ಬ್ರೇಕಿಂಗ್ ನ್ಯೂಸ್
12-05-26 11:19 am HK News Staffer ಕ್ರೈಂ
ಮಂಗಳೂರು, ಮೇ 12: ಕಳೆದ ಆರು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಪಣಂಬೂರು ಪೊಲೀಸರು ಕೊನೆಗೂ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಂಗಳೂರು ತಾಲೂಕಿನ ಬೈಕಂಪಾಡಿಯ ಕುಡುಂಬೂರು ಪ್ರದೇಶದಲ್ಲಿ ನಡೆದಿದ್ದ ಮೊಬೈಲ್ ಅಂಗಡಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿ ಕೇರಳದ ಮಂಜೇಶ್ವರದ ಬಳಿ ಪೊಲೀಸರ ಬಲೆಗೆ ಬಿದ್ದಿದ್ದಾನೆ.
ಬಂಧಿತನನ್ನು ಅಸ್ಸಾಂ ರಾಜ್ಯದ ಕಾಚಾರ್ ಜಿಲ್ಲೆಯ ಸಿಲ್ಚಾರ್ನ ಲಕ್ಕಿಪುರ್ ಠಾಣಾ ವ್ಯಾಪ್ತಿಯ ನಿವಾಸಿ ಪಾರೂಲ್ ಹುಸೈನ್ ಲಸ್ಕರ್ ಅಲಿಯಾಸ್ ಪಾರೂಲ್ (34) ಎಂದು ಗುರುತಿಸಲಾಗಿದೆ.
2018ರಲ್ಲಿ ಬೈಕಂಪಾಡಿ ಗ್ರಾಮದ ಕುಡುಂಬೂರುದಲ್ಲಿರುವ ‘ಪೂಜಾ ಮೊಬೈಲ್ಸ್’ ಅಂಗಡಿಗೆ ರಾತ್ರಿ ವೇಳೆ ನುಗ್ಗಿದ್ದ ಆರೋಪಿಗಳು ಸುಮಾರು 2,17,740 ರೂ. ಮೌಲ್ಯದ ಮೊಬೈಲ್ ಫೋನ್ಗಳು, ಮೊಬೈಲ್ ಬಿಡಿಭಾಗಗಳು, ಸಿಸಿಟಿವಿ ಡಿವಿಆರ್ ಹಾಗೂ 2,100 ರೂ. ನಗದು ಹಣವನ್ನು ಕಳವು ಮಾಡಿದ್ದರು. ಅಲ್ಲದೆ ಅಂಗಡಿಯಲ್ಲಿದ್ದ ಸುಮಾರು 10,000 ರೂ. ಮೌಲ್ಯದ ಎರಡು ಕಂಪ್ಯೂಟರ್ ಮಾನಿಟರ್ಗಳನ್ನು ಧ್ವಂಸಗೊಳಿಸಿ ನಷ್ಟ ಉಂಟುಮಾಡಿದ್ದರು.
ಈ ಸಂಬಂಧ 2018ರಲ್ಲಿ ಪಣಂಬೂರು ಪೊಲೀಸ್ ಠಾಣೆಯಲ್ಲಿ ಅ.ಕ್ರ.152/2018ರಡಿ ಐಪಿಸಿ ಕಲಂ 427, 457 ಮತ್ತು 380 ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
6 ವರ್ಷ ತಲೆಮರೆಸಿಕೊಂಡ ಆರೋಪಿ
ಪ್ರಕರಣದ ವಿಚಾರಣೆಗೆ ಹಲವು ಬಾರಿ ನ್ಯಾಯಾಲಯಕ್ಕೆ ಹಾಜರಾಗದ ಹಿನ್ನೆಲೆಯಲ್ಲಿ ಆರೋಪಿಯ ವಿರುದ್ಧ ನ್ಯಾಯಾಲಯ ದಸ್ತಗಿರಿ ವಾರಂಟ್ ಜಾರಿಗೊಳಿಸಿತ್ತು. ಬಳಿಕ ಕಳೆದ ಆರು ವರ್ಷಗಳಿಂದ ಆರೋಪಿ ವಿವಿಧೆಡೆ ತಲೆಮರೆಸಿಕೊಂಡು ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸುತ್ತಿದ್ದ ಎನ್ನಲಾಗಿದೆ.
ಕೊನೆಗೂ ಖಾಕಿ ಬಲೆಗೆ
ಮೇಲಾಧಿಕಾರಿಗಳ ಸೂಚನೆಯಂತೆ ಪಣಂಬೂರು ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಮೊಹಮ್ಮದ್ ಸಲೀಂ ಅಬ್ಬಾಸ್ ಅವರ ಮಾರ್ಗದರ್ಶನದಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿದ ಪೊಲೀಸ್ ತಂಡ, ಕೇರಳದ ಮಂಜೇಶ್ವರದ ಬಳಿ ಆರೋಪಿಯನ್ನು ಪತ್ತೆಹಚ್ಚಿ ಬಂಧಿಸಿದೆ.
ಈ ಕಾರ್ಯಾಚರಣೆಯಲ್ಲಿ ಸಿಎಚ್ಸಿಗಳಾದ ನವೀನ್ ಚಂದ್ರ, ಸಯ್ಯದ್ ಇಂತಿಯಾಜ್ ಹಾಗೂ ಸಿಪಿಸಿಗಳಾದ ರಾಕೇಶ್ ಮತ್ತು ವಿನಯ್ ಭಾಗವಹಿಸಿದ್ದರು. ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ.
ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾದ ಆರೋಪಿಗಳು ವರ್ಷಗಳ ಕಾಲ ತಲೆಮರೆಸಿಕೊಂಡರೂ, ಕಾನೂನಿನ ಕೈಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂಬುದನ್ನು ಈ ಪ್ರಕರಣ ಮತ್ತೊಮ್ಮೆ ಸಾಬೀತುಪಡಿಸಿದೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am