ಬ್ರೇಕಿಂಗ್ ನ್ಯೂಸ್
01-05-26 01:45 pm HK News Staffer ಕ್ರೈಂ
ಬೆಂಗಳೂರು, ಮೇ 1: ಮಹಿಳೆಯರನ್ನು ಬ್ಲ್ಯಾಕ್ಮೇಲ್ ಮಾಡಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ರಾಮನಗರ ಮಕ್ಕಳ ಆಯೋಗ ಸಮಿತಿ ಸದಸ್ಯ ಚಂದ್ರೇಗೌಡನನ್ನು ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪ್ರಕರಣ ಬೆಳಕಿಗೆ ಬಂದಂತೆ ಹಲವು ಆಘಾತಕಾರಿ ಅಂಶಗಳು ಬಹಿರಂಗವಾಗಿವೆ.
ಪೊಲೀಸರ ಮಾಹಿತಿ ಪ್ರಕಾರ, ಆರೋಪಿ ಮಹಿಳೆಯರನ್ನು ಪರಿಚಯ ಮಾಡಿಕೊಂಡು ನಕಲಿ ಪರಿಚಯ ನೀಡಿ ನಂಬಿಸುತ್ತಿದ್ದ. ಪೊಲೀಸ್ ಅಧಿಕಾರಿ, ವಕೀಲ, ಮಾಧ್ಯಮ ಪ್ರತಿನಿಧಿ ಎಂಬಂತೆ ನಕಲಿ ಗುರುತಿನ ಚೀಟಿಗಳನ್ನು ಬಳಸಿ ಭೀತಿ ಹುಟ್ಟಿಸಿ, ನಂತರ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದನು. ಖಾಸಗಿ ಕ್ಷಣಗಳನ್ನು ವಿಡಿಯೋ ಮಾಡಿ, ಅದನ್ನೇ ಬ್ಲ್ಯಾಕ್ಮೇಲ್‌ಗೆ ಬಳಸುತ್ತಿದ್ದನೆಂಬ ಆರೋಪ ಕೇಳಿಬಂದಿದೆ.
ಆರೋಪಿಯ ಮೊಬೈಲ್ ಪರಿಶೀಲನೆಯ ವೇಳೆ 20ಕ್ಕೂ ಹೆಚ್ಚು ಮಹಿಳೆಯರ ವಿಡಿಯೋ ಹಾಗೂ ಫೋಟೋಗಳು ಪತ್ತೆಯಾಗಿದ್ದು, ಪ್ರಕರಣದ ಗಂಭೀರತೆ ಹೆಚ್ಚಿಸಿದೆ. ಗಂಡನಿಂದ ದೂರವಾಗಿದ್ದ ಮಹಿಳೆಯನ್ನು ಮದುವೆಯಾಗುತ್ತೇನೆಂದು ನಂಬಿಸಿ, ಆಕೆಯೊಂದಿಗೆ ಸಂಬಂಧ ಬೆಳೆಸಿ ಬಳಿಕ ಹಣ ವಸೂಲಿ ಮಾಡಿದ್ದಾನೆ ಎಂದು ದೂರಲಾಗಿದೆ. ಒಂದೇ ಪ್ರಕರಣದಲ್ಲಿ ಸುಮಾರು 5 ಲಕ್ಷ ರೂಪಾಯಿ ಹಣ ಪಡೆದಿರುವುದಾಗಿ ತಿಳಿದುಬಂದಿದೆ.
ಇನ್ನು ಮದುವೆಯ ನಾಟಕವನ್ನೂ ಆಡಿದ್ದ ಆರೋಪಿ, ಸಂತ್ರಸ್ತೆಗೆ ಅರಿಶಿನದ ಕೊಂಬು ಕಟ್ಟುವ ಮೂಲಕ ವಿವಾಹವಾಗಿದ್ದೇನೆಂದು ನಂಬಿಸಿದ್ದ. ಆಕೆಯ ಆಧಾರ್ ಕಾರ್ಡ್ ಪಡೆದು, ತಾನೇ ಗಂಡನೆಂದು ತೋರಿಸಿ ಮನೆ ಬಾಡಿಗೆ ಒಪ್ಪಂದ ಕೂಡ ಮಾಡಿಸಿದ್ದಾನೆ ಎನ್ನಲಾಗಿದೆ. ಸಂತ್ರಸ್ತೆಯ ಮಗಳ ದಾಖಲೆಗಳನ್ನೂ ಬದಲಾಯಿಸಲು ಯತ್ನಿಸಿದ್ದಾನೆ ಎಂಬ ಆರೋಪವೂ ಕೇಳಿಬಂದಿದೆ.
ಸಂತ್ರಸ್ತೆ ಆರೋಪಿ ಮೊಬೈಲ್ ಪರಿಶೀಲಿಸಿದಾಗ ಈ ದಂಧೆ ಬಯಲಾಗಿದ್ದು, ಬಳಿಕ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾಳೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ಮುಂದುವರೆಸಿದ್ದಾರೆ.
ಅಪರಿಚಿತರೊಂದಿಗೆ ವೈಯಕ್ತಿಕ ಮಾಹಿತಿ ಹಂಚಿಕೊಳ್ಳುವಾಗ ಹಾಗೂ ಸಂಬಂಧ ಬೆಳೆಸುವಾಗ ಎಚ್ಚರಿಕೆ ಅಗತ್ಯ. ಯಾವುದೇ ರೀತಿಯ ಬೆದರಿಕೆ ಅಥವಾ ಬ್ಲ್ಯಾಕ್ಮೇಲ್ ಎದುರಾದರೆ ತಕ್ಷಣ ಪೊಲೀಸರಿಗೆ ದೂರು ನೀಡುವುದು ಅತ್ಯಂತ ಮುಖ್ಯ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am