ಬ್ರೇಕಿಂಗ್ ನ್ಯೂಸ್
27-04-26 05:42 pm HK News Staffer ಕ್ರೈಂ
ಬೆಂಗಳೂರು, ಎಪ್ರಿಲ್ 27: ಮಂಗಳೂರಿನಲ್ಲಿ ನಡೆದ ಭೀಕರ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಶಾರೀಕ್‌ಗೆ ಬೆಂಗಳೂರಿನ ಎನ್‌ಐಎ ವಿಶೇಷ ನ್ಯಾಯಾಲಯವು 10 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.
ಪ್ರಕರಣದ ವಿಚಾರಣೆ ವೇಳೆ ಶಾರೀಕ್ ತನ್ನ ಮೇಲಿನ ಆರೋಪಗಳನ್ನು ಮತ್ತು ಮಾಡಿದ ತಪ್ಪನ್ನು ನ್ಯಾಯಾಲಯದ ಮುಂದೆ ಒಪ್ಪಿಕೊಂಡಿದ್ದ. ಈ ಹಿನ್ನೆಲೆಯಲ್ಲಿ ಶೀಘ್ರ ವಿಚಾರಣೆ ಮುಗಿದು ನ್ಯಾಯಾಧೀಶರು ತೀರ್ಪು ನೀಡಿದ್ದು 10 ವರ್ಷಗಳ ಶಿಕ್ಷೆ ಮತ್ತು 94 ಸಾವಿರ ರೂ. ದಂಡ ವಿಧಿಸಿದೆ. 2022ರ ನವೆಂಬರ್ 19ರಂದು ಮೊಹಮ್ಮದ್ ಶಾರೀಕ್ ಮೈಸೂರಿನಿಂದ ಮಂಗಳೂರಿಗೆ ಬಸ್ಸಿನಲ್ಲಿ ಬಂದು ನಾಗುರಿಯಲ್ಲಿ ಕುಕ್ಕರ್ ಬಾಂಬ್ ಸೆಟ್ ಮಾಡಿ ಆಟೋದಲ್ಲಿ ತೆರಳುತ್ತಿದ್ದಾಗ ಬ್ಲಾಸ್ಟ್ ಆಗಿತ್ತು. ವಿಚಾರಣೆ ಸಂದರ್ಭದಲ್ಲಿ ಈ ಬಾಂಬನ್ನು ಕದ್ರಿ ಮಂಜುನಾಥ ದೇವಸ್ಥಾನ ಆವರಣದಲ್ಲಿ ಇಡುವ ಉದ್ದೇಶ ಹೊಂದಿದ್ಧ ಎಂಬ ವಿಚಾರ ತಿಳಿದುಬಂದಿತ್ತು. ಘಟನೆಯಲ್ಲಿ ಕುಕ್ಕರ್ ಹಿಡಿದುಕೊಂಡಿದ್ದ ಶಾರೀಕ್ ಮತ್ತು ಆಟೋ ಚಾಲಕ ಪುರುಷೋತ್ತಮ ಪೂಜಾರಿ ತೀವ್ರ ಗಾಯಗೊಂಡಿದ್ದರು.

ಇಂದು ಕೋರ್ಟಿನಲ್ಲಿ ತೀರ್ಪು ಘೋಷಣೆ ಬಳಿಕ ಶಾರೀಕ್ ತನ್ನನ್ನು ಶಿವಮೊಗ್ಗ ಜೈಲಿಗೆ ಟ್ರ್ಯಾನ್ಸ್ ಫರ್ ಮಾಡುವಂತೆ ಕೇಳಿಕೊಂಡಿದ್ದಾನೆ. ಸರಿಯಾಗಿ ನಿದ್ದೆ ಬಾರದೇ 3 ವರ್ಷ ಆಗಿದೆ, ಟ್ಯಾಬ್ಲೆಟ್ ಎಲ್ಲಾ ಸರಿ ಹೋಗುತ್ತಿಲ್ಲ. ಹಾಗಾಗಿ ಶಿವಮೊಗ್ಗಕ್ಕೆ ಸ್ಥಳಾಂತರ ಮಾಡಲು ಮನವಿ ಮಾಡಿದ್ದಾನೆ. ಎಲ್ಲಾ ಖೈದಿಗಳು ಬೆಂಗಳೂರಿಗೆ ವರ್ಗಾವಣೆ ಆಗ್ಬೇಕು ಅಂತ ಅರ್ಜಿ ಹಾಕ್ತಾರೆ, ನೀವೇನು ಶಿವಮೊಗ್ಗ ಕೇಳ್ತಿದಿರಾ ಅಂತ ಜಡ್ಜ್ ಪ್ರಶ್ನೆ ಮಾಡಿದ್ದಾರೆ.
ವಿಚಾರಣೆ ಹಂತದಲ್ಲಿ ಆರೋಪಿ ಶಾರಿಕ್ ತಾನು ಮಾಡಿದ ಕೃತ್ಯದ ಬಗ್ಗೆ ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದ. ಬೆಂಗಳೂರಿನ ಎನ್‌ಐಎ ವಿಶೇಷ ಕೋರ್ಟ್‌ನಲ್ಲಿ ಈ ಪ್ರಕ್ರಿಯೆ ನಡೆದಿದ್ದು, ತಪ್ಪೊಪ್ಪಿಕೊಂಡ ಹಿನ್ನೆಲೆಯಲ್ಲಿ ವಿಚಾರಣೆ ವೇಗವಾಗಿ ಮುಕ್ತಾಯಗೊಂಡು ಶಿಕ್ಷೆ ಪ್ರಕಟವಾಗಿದೆ. ಆರೋಪಿಯ ಕೌಟುಂಬಿಕ ಹಿನ್ನೆಲೆ ಮತ್ತು ಆತ ತಪ್ಪೊಪ್ಪಿಕೊಂಡಿರುವ ಅಂಶವನ್ನು ಗಮನದಲ್ಲಿಟ್ಟು ನ್ಯಾಯಾಲಯವು, 10 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಆದೇಶ ನೀಡಿದೆ.
30-07-26 09:27 pm
HK News Staffer
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
ಸಂಪುಟ ವಿಸ್ತರಣೆ ಫಿಕ್ಸ್ ಆಗುತ್ತಿದ್ದಂತೆ ಹೈಕಮಾಂಡ್...
28-07-26 08:12 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
30-07-26 07:51 pm
HK News Staffer
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಮಂಗಳೂರು, ಉಳ್ಳಾಲದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ದ...
28-07-26 10:28 pm
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
30-07-26 09:24 pm
HK News Staffer
ಫೇಸ್ಬುಕ್ ಫ್ರೆಂಡ್ಶಿಪ್ ದುಬಾರಿ ! ಚಿನ್ನದ ಪಾರ್ಸೆ...
30-07-26 08:31 pm
ನಿವೃತ್ತ ಬಸ್ ಡ್ರೈವರ್ ಮನೆಯಲ್ಲಿ 48 ಕೋಟಿಗೂ ಅಧಿಕ...
30-07-26 02:16 pm
ಪರಿಷತ್ ಸ್ಥಾನ ಕೊಡಿಸುವುದಾಗಿ ಹೇಳಿ ಒಂದೂವರೆ ಕೋಟಿ ಪ...
30-07-26 12:18 pm
ಮಂಗಳೂರು ಪೊಲೀಸರಿಂದ 82 ಕೋಟಿ ರೂ. ಮೌಲ್ಯದ ಡ್ರಗ್ಸ್...
29-07-26 10:45 pm