ಬ್ರೇಕಿಂಗ್ ನ್ಯೂಸ್
18-05-26 12:37 pm HK News Staffer ಕ್ರೈಂ
ರಾಯಚೂರು, ಮೇ 18: ತಾಯಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ ಅಣ್ಣನನ್ನೇ ತಮ್ಮ ಕೊಲೆ ಮಾಡಿರುವ ಹೃದಯ ಕಲುಕುವ ಘಟನೆ ಜಿಲ್ಲೆಯ ಲಿಂಗಸೂಗೂರು ಪಟ್ಟಣದ ಬಸವಸಾಗರ ಕ್ರಾಸ್ ಬಳಿ ನಡೆದಿದೆ.
ಮೃತರನ್ನು ಬಸವರಾಜ (37) ಎಂದು ಗುರುತಿಸಲಾಗಿದ್ದು, ಆರೋಪಿ ಶ್ರೀಧರ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆ ಸಂಬಂಧ ಲಿಂಗಸೂಗೂರು ಪೊಲೀಸ್ ಠಾಣೆಯಲ್ಲಿ ಕೊಲೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ ಮಾಹಿತಿ ನೀಡಿದ್ದು, ಮೃತ ಬಸವರಾಜ ಕುಡಿದು ಮನೆಗೆ ಬಂದು ತಾಯಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ ಎನ್ನಲಾಗಿದೆ. ಇದರಿಂದ ಆಕ್ರೋಶಗೊಂಡ ತಮ್ಮ ಶ್ರೀಧರ್, ಅಣ್ಣ ನಿದ್ರೆಗೆ ಜಾರಿದ ಬಳಿಕ ದಿಂಬಿನಿಂದ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.
ಅಣ್ಣನನ್ನು ಕೊಲೆ ಮಾಡಿದ ಬಳಿಕ, ಘಟನೆ ಆತ್ಮಹತ್ಯೆಯಂತೆ ತೋರಿಸಲು ಶ್ರೀಧರ್ ಕುತಂತ್ರ ರೂಪಿಸಿದ್ದಾನೆ. ಸೀರೆಯನ್ನು ಬಳಸಿಕೊಂಡು ಫ್ಯಾನ್‌ಗೆ ಅಣ್ಣನ ಹೆಣವನ್ನು ನೇತು ಹಾಕಿ ಅಣ್ಣನೇ ನೇಣು ಹಾಕಿಕೊಂಡಿದ್ದಾನೆ ಎಂಬಂತೆ ಮನೆಯವರಿಗೆ ನಂಬಿಸಲು ಯತ್ನಿಸಿದ್ದಾನೆ. ಇದರ ಜೊತೆಗೆ, ಬಳಿಕ ಬಾಗಿಲಿನ ಚೀಲಕ ಮುರಿದಂತೆ ಮಾಡಿ ಅಣ್ಣನ ಶವವನ್ನು ಕೆಳಗೆ ಇಳಿಸಿದ ತಮ್ಮ ತದನಂತರ ಅಣ್ಣ ಬಸವರಾಜ್ ಜೀವ ಇರಬಹುದು ಎಂದು ತಾಯಿಗೆ ನಂಬಿಸಿ ಖಾಸಗಿ ವಾಹನದಲ್ಲಿ ಶವ ತೆಗೆದುಕೊಂಡು ತಾಲೂಕು ಆಸ್ಪತ್ರೆಗೆ ಹೋಗಿದ್ದಾನೆ.
ತಾಲೂಕು ಆಸ್ಪತ್ರೆಯಲ್ಲಿ ವೈದ್ಯರು ಪರಿಶೀಲನೆ ನಡೆಸಿದಾಗ, ಬಸವರಾಜ್ ಈಗಾಗಲೇ ಮೃತಪಟ್ಟಿರುವುದು ದೃಢಪಟ್ಟಿದೆ. ಇದರಿಂದ ಘಟನೆಗೆ ಹೊಸ ತಿರುವು ಸಿಕ್ಕಿದ್ದು, ಅನುಮಾನಗಳು ಗಟ್ಟಿಯಾದವು. ಇತ್ತ ಬಸವರಾಜ್ ಸಾವಿನ ಕುರಿತು ಲಿಂಗಸೂಗೂರು ಪೊಲೀಸ್ ಠಾಣೆಯಲ್ಲಿ ಮೃತನ ತಂದೆ ವಾಸುದೇವ್ ದೂರು ನೀಡಿದ್ದಾರೆ. ಮಾಹಿತಿ ದೊರಕುತ್ತಿದ್ದಂತೆಯೇ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಪ್ರಕರಣದ ಗಂಭೀರತೆಯನ್ನು ಗಮನಿಸಿದ ರಾಯಚೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ ಕೂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm