ಬ್ರೇಕಿಂಗ್ ನ್ಯೂಸ್
26-04-26 09:23 pm HK News Staffer ಕ್ರೈಂ
ಬೆಳ್ತಂಗಡಿ, ಏಪ್ರಿಲ್ 26: ಅಪಾಯಕಾರಿ ತಿರುವುಗಳಲ್ಲಿ ಒಂದಾದ ಚಾರ್ಮಾಡಿ ಘಾಟಿಯಲ್ಲಿ ಮತ್ತೊಂದು ಭಾರೀ ಅಪಘಾತ ಸಂಭವಿಸಿದ್ದು, ಖಾಸಗಿ ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಆತಂಕ ಮೂಡಿಸಿದೆ. ಚಾರ್ಮಾಡಿ ಘಾಟಿಯ ನಾಲ್ಕನೇ ತಿರುವಿನಲ್ಲಿ ನಡೆದ ಈ ಅವಘಡದಲ್ಲಿ ಸುಮಾರು 25 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ.
ಧರ್ಮಸ್ಥಳದಲ್ಲಿ ನಡೆದ ಮದುವೆ ಕಾರ್ಯಕ್ರಮ ಮುಗಿಸಿಕೊಂಡು ಮೂಡಿಗೆರೆಯತ್ತ ಹೊರಟಿದ್ದ ಬಸ್ ಅಪಘಾತಕ್ಕೀಡಾಗಿದೆ. ಘಾಟಿಯ ತೀವ್ರ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಬಸ್ ರಸ್ತೆಯಲ್ಲೇ ಪಲ್ಟಿಯಾಗಿದೆ. ಘಾಟಿ ಪ್ರದೇಶವಾಗಿರುವುದರಿಂದ ಬಸ್ ಪ್ರಪಾತಕ್ಕೆ ಉರುಳುವ ಭೀಕರ ಅಪಾಯವಿದ್ದರೂ, ಅದೃಷ್ಟವಶಾತ್ ರಸ್ತೆಯಲ್ಲೇ ಪಲ್ಟಿಯಾದ ಕಾರಣ ದೊಡ್ಡ ದುರಂತ ತಪ್ಪಿದಂತಾಗಿದೆ.
ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಸುಮಾರು 25 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗಳಿಗೆ ಹಾಗೂ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆಯ ಮಾಹಿತಿ ಸಿಗುತ್ತಿದ್ದಂತೆಯೇ ಬೆಳ್ತಂಗಡಿ ಸಂಚಾರಿ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಪಲ್ಟಿಯಾದ ಬಸ್ಸನ್ನು ತೆರವುಗೊಳಿಸಿ ಸಂಚಾರವನ್ನು ಸುಗಮಗೊಳಿಸಲಾಗಿದೆ.
ಪ್ರಾಥಮಿಕವಾಗಿ, ಘಾಟಿಯ ಕಡಿದಾದ ತಿರುವುಗಳಲ್ಲಿ ಅತಿವೇಗ ಮತ್ತು ಅಜಾಗರೂಕ ಚಾಲನೆಯೇ ಈ ಅಪಘಾತಕ್ಕೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
30-07-26 09:27 pm
HK News Staffer
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
ಸಂಪುಟ ವಿಸ್ತರಣೆ ಫಿಕ್ಸ್ ಆಗುತ್ತಿದ್ದಂತೆ ಹೈಕಮಾಂಡ್...
28-07-26 08:12 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
30-07-26 07:51 pm
HK News Staffer
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಮಂಗಳೂರು, ಉಳ್ಳಾಲದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ದ...
28-07-26 10:28 pm
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
30-07-26 09:24 pm
HK News Staffer
ಫೇಸ್ಬುಕ್ ಫ್ರೆಂಡ್ಶಿಪ್ ದುಬಾರಿ ! ಚಿನ್ನದ ಪಾರ್ಸೆ...
30-07-26 08:31 pm
ನಿವೃತ್ತ ಬಸ್ ಡ್ರೈವರ್ ಮನೆಯಲ್ಲಿ 48 ಕೋಟಿಗೂ ಅಧಿಕ...
30-07-26 02:16 pm
ಪರಿಷತ್ ಸ್ಥಾನ ಕೊಡಿಸುವುದಾಗಿ ಹೇಳಿ ಒಂದೂವರೆ ಕೋಟಿ ಪ...
30-07-26 12:18 pm
ಮಂಗಳೂರು ಪೊಲೀಸರಿಂದ 82 ಕೋಟಿ ರೂ. ಮೌಲ್ಯದ ಡ್ರಗ್ಸ್...
29-07-26 10:45 pm