ಬ್ರೇಕಿಂಗ್ ನ್ಯೂಸ್
06-05-26 01:53 pm HK News Staffer ಕ್ರೈಂ
ಕಾರ್ಕಳ, ಮೇ 5: ಕ್ಯಾನ್ಸರ್ ರೋಗವನ್ನು ಆಯುರ್ವೇದಿಕ್ ಚಿಕಿತ್ಸೆ ಮೂಲಕ ಗುಣಪಡಿಸುವುದಾಗಿ ನಂಬಿಸಿ ಲಕ್ಷಾಂತರ ರೂ. ವಂಚಿಸಿರುವ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳ್ಳಣ್ ಗ್ರಾಮದ ರೊನಾಲ್ಡ್ ರೋಡ್ರಿಗಸ್(68) ಎಂಬವರ ಪತ್ನಿಗೆ ಕ್ಯಾನ್ಸರ್ ಕಾಯಿಲೆ ಇದ್ದು ಮಾ.23ರಂದು ಅವರು ತನ್ನ ಹೆಂಡತಿಯನ್ನು ಫಿಸಿಯೋಥೆರಫಿಗೆ ಮಣಿಪಾಲ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು. ಬಳಿಕ ರೋನಾಲ್ಡ್ ಅವರಿಗೆ ಉಡುಪಿಯ ಕಡಿಯಾಳಿ ದೇವಸ್ಥಾನದ ಬಳಿ ಸಿದ್ದಾರ್ಥ್ ಎಂಬಾತ ಪರಿಚಯವಾಗಿದ್ದು, ಆತ ಆಯುರ್ವೇದಿಕ್ ಚಿಕಿತ್ಸೆ ಮೂಲಕ ನಿಮ್ಮ ಪತ್ನಿಯ ರೋಗ ಗುಣಪಡಿಸಬಹುದು ಎಂದು ನಂಬಿಸಿದ್ದಾನೆ.
ಅದರಂತೆ ರೋನಾಲ್ಡ್ ಸಿದ್ದಾರ್ಥ್ ಪರಿಚಯಿಸಿದ ಮಾಧವ ಎಂಬಾತ ಸೂಚಿಸಿದ ಅನಿಲ್ ಪವಾರ್ ಎಂಬ ಹೆಸರಿನ ಖಾತೆಗೆ ಹಣ ವರ್ಗಾವಣೆ ಮಾಡಿದ್ದರು. ಹೆಚ್ಚಿನ ಹಣಕ್ಕೆ ಬೇಡಿಕೆ ಇಟ್ಟಿದ್ದರಿಂದ 40,000ರೂ. ಹಣವನ್ನು ಸಿದ್ದಾರ್ಥ್ಗೆ ನೀಡಿದ್ದರು.ಅಲ್ಲದೆ ಆರೋಪಿ ಉಡುಪಿಯ ಆರ್ಯುವೇದಿಕ್ ಔಷಧಿ ಅಂಗಡಿಯಲ್ಲಿನ ಔಷದಿ ಖರೀದಿಸಿ ಸೇವಿಸಿದರೆ ಖಾಯಿಲೆ ಗುಣ ಆಗುತ್ತದೆ ಎಂದು ಹೇಳಿದ್ದು ಅದರಂತೆ 10,80,000ರೂ.
ಮೊತ್ತದ ಚೆಕ್ ನೀಡಿ ಔಷಧಿ ಖರೀದಿಸಿದ್ದರು. ಆದರೆ ಈ ಔಷಧಿಗಳನ್ನು ತಮ್ಮ ಪತ್ನಿಗೆ ನೀಡಿದರೂ ಈವರೆಗೆ ಗುಣಮುಖರಾಗದೇ ಇದ್ದ ಕಾರಣ ರೋನಾಲ್ಡ್ ಆರೋಪಿಗಳಿಗೆ ಕರೆ ಮಾಡಿದ್ದರು. ಆದರೆ ಮೊಬೈಲ್ ಸ್ವಿಚ್ ಆಫ್ ಆಗಿದ್ದು ಆರೋಪಿಗಳು ರೋನಾಲ್ಡ್ ಹೆಂಡತಿಗೆ ಇರುವ ಖಾಯಿಲೆಯನ್ನು ಗುಣಪಡಿಸುವುದಾಗಿ ನಂಬಿಸಿ ಒಟ್ಟು 12,09,160ರೂ. ವಂಚಿಸಿರುವುದಾಗಿ ದೂರಲಾಗಿದೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am