ಬ್ರೇಕಿಂಗ್ ನ್ಯೂಸ್
29-04-26 11:10 pm HK News Staffer ಕ್ರೈಂ
ಧಾರವಾಡ, ಏಪ್ರಿಲ್ 29: ವಿದ್ಯಾರ್ಥಿ ಆದಿತ್ಯ ಮ್ಯಾಗೇರಿ ಆತ್ಮಹತ್ಯೆ ಪ್ರಕರಣವು ರಾಜ್ಯವನ್ನೇ ಬೆಚ್ಚಿಬೀಳಿಸುವಂತೆ ತಿರುವು ಪಡೆದುಕೊಂಡಿದ್ದು, ಧಾರವಾಡ ನಗರದ ವಿದ್ಯಾಗಿರಿ ಪೊಲೀಸ್ ಠಾಣೆಯ ಮೂವರು ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ಹೆಡ್ ಕಾನ್ಸ್‌ಟೇಬಲ್ ಚಂದ್ರು ನಡುವಿನಮನಿ, ಕಿರಣ್ ಡೊಕ್ಕಣ್ಣನವರ್ ಹಾಗೂ ಸಯದ್ ತಹಸಿಲ್ದಾರ್ ವಿರುದ್ಧ ಸಸ್ಪೆಂಡ್ ಕ್ರಮ ಕೈಗೊಳ್ಳಲಾಗಿದೆ.
ಮೃತ ಆದಿತ್ಯ ಮ್ಯಾಗೇರಿ, ಬಾಗಲಕೋಟೆ ಜಿಲ್ಲೆಯ ಬೇಲೂರು ಗ್ರಾಮದವನಾಗಿದ್ದು, ಕಿಟೆಲ್ ಕಾಲೇಜು ನಲ್ಲಿ ಬಿಎಸ್‌ಸಿ ವ್ಯಾಸಂಗ ಮಾಡುತ್ತಿದ್ದನು. ಗಿರಿನಗರದಲ್ಲಿ ಸ್ನೇಹಿತರೊಂದಿಗೆ ವಾಸವಾಗಿದ್ದ ಆದಿತ್ಯನನ್ನು ಗಾಂಜಾ ಸೇವನೆ ಆರೋಪದಡಿ ಪೊಲೀಸರ ವಶಕ್ಕೆ ಪಡೆದುಕೊಂಡಿದ್ದರು. ಆದರೆ ಪರೀಕ್ಷೆಯಲ್ಲಿ ಗಾಂಜಾ ಸೇವನೆ ನೆಗೆಟಿವ್ ಬಂದಿದ್ದರೂ, ಪೊಲೀಸರು ₹2,000 ಹಣ ಬೇಡಿಕೆ ಇಟ್ಟಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ತಾಯಿಯಿಂದ ಹಣ ಕಳುಹಿಸುವಂತೆ ಕೇಳಿದ್ದ ಆದಿತ್ಯಗೆ ನಿರಾಕರಣೆ ಬಂದಿದ್ದು, ಪೊಲೀಸರು ಮತ್ತೆ ಕಿರುಕುಳ ನೀಡಬಹುದು ಎಂಬ ಭಯದಿಂದ ತಡರಾತ್ರಿ ನೇಣಿಗೆ ಶರಣಾಗಿದ್ದಾನೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. “ನನ್ನ ಮಗನ ಸಾವಿಗೆ ಪೊಲೀಸರ ಕಿರುಕುಳವೇ ಕಾರಣ” ಎಂದು ತಾಯಿ ಕವಿತಾ ಮ್ಯಾಗೇರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರಕರಣ ಗಂಭೀರವಾಗುತ್ತಿದ್ದಂತೆಯೇ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರಿಗೆ ಕರೆ ಮಾಡಿ ನ್ಯಾಯಯುತ ತನಿಖೆ ನಡೆಸುವಂತೆ ಸೂಚಿಸಿದ್ದಾರೆ. ತಪ್ಪಿತಸ್ಥ ಪೊಲೀಸ್ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಮತ್ತು ಮೃತ ವಿದ್ಯಾರ್ಥಿಯ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿದ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್, ಹಿರಿಯ ಅಧಿಕಾರಿಗಳ ವರದಿ ಆಧಾರದ ಮೇಲೆ ಮೂವರು ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಡಿಸಿಪಿ ಶೃತಿ ನೇತೃತ್ವದಲ್ಲಿ ತನಿಖೆ ನಡೆಯುತ್ತಿದ್ದು, ಹಣ ಬೇಡಿಕೆ ಆರೋಪಗಳನ್ನೂ ಪರಿಶೀಲಿಸಲಾಗುತ್ತಿದೆ. ಪ್ರಕರಣದಲ್ಲಿ ಯಾರೇ ಭಾಗಿಯಾಗಿದ್ದರೂ ಅವರನ್ನು ರಕ್ಷಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಇದೇ ವೇಳೆ, ಗಾಂಜಾ ಡ್ರೈವ್ ವೇಳೆ ಇಬ್ಬರು ಪೆಡ್ಲರ್‌ಗಳನ್ನು ಬಂಧಿಸಲಾಗಿದ್ದು, ಗಾಂಜಾ ಸೇವನೆ ದೃಢಪಟ್ಟ ಇಬ್ಬರು ವಿದ್ಯಾರ್ಥಿಗಳ ವಿರುದ್ಧವೂ ಪ್ರಕರಣ ದಾಖಲಾಗಿದೆ.
ಕಾನೂನು ರಕ್ಷಕರ ಮೇಲೆ ಇಂತಹ ಗಂಭೀರ ಆರೋಪಗಳು ಸಮಾಜದಲ್ಲಿ ಆತಂಕ ಮೂಡಿಸುತ್ತವೆ. ಯಾವುದೇ ಕಿರುಕುಳ ಎದುರಾದಾಗ ಕಾನೂನು ಮಾರ್ಗದಲ್ಲಿ ದೂರು ನೀಡುವುದು ಅಗತ್ಯ. ಮಾನಸಿಕ ಒತ್ತಡದ ಸಂದರ್ಭಗಳಲ್ಲಿ ಸಹಾಯವನ್ನು ಹುಡುಕುವುದು ಜೀವ ಉಳಿಸುವ ಪ್ರಮುಖ ಹೆಜ್ಜೆಯಾಗಿದ್ದು, ಕುಟುಂಬ ಹಾಗೂ ಸಮಾಜ ಬೆಂಬಲ ಅತ್ಯಂತ ಮುಖ್ಯವಾಗಿದೆ.
A BSc student allegedly died by suicide after being pressured for money in connection with a ganja (cannabis) case. Following the incident, three police personnel have been suspended.
08-07-26 02:06 pm
HK News Staffer
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
ದೇಶದ 'ತೂಗುಸೇತುವೆಗಳ ಸರದಾರ' ಪದ್ಮಶ್ರೀ ಡಾ. ಗಿರೀಶ್...
07-07-26 10:52 am
ಮೈಸೂರು ದಸರಾದಲ್ಲಿ ಕಂಬಳ ಬೇಡವೇ ಬೇಡ ; ಯದುವೀರ್ ಒಡ...
06-07-26 04:40 pm
07-07-26 03:22 pm
HK News Staffer
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
ಚೀನಾ ಮಹಾಗೋಡೆ ಮಾದರಿಯಲ್ಲೇ ಆಫ್ರಿಕಾ ಮರುಭೂಮಿಯಲ್ಲಿ...
04-07-26 08:09 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
07-07-26 08:07 pm
HK News Staffer
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm
Panambur Gold Robbery, Photo Released: ಚಿನ್ನದ...
06-07-26 12:28 pm
ಬಂಟ್ವಾಳ ; ಬಸ್ಸಿಗೆ ನಿಂತಿದ್ದ ಪಿಯುಸಿ ವಿದ್ಯಾರ್ಥಿನ...
06-07-26 11:59 am