ಬ್ರೇಕಿಂಗ್ ನ್ಯೂಸ್
24-05-26 09:01 pm HK News Staffer ಕ್ರೈಂ
ಬೆಂಗಳೂರು, ಮೇ 24: ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ವೃದ್ಧೆಯೋರ್ವರನ್ನು ಬೆದರಿಸಿ ಬರೋಬ್ಬರಿ 24 ಕೋಟಿ ರೂಪಾಯಿ ಸುಲಿಗೆ ಮಾಡಿದ್ದ ಅಂತಾರಾಜ್ಯ ಖದೀಮರನ್ನು ಸಿಸಿಬಿ ಸೈಬರ್ ಕ್ರೈಮ್ ಪೊಲೀಸರು ಬಂಧಿಸಿದ್ದಾರೆ.
ಬ್ಯಾಂಕ್ ಮ್ಯಾನೇಜರ್ವೊಬ್ಬರ ಸಮಯಪ್ರಜ್ಞೆಯಿಂದಾಗಿ ವೃದ್ಧೆ ಮತ್ತಷ್ಟು ಹಣ ಕಳೆದುಕೊಳ್ಳುವುದು ತಪ್ಪಿದ್ದಲ್ಲದೆ, ಈ ಬೃಹತ್ ವಂಚನೆ ಪ್ರಕರಣ ಬೆಳಕಿಗೆ ಬಂದಿದೆ. ಶಿವಾಜಿನಗರದ ನಿವಾಸಿಯಾದ ಲಕ್ಷ್ಮೀ ಎಂಬ ವೃದ್ಧೆ ಇತ್ತೀಚೆಗೆ ಪ್ರಾಪರ್ಟಿ ಮಾರಾಟದಿಂದ ಕೋಟ್ಯಂತರ ರೂಪಾಯಿ ಹಣ ಗಳಿಸಿದ್ದರು. ಅವರ ಬ್ಯಾಂಕ್ ವಹಿವಾಟಿನ ಸಂಪೂರ್ಣ ಮಾಹಿತಿ ಪಡೆದುಕೊಂಡಿದ್ದ ಸೈಬರ್ ವಂಚಕರು, ಅಕ್ರಮ ಹಣ ವರ್ಗಾವಣೆ ಆರೋಪದಡಿ ನಿಮ್ಮನ್ನು ಡಿಜಿಟಲ್ ಅರೆಸ್ಟ್ ಮಾಡಲಾಗಿದೆ ಎಂದು ಹೆದರಿಸಿದ್ದರು. ಕಾನೂನು ಕ್ರಮದ ಭಯ ಬಿದ್ದಿದ್ದ ಲಕ್ಷ್ಮೀ ಕಳೆದ ಜನವರಿಯಿಂದ ಮೇ ತಿಂಗಳವರೆಗೆ ಹಂತಹಂತವಾಗಿ ಒಟ್ಟು 24 ಕೋಟಿ ರೂಪಾಯಿಯನ್ನು ಖದೀಮರಿಗೆ ವರ್ಗಾಯಿಸಿದ್ದರು.
ಇಷ್ಟಾದರೂ ವಂಚಕರ ಹಣದ ದಾಹ ತೀರಿರಲಿಲ್ಲ. ಮತ್ತಷ್ಟು ಹಣಕ್ಕಾಗಿ ಬೇಡಿಕೆ ಇಟ್ಟಾಗ, ವೃದ್ಧೆ ಲಕ್ಷ್ಮೀ ಅವರು ಮನೆಯಲ್ಲಿದ್ದ 1 ಕೆಜಿ 300 ಗ್ರಾಂ ಚಿನ್ನಾಭರಣಗಳನ್ನು ಅಡವಿಟ್ಟು ಹಣ ಪಡೆಯಲು ಬ್ಯಾಂಕ್‌ಗೆ ತೆರಳಿದ್ದರು. ವೃದ್ಧೆಯ ವರ್ತನೆ ಹಾಗೂ ಪದೆ ಪದೇ ದೊಡ್ಡ ಮೊತ್ತದ ವ್ಯವಹಾರ ನಡೆಸುತ್ತಿರುವುದನ್ನು ಗಮನಿಸಿ ಅನುಮಾನಗೊಂಡ ಬ್ಯಾಂಕ್ ಶಾಖೆಯ ಮ್ಯಾನೇಜರ್ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದರು.
ವಿಷಯ ತಿಳಿಯುತ್ತಿದ್ದಂತೆ ಬ್ಯಾಂಕ್‌ಗೆ ಧಾವಿಸಿದ ಸಿಸಿಬಿ ಸೈಬರ್ ಪೊಲೀಸರು ಲಕ್ಷ್ಮೀ ಅವರನ್ನು ವಿಚಾರಣೆಗೊಳಪಡಿಸಿದರು. ಆರಂಭದಲ್ಲಿ ತೀವ್ರ ಭಯದಿಂದ ಏನನ್ನೂ ಬಾಯ್ಬಿಡದ ವೃದ್ಧೆಗೆ ಧೈರ್ಯ ತುಂಬಿ, ಪೊಲೀಸರು ತಮ್ಮದೇ ಶೈಲಿಯಲ್ಲಿ ಪ್ರಶ್ನಿಸಿದಾಗ 'ಡಿಜಿಟಲ್ ಅರೆಸ್ಟ್' ನ ಅಸಲಿ ಸತ್ಯ ಹೊರಬಂದಿದೆ. ಕೂಡಲೇ ಸಂತ್ರಸ್ತೆಯಿಂದ ದೂರು ದಾಖಲಿಸಿಕೊಂಡ ಪೊಲೀಸರು, ವಿದೇಶದಲ್ಲಿರುವ ಅವರ ಮಕ್ಕಳಿಗೆ ವಿಷಯ ಮುಟ್ಟಿಸಿದ್ದರು.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆಗಿಳಿದ ಖಾಕಿ ಪಡೆ, ಮುಂಬೈ, ಅಲಹಾಬಾದ್ ಮತ್ತು ದೆಹಲಿ ಮೂಲದ ಆರೋಪಿಗಳ ಬೆನ್ನುಬಿದ್ದು ಗೌರವ್ ಕುಮಾರ್, ಓಂ ಪ್ರಕಾಶ್ ರಾಜ್‌ಪುತ್ ಸೇರಿದಂತೆ ಐವರು ಖದೀಮರನ್ನು ಹೆಡೆಮುರಿ ಕಟ್ಟಿದ್ದಾರೆ. ವಂಚಕರು ಸುಲಿಗೆ ಮಾಡಿದ್ದ ಹಣವನ್ನು ಒಟ್ಟು 22 ಬೇರೆ ಬೇರೆ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಿದ್ದು, ಸದ್ಯಕ್ಕೆ 60 ಲಕ್ಷ ರೂಪಾಯಿ ಹಣವಿದ್ದ ಖಾತೆಯನ್ನು ಪೊಲೀಸರು ಸೀಜ್ ಮಾಡಿದ್ದಾರೆ. ಉಳಿದ ಹಣ ಜಪ್ತಿಗಾಗಿ ತನಿಖೆ ಮುಂದುವರೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm