನಿಲ್ಲಿಸಿದ್ದ. ಇದರಿಂದ ಇತರ ವಾಹನಗಳಿಗೆ ಅಡಚಣೆಯಾಗುತ್ತಿರುವುದನ್ನು ಗಮನಿಸಿದ ಹಲೇಷಾ ಅವರು ಬೈಕನ್ನು ಮುಂದಕ್ಕೆ ಕೊಂಡು ಹೋಗುವಂತೆ ಸೂಚಿಸಿದರು.
ಇದರಿಂದ ಕೆರಳಿದ ಸವಾರ ಪೊಲೀಸರನ್ನು “ಬೇವರ್ಸಿ”, “ನಾಯಿಗಳು” ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಇದನ್ನು ಪ್ರಶ್ನಿಸಿದ ಸಿಪಿಸಿ ಪ್ರವೀಣ್ ಅವರ ಮುಖಕ್ಕೆ ಹೊಡೆದು ಗಾಯಗೊಳಿಸಿದ್ದಾನೆ. ಅಲ್ಲದೆ, ಅವರ ಕೈಯಲ್ಲಿದ್ದ ಸುಮಾರು ₹28,000 ಮೌಲ್ಯದ ಮೊಬೈಲ್ ಕಿತ್ತುಕೊಂಡು ನೆಲಕ್ಕೆ ಎಸೆದು ಜಖಂಗೊಳಿಸಿದ್ದಾನೆ. ಜೊತೆಯಲ್ಲಿದ್ದ ಮಹಿಳೆ ಕೂಡ ಪೊಲೀಸರಿಗೆ ಚಪ್ಪಲಿಯಲ್ಲಿ ಹೊಡೆಯುವುದಾಗಿ ಬೆದರಿಕೆ ಹಾಕಿದ್ದಾಳೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಸಾರ್ವಜನಿಕರು ಸಮಾಧಾನಪಡಿಸಲು ಯತ್ನಿಸಿದರೂ ಆರೋಪಿಗಳು ಕಿರುಚಾಟ ಮುಂದುವರಿಸಿದ್ದರು. ಈ ಕುರಿತು ಮಂಗಳೂರು ಕದ್ರಿ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
30-07-26 09:27 pm
HK News Staffer
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
ಸಂಪುಟ ವಿಸ್ತರಣೆ ಫಿಕ್ಸ್ ಆಗುತ್ತಿದ್ದಂತೆ ಹೈಕಮಾಂಡ್...
28-07-26 08:12 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
30-07-26 07:51 pm
HK News Staffer
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಮಂಗಳೂರು, ಉಳ್ಳಾಲದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ದ...
28-07-26 10:28 pm
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
30-07-26 09:24 pm
HK News Staffer
ಫೇಸ್ಬುಕ್ ಫ್ರೆಂಡ್ಶಿಪ್ ದುಬಾರಿ ! ಚಿನ್ನದ ಪಾರ್ಸೆ...
30-07-26 08:31 pm
ನಿವೃತ್ತ ಬಸ್ ಡ್ರೈವರ್ ಮನೆಯಲ್ಲಿ 48 ಕೋಟಿಗೂ ಅಧಿಕ...
30-07-26 02:16 pm
ಪರಿಷತ್ ಸ್ಥಾನ ಕೊಡಿಸುವುದಾಗಿ ಹೇಳಿ ಒಂದೂವರೆ ಕೋಟಿ ಪ...
30-07-26 12:18 pm
ಮಂಗಳೂರು ಪೊಲೀಸರಿಂದ 82 ಕೋಟಿ ರೂ. ಮೌಲ್ಯದ ಡ್ರಗ್ಸ್...
29-07-26 10:45 pm