ಬ್ರೇಕಿಂಗ್ ನ್ಯೂಸ್
01-05-26 11:48 am HK News Staffer ಕ್ರೈಂ
ಬೆಂಗಳೂರು, ಮೇ 01: ಚಿನ್ನ-ಬೆಳ್ಳಿ ದರ ಏರಿಕೆಯಾಗುತ್ತಿದ್ದಂತೆ ಕಳ್ಳರ ಅಟ್ಟಹಾಸ ಮತ್ತೆ ಹೆಚ್ಚಾಗಿದೆ. ನಗರದ ದಾಸರಹಳ್ಳಿ ಸಮೀಪದ ಹಾವನೂರಿನಲ್ಲಿರುವ ಎಂಬಿ ಜ್ಯೂವೆಲ್ಲರಿ ಮಳಿಗೆಯಲ್ಲಿ ಭಾರೀ ಕಳ್ಳತನ ನಡೆದಿದ್ದು, ಸುಮಾರು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ವಸ್ತುಗಳನ್ನು ದುಷ್ಕರ್ಮಿಗಳು ದೋಚಿದ್ದಾರೆ.
ಘಟನೆ ಎರಡು ದಿನಗಳ ಹಿಂದೆ ನಡೆದಿದ್ದು, ಅತ್ಯಂತ ಕುತಂತ್ರದಿಂದ ಕಳ್ಳತನ ಮಾಡಲಾಗಿದೆ. ಮಳಿಗೆಯ ಹಿಂಭಾಗದ ಕೊಠಡಿಯ ಬೀಗ ಒಡೆದು ಒಳನುಗ್ಗಿದ ಕಳ್ಳರು, ಬಳಿಕ ಗೋಡೆಯನ್ನೇ ಕೊರೆದು ಮುಖ್ಯ ಅಂಗಡಿಗೆ ಪ್ರವೇಶಿಸಿ ಸುಮಾರು 70 ಕೆಜಿ ಬೆಳ್ಳಿ ವಸ್ತುಗಳನ್ನು ಕದ್ದೊಯ್ದಿದ್ದಾರೆ.
ಘಟನೆಯ ಮಾಹಿತಿ ಸಿಕ್ಕ ತಕ್ಷಣ ಸ್ಥಳಕ್ಕೆ ಧಾವಿಸಿದ ಬಾಗಲಗುಂಟೆ ಪೊಲೀಸ್ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳು ಹಾಗೂ ಕಳ್ಳರು ಬಳಸಿದ ವಿಧಾನಗಳ ಆಧಾರದ ಮೇಲೆ ತನಿಖೆ ಚುರುಕುಗೊಂಡಿದ್ದು, ಆರೋಪಿಗಳ ಪತ್ತೆಗೆ ವಿಶೇಷ ತಂಡಗಳನ್ನು ನಿಯೋಜಿಸಲಾಗಿದೆ.
ನಗರದಲ್ಲಿ ಇತ್ತೀಚೆಗೆ ಸರಣಿ ಕಳ್ಳತನಗಳು ಹೆಚ್ಚುತ್ತಿರುವ ಹಿನ್ನೆಲೆ ವ್ಯಾಪಾರಿಗಳು ಹಾಗೂ ಸಾರ್ವಜನಿಕರಲ್ಲಿ ಆತಂಕ ಮನೆಮಾಡಿದೆ.
ಮೌಲ್ಯವಾದ ವಸ್ತುಗಳಿರುವ ಅಂಗಡಿಗಳು ಹಾಗೂ ಮನೆಗಳಲ್ಲಿ ಭದ್ರತಾ ವ್ಯವಸ್ಥೆ ಬಲಪಡಿಸುವುದು ಅಗತ್ಯ. ಸಿಸಿಟಿವಿ, ಅಲಾರಂ ವ್ಯವಸ್ಥೆಗಳನ್ನು ಸಮರ್ಪಕವಾಗಿ ಬಳಸುವುದು ಹಾಗೂ ಅನುಮಾನಾಸ್ಪದ ಚಟುವಟಿಕೆಗಳನ್ನು ತಕ್ಷಣ ಪೊಲೀಸರಿಗೆ ತಿಳಿಸುವುದು ಕಳ್ಳತನ ತಡೆಯಲು ಸಹಕಾರಿಯಾಗಲಿದೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am