ಬ್ರೇಕಿಂಗ್ ನ್ಯೂಸ್
13-05-26 03:39 pm HK News Staffer ಕ್ರೈಂ
ಬೆಂಗಳೂರು, ಮೇ 13: ಚಾರ್ಜ್‌ಗೆ ಹಾಕಿದ್ದ ಎಲೆಕ್ಟ್ರಿಕಲ್ ದ್ವಿಚಕ್ರ ವಾಹನ ಸ್ಫೋಟಗೊಂಡ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ನಗರದ ಹಲಸೂರು ಪೊಲೀಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಂಗಳವಾರ ನಡೆದಿದೆ. ಹಲಸೂರಿನ ಮರ್ಫಿಟೌನ್ ನಿವಾಸಿ ಲೂರ್ದ್ ನಾಥನ್(65) ಮೃತ ವೃದ್ಧ.
ಆಟೋ ಚಾಲಕರಾಗಿದ್ದ ಲೂರ್ದ್ ನಾಥನ್ ಅನಾರೋಗ್ಯದ ಹಿನ್ನೆಲೆಯಲ್ಲಿ ಆಟೋ ಚಾಲನೆಗೆ ಹೋಗದೆ ಮನೆಯಲ್ಲಿಯೇ ಇರುತ್ತಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಲೂರ್ದ್ ನಾಥನ್ ತಮ್ಮ ಮಗ ಬಳಸುವಂತಹ ಎಲೆಕ್ಟ್ರಿಕಲ್ ದ್ವಿಚಕ್ರ ವಾಹನವನ್ನು ಸೋಮವಾರ ರಾತ್ರಿ 11 ಗಂಟೆಯ ಸುಮಾರಿಗೆ ಎಂದಿನಂತೆ ತಮ್ಮ ಚಿಕ್ಕದಾದ ಮನೆಯ ಒಳಗಡೆಯೇ ಚಾರ್ಜ್‌ಗೆ ಹಾಕಿ ಮಲಗಿದ್ದರು. ಮಧ್ಯರಾತ್ರಿ 3 ಗಂಟೆಗೆ ಏಕಾಏಕಿ ದ್ವಿಚಕ್ರ ವಾಹನ ಸ್ಫೋಟಗೊಂಡಿದ್ದು, ಸ್ಫೋಟದ ತೀವ್ರತೆಗೆ ಮಲಗಿದ್ದ ಲೂರ್ದ್ ನಾಥನ್‌ಗೆ ಮೈಯೆಲ್ಲಾ ಸುಟ್ಟ ಗಾಯಗಳಾಗಿದ್ದು, ಸ್ಫೋಟದ ಶಬ್ಧ ಕೇಳಿ ಮನೆಯ ಮೊದಲ ಮಹಡಿಯಲ್ಲಿದ್ದ ಮಗ ಮತ್ತು ಸೊಸೆ ಬಂದು ನೋಡಿದಾಗ ಲೂರ್ದ್ ನಾಥನ್ ಗಂಭೀರವಾಗಿ ಗಾಯಗೊಂಡು ಒದ್ದಾಡುತ್ತಿದ್ದರು. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅವರನ್ನು ಪರೀಕ್ಷಿಸಿದ ವೈದ್ಯರು ದಾರಿ ಮಧ್ಯದಲ್ಲಿಯೇ ಮೃತಪಟ್ಟಿದ್ದಾರೆ ಎಂದು ದೃಢಪಡಿಸಿದ್ದಾರೆ.
ಮನೆಯ ಒಳಗಡೆಯಲ್ಲಿಯೇ ಚಾರ್ಜ್‌ಗೆ ಹಾಕಿದ್ದಾಗ ಈ ದುರ್ಘಟನೆ ನಡೆದಿದೆ. ಸ್ಫೋಟದಿಂದ ಲೂರ್ದ್ ನಾಥನ್ ಸುಟ್ಟು ಹೋಗಿ ಗಂಭೀರವಾಗಿ ಗಾಯಗೊಂಡಿದ್ದರು. ಬೆಂಕಿಯ ತೀವ್ರತೆಗೆ ಮನೆಯಲ್ಲಿದ್ದ ಟಿ.ವಿ ಮತ್ತು ಹಾಸಿಗೆಗೆ ಜ್ವಾಲೆ ತಾಗಿ ಹೊತ್ತಿ ಉರಿದಿದೆ. ಬ್ಯಾಟರಿ ಓವರ್ ಫ್ಲೋ ಆಗಿ ಸ್ಫೋಟಗೊಂಡಿರುವ ಶಂಕೆ ವ್ಯಕ್ತವಾಗಿದೆ. ಲೂರ್ದ್ ನಾಥನ್ ಪುತ್ರ ಫ್ರಾಂಕ್ ಆಟೋನಿ ಎಂಬುವರು ನೀಡಿದ ದೂರಿನನ್ವಯ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am