ಬ್ರೇಕಿಂಗ್ ನ್ಯೂಸ್
21-05-26 01:34 pm HK News Staffer ಕ್ರೈಂ
ಬೆಂಗಳೂರು, ಮೇ 21: ಮಣಿಪಾಲ್ ಅಕಾಡೆಮಿ ಆಫ್ ಬಿಎಫ್‌ಎಸ್‌ಐನಲ್ಲಿ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಸೆಕ್ಯುರಿಟೀಸ್ ಮಾರ್ಕೆಟ್ಸ್(NISM) ಪರೀಕ್ಷೆಗೆ ತರಬೇತಿ ಪಡೆಯುತ್ತಿದ್ದ 24 ವರ್ಷದ ಬಿಹಾರ ಮೂಲದ ಪದವಿ ವಿದ್ಯಾರ್ಥಿ ನಿಗೂಢವಾಗಿ ಮೃತಪಟ್ಟಿದ್ದು, ಇದನ್ನು ಖಂಡಿಸಿ ಸಾವಿರಾರು ವಿದ್ಯಾರ್ಥಿಗಳು ಕ್ಯಾಂಪಸ್‌ನಲ್ಲಿ ಪ್ರತಿಭಟನೆ ನಡೆಸಿದರು.
ಬಿಹಾರ ಮೂಲದ ಚಿನ್ನು ಕುಮಾರ್ ಮೃತ ವಿದ್ಯಾರ್ಥಿಯಾಗಿದ್ದು ಸೋಮವಾರ ಮಧ್ಯಾಹ್ನ 2.30 ರ ಸುಮಾರಿಗೆ ಸಂಸ್ಥೆಯ ಹಾಸ್ಟೆಲ್‌ನ ಕಿಟಕಿಯ ಗ್ರಿಲ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿತ್ತು. ಶವ ನೋಡಿದ ವಿದ್ಯಾರ್ಥಿಗಳು ತಕ್ಷಣ ಆಡಳಿತ ಮಂಡಳಿ ಮತ್ತು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕುಮಾರ್ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಆಡಳಿತ ಮಂಡಳಿಯ ಕಿರುಕುಳ ಕಾರಣ ಎಂದು ಆರೋಪಿಸಿ ಸೋಮವಾರ ರಾತ್ರಿಯಿಂದ ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ನ್ಯಾಯಕ್ಕಾಗಿ ಒತ್ತಾಯಿಸಿ ಘೋಷಣೆಗಳನ್ನು ಕೂಗಿ ಕ್ಯಾಂಪಸ್‌ನಲ್ಲಿ ಮೇಣದ ಬತ್ತಿ ಮೆರವಣಿಗೆ ನಡೆಸಿದ್ದಾರೆ. ಕೊತ್ತನೂರು ಪೊಲೀಸರು ಪ್ರಕರಣ ದಾಖಲಿಸಿದ್ದು, ತನಿಖೆ ನಡೆಸುತ್ತಿದ್ದಾರೆ.

ಪೊಲೀಸರ ಪ್ರಕಾರ, ಪ್ರಾಥಮಿಕ ತನಿಖೆಯಲ್ಲಿ ಕುಮಾರ್, NISM ಪರೀಕ್ಷೆಗೆ ತರಬೇತಿ ಪಡೆಯುತ್ತಿದ್ದಾಗ ಗುತ್ತಿಗೆ ಆಧಾರದ ಮೇಲೆ ಖಾಸಗಿ ಬ್ಯಾಂಕ್ ಉದ್ಯೋಗಿಯಾಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಎರಡು ಬಾರಿ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿದ್ದರು ಮತ್ತು ಆಡಳಿತ ಮಂಡಳಿ ಅವರನ್ನು ಸರಿಯಾಗಿ ನಡೆಸಿಕೊಳ್ಳಲಿಲ್ಲ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.
ಕುಮಾರ್ NISM ಪರೀಕ್ಷೆಗಾಗಿ ನಾಲ್ಕು ತಿಂಗಳ ತರಬೇತಿ ಕಾರ್ಯಕ್ರಮಕ್ಕೆ ಮಣಿಪಾಲ ಅಕಾಡೆಮಿ ಸೇರಿದ್ದರು. ಏಳು ಬಾರಿ ಪರೀಕ್ಷೆ ಬರೆದಿದ್ದರೂ ಪ್ರತಿ ಬಾರಿಯೂ ಒಂದು ಅಂಕದ ಅಂತರದಲ್ಲಿ ಫೇಲ್ ಆಗಿದ್ದರು ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ಪರೀಕ್ಷೆಯಲ್ಲಿ ಫೇಲ್ ಮಾಡಿದ್ದಲ್ಲದೆ, ಎಲ್ಲರ ಮುಂದೆ ಅವಮಾನ ಮಾಡಲಾಗಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm