ಬ್ರೇಕಿಂಗ್ ನ್ಯೂಸ್
08-05-26 06:20 pm HK News Staffer ಕ್ರೈಂ
ಮಡಿಕೇರಿ, ಮೇ 8: ಚಲಿಸುತ್ತಿದ್ದ ಖಾಸಗಿ ಬಸ್ನಲ್ಲಿ ಚಾಲಕನಿಗೆ ಹಠಾತ್ ಹೃದಯಾಘಾತ ಸಂಭವಿಸಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಡಿಕೇರಿ ಸಮೀಪದ ತಾಳತ್ ಮನೆ ಬಳಿ ಇಂದು ಮುಂಜಾನೆ ಸಂಭವಿಸಿದೆ.
‘ಪೂರ್ಣಿಮಾ ಟ್ರಾವೆಲ್ಸ್’ ಬಸ್ ಬೆಂಗಳೂರಿನಿಂದ ಮಡಿಕೇರಿಯಿಂದ ಕಡೆಗೆ ಹೊರಟ್ಟಿತ್ತು. ಬೆಳಗ್ಗೆ ಐದು ಗಂಟೆ ಸುಮಾರಿಗೆ ತಾಲೂಕಿನ ತಾಳತ್ ಮನೆ ಬಳಿ ಚಲಿಸುತ್ತಿದ್ದ ವೇಳೆ ಬಸ್ನಲ್ಲೇ ಚಾಲಕನಿಗೆ ತೀವ್ರ ಹೃದಯಾಘಾತ ಸಂಭವಿಸಿದೆ. ಇದರಿಂದ ಬಸ್ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಇಳಿಜಾರಿಗೆ ವಾಲಿಕೊಂಡಿದೆ.
ಹೃದಯಾಘಾತವಾಗುತ್ತಿದ್ದಂತೆಯೇ ಚಾಲಕ ತನ್ನ ಶಕ್ತಿಯನ್ನು ಸಮರ್ಥವಾಗಿ ಬಳಸಿಕೊಂಡು ಬಸ್ ಅನ್ನು ನಿಯಂತ್ರಣಕ್ಕೆ ತರಲು ಪ್ರಯತ್ನಿಸಿದ್ದಾನೆ. ತೀವ್ರ ನೋವಿನ ನಡುವೆಯೂ ಬಸ್ ಚಾಲಕ ಬಸ್ ಅನ್ನು ಚರಂಡಿಯ ಸಮೀಪ ನಿಲ್ಲಿಸಲು ಯಶಸ್ವಿಯಾಗಿದ್ದು, ಇದರಿಂದ ದೊಡ್ಡ ಅನಾಹುತ ತಪ್ಪಿದಂತಾಗಿದೆ.
ಘಟನೆ ವೇಳೆ ಬಸ್ ಸ್ವಲ್ಪ ವಾಲಿಕೊಂಡಿದ್ದರೂ, ಪ್ರಯಾಣಿಕರ ಜೀವಕ್ಕೆ ಯಾವುದೇ ಅಪಾಯ ಸಂಭವಿಸಿಲ್ಲ. ಆದರೆ ತೀವ್ರ ಹೃದಯಾಘಾತದಿಂದ ಚಾಲಕ ಬಸ್ನಲ್ಲೇ ಕೊನೆಯುಸಿರೆಳೆದಿದ್ದಾನೆ. ಘಟನೆ ನಡೆದ ಸ್ಥಳಕ್ಕೆ ಮಡಿಕೇರಿ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಸ್ ರಸ್ತೆ ಬದಿಯಲ್ಲಿ ನಿಂತಿದ್ದರಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರಕ್ಕೆ ಅಡ್ಡಿಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಯ ನಂತರ ಆತಂಕಗೊಂಡಿದ್ದ ಪ್ರಯಾಣಿಕರಿಗೆ ಬದಲಿ ವಾಹನಗಳ ವ್ಯವಸ್ಥೆ ಮಾಡಲಾಗಿದ್ದು, ಎಲ್ಲರನ್ನು ಸುರಕ್ಷಿತವಾಗಿ ಗಮ್ಯಸ್ಥಾನಕ್ಕೆ ಕಳುಹಿಸಲಾಗಿದೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am