ಬ್ರೇಕಿಂಗ್ ನ್ಯೂಸ್
07-05-26 12:17 pm HK News Staffer ಕ್ರೈಂ
ಕೋಲ್ಕತ್ತಾ, ಮೇ 07: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಐತಿಹಾಸಿಕ ಗೆಲುವು ಸಾಧಿಸಿ ಸರ್ಕಾರ ರಚನೆಗೆ ಸಜ್ಜಾಗಿರುವ ಬೆನ್ನಲ್ಲೇ ರಾಜ್ಯ ರಾಜಕೀಯವನ್ನು ನಡುಗಿಸುವ ಭೀಕರ ಘಟನೆ ನಡೆದಿದೆ. ಪ್ರತಿಪಕ್ಷ ನಾಯಕ ಹಾಗೂ ಮುಖ್ಯಮಂತ್ರಿ ಹುದ್ದೆಯ ಪ್ರಬಲ ಆಕಾಂಕ್ಷಿಯಾಗಿರುವ ಸುವೇಂದು ಅಧಿಕಾರಿ ಅವರ ಆಪ್ತ ಸಹಾಯಕ ಚಂದ್ರನಾಥ್ ರಥ್ ಅವರನ್ನ ದುಷ್ಕರ್ಮಿಗಳು ಗುಂಡಿಕ್ಕಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ.
ಉತ್ತರ 24 ಪರಗಣ ಜಿಲ್ಲೆಯ ಮಧ್ಯಮಗ್ರಾಮ್ ಸಮೀಪದ ದೊಹರಿಯಾ ಪ್ರದೇಶದಲ್ಲಿ ಬುಧವಾರ ರಾತ್ರಿ ಈ ದುರ್ಘಟನೆ ಸಂಭವಿಸಿದೆ. 41 ವರ್ಷದ ಚಂದ್ರನಾಥ್ ರಥ್ ಸಾರ್ವಜನಿಕ ರಸ್ತೆಯಲ್ಲಿ ತೆರಳುತ್ತಿದ್ದ ವೇಳೆ ಬೈಕ್ನಲ್ಲಿ ಬಂದ ದುಷ್ಕರ್ಮಿಗಳು ಅವರ ವಾಹನವನ್ನು ತಡೆದು ಪಾಯಿಂಟ್ ಬ್ಲ್ಯಾಂಕ್ನಲ್ಲಿ ಗುಂಡಿನ ದಾಳಿ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡ ಅವರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಘಟನೆಯ ಬಳಿಕ ಆಕ್ರೋಶ ವ್ಯಕ್ತಪಡಿಸಿರುವ ಸುವೇಂದು ಅಧಿಕಾರಿ, “ಇದು ಆಕಸ್ಮಿಕ ಹತ್ಯೆಯಲ್ಲ, ಸಂಪೂರ್ಣ ಪೂರ್ವಯೋಜಿತ ಕೋಲ್ಡ್ ಬ್ಲಡ್ ಮರ್ಡರ್. ಹಂತಕರು ಕಳೆದ ಎರಡು-ಮೂರು ದಿನಗಳಿಂದ ರಥ್ ಅವರ ಚಲನವಲನಗಳ ಮೇಲೆ ನಿಗಾವಹಿಸಿದ್ದರು” ಎಂದು ಗಂಭೀರ ಆರೋಪ ಮಾಡಿದ್ದಾರೆ. ರಾಜ್ಯ ಪೊಲೀಸ್ ಮಹಾನಿರ್ದೇಶಕರೂ ಸಹ ಇದು ಯೋಜಿತ ಕೃತ್ಯ ಎಂಬುದನ್ನು ಒಪ್ಪಿಕೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.
ಮತ್ತೊಂದೆಡೆ, ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ ನಡೆಸಿದೆ. “ಬಂಗಾಳದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ. ಇದು ಟಿಎಂಸಿಯ ‘ಜಂಗಲ್ ರಾಜ್’ಗೆ ಜೀವಂತ ಸಾಕ್ಷಿ” ಎಂದು ಸುವೇಂದು ಅಧಿಕಾರಿ ಕಿಡಿಕಾರಿದರು. ಆದರೆ ಇದೇ ವೇಳೆ ಕಾರ್ಯಕರ್ತರು ಕಾನೂನು ಕೈಗೆತ್ತಿಕೊಳ್ಳಬಾರದು ಎಂದು ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದಾರೆ.
ಪ್ರಾಥಮಿಕ ತನಿಖೆಯ ಪ್ರಕಾರ, ರಾತ್ರಿ ಸುಮಾರು 10:30ರ ವೇಳೆಗೆ ಮಧ್ಯಗ್ರಾಮ್ನ ಡೋಲ್ತಾಲಾ ಗ್ರಾಮದ ಬಳಿ ಮೋಟಾರ್ ಬೈಕ್ನಲ್ಲಿ ಬಂದ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಘಟನಾ ಸ್ಥಳದಿಂದ ಪೊಲೀಸರು ಮಹತ್ವದ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದು, ವಿಶೇಷ ತಂಡಗಳ ಮೂಲಕ ತನಿಖೆ ಚುರುಕುಗೊಳಿಸಲಾಗಿದೆ.
ಇದೀಗ ರಾಜ್ಯ ರಾಜಕೀಯದಲ್ಲಿ ಈ ಘಟನೆ ಭಾರೀ ಸಂಚಲನ ಮೂಡಿಸಿದೆ. ಚುನಾವಣೆಯಲ್ಲಿ ಬಿಜೆಪಿ 294 ಸ್ಥಾನಗಳ ಪೈಕಿ 207 ಸ್ಥಾನಗಳನ್ನು ಗೆದ್ದು ಬಹುಮತ ಸಾಧಿಸಿದ್ದು, ಟಿಎಂಸಿ 80 ಸ್ಥಾನಗಳಿಗೆ ಕುಸಿದಿದೆ. ಮೇ 9ರಂದು ಬಿಜೆಪಿ ಮೊದಲ ಬಾರಿಗೆ ಬಂಗಾಳದಲ್ಲಿ ಸರ್ಕಾರ ರಚಿಸಲು ಸಿದ್ಧವಾಗಿರುವ ಸಂದರ್ಭದಲ್ಲೇ ಈ ಹತ್ಯೆ ನಡೆದಿರುವುದು ರಾಜಕೀಯ ಉದ್ವಿಗ್ನತೆಯನ್ನು ಮತ್ತಷ್ಟು ಹೆಚ್ಚಿಸಿದೆ.
ಇನ್ನೊಂದೆಡೆ, ಸೋಲಿನ ವಿರುದ್ಧ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ಸಿದ್ಧತೆ ನಡೆಸುತ್ತಿರುವಾಗಲೇ ಈ ಹತ್ಯೆ ಪ್ರಕರಣ ಬಂಗಾಳದ ರಾಜಕೀಯ ವಾತಾವರಣವನ್ನು ಮತ್ತಷ್ಟು ಕಾವೇರಿಸಿದೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am