ಬ್ರೇಕಿಂಗ್ ನ್ಯೂಸ್
25-05-26 09:40 pm HK News Staffer ಕ್ರೈಂ
ಭಟ್ಕಳ, ಮೇ 25: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ‘ಮುರಿನಕಟ್ಟೆ’ ತೆರವು ವಿಚಾರ ಕೋಮು ಸಂಘರ್ಷಕ್ಕೆ ತಿರುಗಿದ್ದು ಉದ್ವಿಗ್ನತೆ ಸೃಷ್ಟಿಸಿದೆ. ಪರಿಸ್ಥಿತಿ ನಿಯಂತ್ರಣಕ್ಕಾಗಿ ಜಿಲ್ಲಾಡಳಿತ ಮೂರು ದಿನಗಳ ಕಾಲ ನಿಷೇಧಾಜ್ಞೆ ಜಾರಿಗೊಳಿಸಿದೆ. ಭಟ್ಕಳ ನಗರ ಹಾಗೂ ಜಾಲಿ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಮೇ 25ರಿಂದ 27ರ ವರೆಗೆ ಬಿಎನ್ಎಸ್ಎಸ್ ಕಲಂ 163ರ ಅಡಿಯಲ್ಲಿ ನಿಷೇಧಾಜ್ಞೆ ಜಾರಿಯಾಗಿದೆ.
ಭಟ್ಕಳ ನಗರದ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದಲ್ಲಿರುವ ‘ಮುರಿನಕಟ್ಟೆ’ ಸ್ಥಳೀಯರ ಪಾಲಿಗೆ ಧಾರ್ಮಿಕ ಮಹತ್ವ ಹೊಂದಿದ ಸ್ಥಳವಾಗಿದೆ. ನಗರದ ಮಾರಿಕಾಂಬೆ ದೇವಸ್ಥಾನಕ್ಕೆ ಸಂಬಂಧಿಸಿದ ‘ಅಮ್ಮನವರ ಹೊರೆ’ ಇಡುವ ಸ್ಥಳವನ್ನೇ ಸ್ಥಳೀಯವಾಗಿ ‘ಮುರಿನಕಟ್ಟೆ’ ಎಂದು ಕರೆಯಲಾಗುತ್ತದೆ. ಹೆದ್ದಾರಿ ಅಗಲೀಕರಣ ಹಿನ್ನೆಲೆಯಲ್ಲಿ ಕಳೆದ ಕೆಲವು ತಿಂಗಳ ಹಿಂದೆ ಹಳೆಯ ಕಟ್ಟೆಯನ್ನು ತೆರವುಗೊಳಿಸಲಾಗಿತ್ತು. ಬಳಿಕ ಸಂಚಾರಕ್ಕೆ ತೊಂದರೆಯಾಗದಂತೆ ಸಮೀಪದ ಸರ್ಕಾರಿ ಜಾಗದಲ್ಲಿ ಸ್ಥಳೀಯರು ಹೊಸ ಕಟ್ಟೆ ನಿರ್ಮಿಸಿದ್ದರು. ಆದರೆ, ಈ ಹೊಸ ಕಟ್ಟೆಗೆ ಮತ್ತೊಂದು ಸಮುದಾಯ ಆಕ್ಷೇಪ ವ್ಯಕ್ತಪಡಿಸಿದ್ದು, ಅದನ್ನು ತೆರವುಗೊಳಿಸಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸಲಾಗಿತ್ತು.

ಮೇ 24ರಂದು ಹೊಸದಾಗಿ ನಿರ್ಮಿಸಿದ್ದ ಕಟ್ಟೆಯನ್ನು ಕಿಡಿಗೇಡಿಗಳು ಏಕಾಏಕಿ ತೆರವುಗೊಳಿಸಿರುವುದು ಬೆಳಕಿಗೆ ಬಂದ ಬಳಿಕ ಎರಡು ಗುಂಪುಗಳ ನಡುವೆ ಘರ್ಷಣೆ ತಲೆದೋರಿದ್ದು ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಪರಿಸ್ಥಿತಿ ನಿಯಂತ್ರಣ ತಪ್ಪುವ ಲಕ್ಷಣ ಕಂಡುಬಂದ ಹಿನ್ನೆಲೆ ಪೊಲೀಸರು ಸ್ಥಳಕ್ಕೆ ಧಾವಿಸಿ ಲಘು ಲಾಠಿ ಪ್ರಹಾರ ನಡೆಸಿ ಗುಂಪುಗಳನ್ನು ಚದುರಿಸಿದ್ದರು. ಪೊಲೀಸರು ಕಟ್ಟೆ ತೆರವು ಮಾಡಿದವರ ವಿರುದ್ಧ ಪ್ರಕರಣ ದಾಖಲಿಸಿದ್ದು, ತನಿಖೆ ಮುಂದುವರಿಸಿದ್ದಾರೆ. ಶಾಂತಿ ಕಾಪಾಡುವ ಉದ್ದೇಶದಿಂದ ಮುನ್ನೆಚ್ಚರಿಕಾ ಕ್ರಮವಾಗಿ ಸಾರ್ವಜನಿಕ ಸಭೆ, ಗುಂಪು ಸೇರುವುದನ್ನು ನಿಷೇಧಿಸಲು ಸೆಕ್ಷನ್ ವಿಧಿಸಲಾಗಿದೆ.
ಇದಲ್ಲದೆ, ಮೇ 25ರ ಬೆಳಗ್ಗೆ 6 ಗಂಟೆಯಿಂದ ಮೇ 27ರ ಬೆಳಗ್ಗೆ 6 ಗಂಟೆಯ ವರೆಗೆ ಭಟ್ಕಳ ನಗರ ಹಾಗೂ ಜಾಲಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ಎಲ್ಲಾ ಮದ್ಯದಂಗಡಿ ಮತ್ತು ಬಾರ್ಗಳನ್ನು ಬಂದ್ ಮಾಡಲು ಜಿಲ್ಲಾಡಳಿತ ಆದೇಶಿಸಿದೆ. ಮದ್ಯ ಸಾಗಣೆ ಮತ್ತು ಮಾರಾಟಕ್ಕೂ ಸಂಪೂರ್ಣ ನಿಷೇಧ ಹೇರಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಮತ್ತು ಪ್ರಚೋದನಕಾರಿ ಸಂದೇಶಗಳನ್ನು ಹಂಚದಂತೆ ಸಾರ್ವಜನಿಕರಿಗೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದ್ದು, ಶಾಂತಿ ಕಾಪಾಡುವಂತೆ ಮನವಿ ಮಾಡಿದೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am