ಬ್ರೇಕಿಂಗ್ ನ್ಯೂಸ್
20-05-26 03:08 pm HK News Staffer ಕ್ರೈಂ
ನವದೆಹಲಿ, ಮೇ 20: ಭಾರತದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಹಾಗೂ ಸ್ಲೀಪರ್ ಸೆಲ್ ಸ್ಥಾಪಿಸಲು ಪಾಕಿಸ್ತಾನದಿಂದ ನುಸುಳಿ ಬಂದಿದ್ದ ಲಷ್ಕರ್-ಎ-ತೊಯ್ಬಾ (LeT) ಉಗ್ರನೊಬ್ಬನ ಸಂಚು ಕೊನೆಗೂ ವಿಫಲವಾಗಿದೆ. ಆದರೆ ಈ ಮಿಷನ್ ವಿಫಲವಾಗಲು ಕಾರಣ ಭಾರತೀಯ ಸೇನೆಯ ಕಾರ್ಯಾಚರಣೆ ಮಾತ್ರವಲ್ಲ, ಆತನಿಗೆ ಕಾಡುತ್ತಿದ್ದ ಕೂದಲು ಉದುರುವಿಕೆ ಸಮಸ್ಯೆ ಮತ್ತು ಸುಂದರವಾಗಿ ಕಾಣಬೇಕೆಂಬ ಗೀಳು ಎಂಬ ಅಚ್ಚರಿಯ ಮಾಹಿತಿ ಬಹಿರಂಗವಾಗಿದೆ.
ಉಸ್ಮಾನ್ ಜಟ್ ಅಲಿಯಾಸ್ ‘ಚೈನೀಸ್’ ಎಂಬ ಲಷ್ಕರ್ ಉಗ್ರ ಭಾರತದಲ್ಲಿ ಭೀಕರ ವಿಧ್ವಂಸಕ ಕೃತ್ಯಗಳಿಗೆ ಸ್ಲೀಪರ್ ಸೆಲ್ ಸ್ಥಾಪಿಸುವ ಜವಾಬ್ದಾರಿಯೊಂದಿಗೆ ಪಾಕಿಸ್ತಾನದಿಂದ ನುಸುಳಿದ್ದಾನೆ ಎಂದು ತನಿಖೆಯಲ್ಲಿ ತಿಳಿದುಬಂದಿದೆ. ಆದರೆ ಭಾರತದಲ್ಲಿ ಕೆಲ ಕಾಲ ಕಳೆದ ಬಳಿಕ ಆತ ತನ್ನ ಮುಖ್ಯ ಮಿಷನ್‌ಗಿಂತ ಕೂದಲು ಉದುರುವಿಕೆಯ ಸಮಸ್ಯೆಯನ್ನೇ ಹೆಚ್ಚು ಗಂಭೀರವಾಗಿ ತೆಗೆದುಕೊಂಡಿದ್ದಾನೆ ಎನ್ನಲಾಗಿದೆ.
ತನ್ನ ಆತ್ಮವಿಶ್ವಾಸ ಮತ್ತು ವ್ಯಕ್ತಿತ್ವದ ಮೇಲೆ ಕೂದಲು ಉದುರುವಿಕೆ ಪರಿಣಾಮ ಬೀರಿದೆ ಎಂದು ಹೇಳಿಕೊಂಡಿದ್ದ ಆತ, ಉಗ್ರ ಚಟುವಟಿಕೆಗಳನ್ನು ಬದಿಗಿಟ್ಟು ಶ್ರೀನಗರದ ಖಾಸಗಿ ಆಸ್ಪತ್ರೆಯಲ್ಲಿ ಹೇರ್ ಟ್ರಾನ್ಸ್‌ಪ್ಲಾಂಟ್ ಚಿಕಿತ್ಸೆ ಪಡೆಯಲು ದಾಖಲಾಗಿದ್ದ ವೇಳೆ ಪೊಲೀಸರ ಬಲೆಗೆ ಬಿದ್ದಿದ್ದಾನೆ.
ಇದೇ ರೀತಿಯ ಮತ್ತೊಂದು ಪ್ರಕರಣದಲ್ಲೂ ಲಷ್ಕರ್ ಸಂಪರ್ಕ ಹೊಂದಿದ್ದ ಶಬ್ಬೀರ್ ಅಹ್ಮದ್ ಲೋನ್ ಎಂಬಾತನನ್ನು ದೆಹಲಿ ಪೊಲೀಸರು ಬಂಧಿಸಿದ್ದರು. ಈತ ಎಐ ಶೃಂಗಸಭೆಗೆ ಮುನ್ನ ದೆಹಲಿಯಲ್ಲಿ ಪ್ರಚೋದನಕಾರಿ ಪೋಸ್ಟರ್ ಅಂಟಿಸಲು ಸದಸ್ಯರನ್ನು ನೇಮಕ ಮಾಡಿಕೊಂಡಿದ್ದ ಎಂದು ಆರೋಪಿಸಲಾಗಿದೆ. ತನಿಖೆಯ ವೇಳೆ ಆತ ಗುರುಗ್ರಾಮದ ಖಾಸಗಿ ಆಸ್ಪತ್ರೆಯಲ್ಲಿ ದಂತ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದ ವಿಚಾರವೂ ಬೆಳಕಿಗೆ ಬಂದಿದೆ.
ತನಿಖಾ ಸಂಸ್ಥೆಗಳ ಪ್ರಕಾರ, ಉಗ್ರರು ಈ ರೀತಿಯ ಮೇಕ್‌ಓವರ್ ಮಾಡಿಸಿಕೊಳ್ಳುವುದರ ಹಿಂದೆ ಕೇವಲ ಸೌಂದರ್ಯದ ಆಸೆ ಮಾತ್ರವಿಲ್ಲ. ವಿಮಾನ ನಿಲ್ದಾಣಗಳು ಹಾಗೂ ಪ್ರಮುಖ ಕೇಂದ್ರಗಳಲ್ಲಿ ಬಳಸಲಾಗುತ್ತಿರುವ ಕೃತಕ ಬುದ್ಧಿಮತ್ತೆ (AI) ಆಧಾರಿತ ಬಯೋಮೆಟ್ರಿಕ್ ಮುಖ ಗುರುತಿಸುವಿಕೆ ತಂತ್ರಜ್ಞಾನವನ್ನು ಗೊಂದಲಕ್ಕೀಡು ಮಾಡಲು ಈ ರೀತಿಯ ಶಸ್ತ್ರಚಿಕಿತ್ಸೆಗಳನ್ನು ಬಳಸಲಾಗುತ್ತಿದೆ ಎನ್ನಲಾಗಿದೆ.
ಎಐ ತಂತ್ರಜ್ಞಾನವು ವ್ಯಕ್ತಿಯ ಕಣ್ಣು, ಮೂಗು, ದವಡೆ ಹಾಗೂ ಮುಖದ ವಿವಿಧ ಭಾಗಗಳ ಅಂತರವನ್ನು ವಿಶ್ಲೇಷಿಸಿ ಗುರುತಿಸುವುದರಿಂದ, ಮುಖದ ಆಕಾರ ಬದಲಾವಣೆ ಮೂಲಕ ತನಿಖಾ ಸಂಸ್ಥೆಗಳ ಕಣ್ತಪ್ಪಿಸಲು ಉಗ್ರರು ಯತ್ನಿಸುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
26/11 ಮುಂಬೈ ದಾಳಿಯ ಮಾಸ್ಟರ್‌ಮೈಂಡ್ ಸಾಜಿದ್ ಮಿರ್ ಸೇರಿದಂತೆ ಹಲವು ಕುಖ್ಯಾತ ಉಗ್ರರು ಇದೇ ರೀತಿಯ ತಂತ್ರ ಅನುಸರಿಸಿದ್ದ ಉದಾಹರಣೆಗಳಿವೆ. ಪ್ಲಾಸ್ಟಿಕ್ ಸರ್ಜರಿ ಮತ್ತು ರೂಪ ಬದಲಾವಣೆ ಮೂಲಕ ಗುರುತು ಮರೆಮಾಚುವ ಪ್ರಯತ್ನಗಳು ಹೊಸದೇನಲ್ಲ ಎಂದು ತನಿಖಾ ಮೂಲಗಳು ತಿಳಿಸಿವೆ.
30-07-26 09:27 pm
HK News Staffer
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
ಸಂಪುಟ ವಿಸ್ತರಣೆ ಫಿಕ್ಸ್ ಆಗುತ್ತಿದ್ದಂತೆ ಹೈಕಮಾಂಡ್...
28-07-26 08:12 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
30-07-26 07:51 pm
HK News Staffer
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಮಂಗಳೂರು, ಉಳ್ಳಾಲದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ದ...
28-07-26 10:28 pm
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
30-07-26 09:24 pm
HK News Staffer
ಫೇಸ್ಬುಕ್ ಫ್ರೆಂಡ್ಶಿಪ್ ದುಬಾರಿ ! ಚಿನ್ನದ ಪಾರ್ಸೆ...
30-07-26 08:31 pm
ನಿವೃತ್ತ ಬಸ್ ಡ್ರೈವರ್ ಮನೆಯಲ್ಲಿ 48 ಕೋಟಿಗೂ ಅಧಿಕ...
30-07-26 02:16 pm
ಪರಿಷತ್ ಸ್ಥಾನ ಕೊಡಿಸುವುದಾಗಿ ಹೇಳಿ ಒಂದೂವರೆ ಕೋಟಿ ಪ...
30-07-26 12:18 pm
ಮಂಗಳೂರು ಪೊಲೀಸರಿಂದ 82 ಕೋಟಿ ರೂ. ಮೌಲ್ಯದ ಡ್ರಗ್ಸ್...
29-07-26 10:45 pm