ಬ್ರೇಕಿಂಗ್ ನ್ಯೂಸ್
23-05-26 09:19 am HK News Staffer ಕ್ರೈಂ
ಕಲಬುರಗಿ, ಮೇ 23: ಜಿಲ್ಲೆಯ ಚಿತ್ತಾಪುರ ತಾಲೂಕಿನ ಲಾಡ್ಲಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಮಧ್ಯರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ನಡೆದಿದೆ.
ಮೃತರನ್ನು ಇಂಗಳಗಿ ಗ್ರಾಮದ ನಿವಾಸಿಗಳಾದ ತೋಲುಸಾಬ್ ಕ್ಯಾಶ್ವಾರ್ (27), ಹುಸೇನ್ ಷಾ (48), ಮೈಬೂಬ್ ಅಲಿ (45), ರಸೂಲ್ ಬೀ (42) ಹಾಗೂ ಫಾತೀಮಾ ಅಲಿ (38) ಎಂದು ಗುರುತಿಸಲಾಗಿದೆ.
ಕುಟುಂಬದ ಸದಸ್ಯರು ವೈಯಕ್ತಿಕ ಕೆಲಸದ ನಿಮಿತ್ತ ಯಾದಗಿರಿಗೆ ತೆರಳಿದ್ದು, ಕೆಲಸ ಮುಗಿಸಿಕೊಂಡು ಕ್ರೂಸರ್ ವಾಹನದಲ್ಲಿ ತಮ್ಮ ಊರಾದ ಇಂಗಳಗಿಗೆ ಹಿಂದಿರುಗುತ್ತಿದ್ದರು. ಈ ವೇಳೆ ಲಾಡ್ಲಾಪುರ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗವಾಗಿ ಬಂದ ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.
ಡಿಕ್ಕಿಯ ರಭಸಕ್ಕೆ ಕ್ರೂಸರ್ ವಾಹನ ಸಂಪೂರ್ಣ ನುಜ್ಜುಗುಜ್ಜಾಗಿದ್ದು, ವಾಹನದಲ್ಲಿದ್ದ ಐವರು ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದ ಭೀಕರತೆಗೆ ಸ್ಥಳದಲ್ಲಿದ್ದವರು ಬೆಚ್ಚಿಬಿದ್ದಿದ್ದಾರೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು. ಬಳಿಕ ನುಜ್ಜುಗುಜ್ಜಾದ ವಾಹನದಿಂದ ಮೃತದೇಹಗಳನ್ನು ಹೊರತೆಗೆದು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.
ಒಂದೇ ಕುಟುಂಬದ ಐವರು ಏಕಕಾಲದಲ್ಲಿ ಸಾವನ್ನಪ್ಪಿರುವುದು ಇಂಗಳಗಿ ಗ್ರಾಮದಲ್ಲಿ ದುಃಖದ ವಾತಾವರಣ ನಿರ್ಮಾಣ ಮಾಡಿದೆ. ಗ್ರಾಮದಲ್ಲಿ ಸೂತಕದ ಛಾಯೆ ಆವರಿಸಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm