ಬ್ರೇಕಿಂಗ್ ನ್ಯೂಸ್
05-05-26 05:22 pm HK News Staffer ಕ್ರೈಂ
ಬೆಂಗಳೂರು, ಮೇ 05: ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲೇ ಕೋಟ್ಯಾಂತರ ರೂ ಬೆಲೆ ಬಾಳುವ ಚಿನ್ನಾಭರಣದ ಕಳ್ಳತನ ನಡೆದಿದೆ. ಅಚ್ಚರಿಯ ವಿಚಾರವೆಂದರೆ, ಹೊರಗಿನವರಾರೂ ಈ ಕೃತ್ಯ ಎಸಗಿಲ್ಲ, ಬದಲಾಗಿ ಸಚಿವರ ತಾಯಿಯ ಸ್ವಂತ ರಕ್ತಸಂಬಂಧಿಯೇ ಈ ಕಳ್ಳತನದ ಮಾಸ್ಟರ್ ಮೈಂಡ್ ಆಗಿದ್ದಾನೆ.
ಪ್ರಕರಣವನ್ನು ಭೇದಿಸಿರುವ ಶಿವಾಜಿನಗರ ಠಾಣೆ ಪೊಲೀಸರು, ಇಬ್ಬರು ಖದೀಮರನ್ನ ಬಂಧಿಸಿದ್ದಾರೆ. ಸೈಯದ್ ಅಮೀರ್ ಹಾಗೂ ಅಮಿರ್ ಅಹ್ಮದ್ ಬಂಧಿತ ಆರೋಪಿಗಳು. ಇವರಲ್ಲಿ ಸೈಯದ್ ಅಮೀರ್, ಸಚಿವ ಜಮೀರ್ ತಾಯಿಗೆ ಅತ್ಯಂತ ಹತ್ತಿರದ ಸಂಬಂಧಿ. ಮತ್ತೊಬ್ಬ ಆರೋಪಿ ಅಮಿರ್ ಅಹ್ಮದ್, ಸೈಯದ್ ಜೊತೆ ಟ್ರಾವೆಲ್ಸ್ ಉದ್ಯಮದಲ್ಲಿ ಪಾಲುದಾರನಾಗಿದ್ದ. ಇಬ್ಬರೂ ಸೇರಿ ಈ ಖತರ್ನಾಕ್ ಪ್ಲಾನ್ ಮಾಡಿದ್ದಾರೆ. ಸದ್ಯ ಬಂಧಿತರಿಂದ ಪೊಲೀಸರು ಬರೋಬ್ಬರಿ 1 ಕೋಟಿ 13 ಲಕ್ಷ ರೂಪಾಯಿ ಮೌಲ್ಯದ 759 ಗ್ರಾಂ ಚಿನ್ನಾಭರಣಗಳನ್ನು ರಿಕವರಿ ಮಾಡಿದ್ದಾರೆ.
ಆರೋಪಿಗಳಿಬ್ಬರೂ ಸೇರಿ ಟ್ರಾವೆಲ್ಸ್ ಬ್ಯುಸಿನೆಸ್ ನಡೆಸುತ್ತಿದ್ದರು. ಆದರೆ, ಕೋವಿಡ್-19 ಲಾಕ್ಡೌನ್ನಿಂದಾಗಿ ಇವರ ಉದ್ಯಮ ಪಾತಾಳಕ್ಕೆ ಕುಸಿದಿತ್ತು. ಆದ ನಷ್ಟವನ್ನು ಸರಿದೂಗಿಸಲು ಮತ್ತು ಸಾಲಗಾರರಿಂದ ಪಾರಾಗಲು ಹಣದ ತೀವ್ರ ಅವಶ್ಯಕತೆ ಇತ್ತು. ಎಲ್ಲಿಯೂ ಸಾಲ ಸಿಗದಿದ್ದಾಗ, ಸೈಯದ್ ತನ್ನ ಸಂಬಂಧಿಯಾದ ಸಚಿವ ಜಮೀರ್ ಮನೆಯನ್ನೇ ಟಾರ್ಗೆಟ್ ಮಾಡಿದ್ದ. ಅಲ್ಲಿಂದ ಚಿನ್ನ ಕದ್ದು, ಅದನ್ನು ಅಡವಿಟ್ಟು ಬಂದ ಹಣವನ್ನು ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ಹೂಡಿಕೆ ಮಾಡಿ ಕೋಟ್ಯಧಿಪತಿಯಾಗುವ ದುರಾಸೆ ಈತನದ್ದಾಗಿತ್ತು
ಸಚಿವರ ತಾಯಿಯ ರಕ್ತಸಂಬಂಧಿ ಆಗಿದ್ದರಿಂದ ಸೈಯದ್ ಅಮೀರ್ಗೆ ಜಮೀರ್ ಮನೆಗೆ ಮುಕ್ತ ಪ್ರವೇಶವಿತ್ತು. ಪ್ರತಿದಿನ ಮನೆಗೆ ಬರುತ್ತಿದ್ದ ಈತ, ಎಲ್ಲರೊಂದಿಗೂ ಅಚ್ಚುಮೆಚ್ಚಿನವನಂತೆ ನಟಿಸುತ್ತಿದ್ದ. ಇದೇ ನಂಬಿಕೆಯನ್ನು ಬಂಡವಾಳವಾಗಿಟ್ಟುಕೊಂಡ ಈತ, 2023ನೇ ಇಸವಿಯಿಂದಲೇ ಯಾರಿಗೂ ಅನುಮಾನ ಬಾರದಂತೆ ಸ್ವಲ್ಪ ಸ್ವಲ್ಪವೇ ಚಿನ್ನಾಭರಣಗಳನ್ನು ಕದಿಯಲಾರಂಭಿಸಿದ್ದ. ಈ ರೀತಿ ಬರೋಬ್ಬರಿ 1 ಕೆಜಿ 200 ಗ್ರಾಂ ಚಿನ್ನವನ್ನು ಲಪಟಾಯಿಸಿದ್ದರು.
ಮನೆಯಲ್ಲಿ ಚಿನ್ನಾಭರಣಗಳು ಕಾಣೆಯಾಗುತ್ತಿರುವ ವಿಚಾರ ಕುಟುಂಬಸ್ಥರ ಗಮನಕ್ಕೆ ಬರುತ್ತಿದ್ದಂತೆ, ಸೈಯದ್ ಅಮೀರ್ ಅಲರ್ಟ್ ಆಗಿದ್ದ. ಪ್ರತಿದಿನ ಮನೆಗೆ ಬರುತ್ತಿದ್ದವನು ದಿಢೀರ್ ಎಂದು ಬರುವುದನ್ನು ನಿಲ್ಲಿಸಿದ್ದ. ಕುಟುಂಬದವರು ಕರೆ ಮಾಡಿದರೂ ಸ್ವೀಕರಿಸುತ್ತಿರಲಿಲ್ಲ. ಕೊನೆಗೆ ತನ್ನ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿದ್ದ. ಈತನ ವರ್ತನೆಯಿಂದ ಅನುಮಾನಗೊಂಡ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದರು. ಶಿವಾಜಿನಗರ ಪೊಲೀಸರು ತಾಂತ್ರಿಕ ಜಾಲದ ಮೂಲಕ ಆರೋಪಿಗಳಿಬ್ಬರನ್ನೂ ಹೆಡೆಮುರಿ ಕಟ್ಟಿ ವಿಚಾರಣೆ ನಡೆಸಿದಾಗ ಅಸಲಿ ಬಣ್ಣ ಬಯಲಾಗಿದೆ.
In a shocking case of betrayal, gold jewellery worth crores of rupees has been stolen from the residence of Karnataka Minister Zameer Ahmed Khan. The accused is not an outsider, but a close blood relative of the minister’s mother, police revealed.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am