ಬ್ರೇಕಿಂಗ್ ನ್ಯೂಸ್
01-06-26 08:16 pm HK News Staffer ಕ್ರೈಂ
ಬೈಂದೂರು, ಜೂನ್ 1: ಪ್ರವಾಸದ ಸಂಭ್ರಮದಲ್ಲಿದ್ದ ಕುಟುಂಬವೊಂದಕ್ಕೆ ಕ್ಷಣಾರ್ಧದಲ್ಲಿ ದುರಂತ ಆವರಿಸಿದ ಘಟನೆ ಉಡುಪಿ ಜಿಲ್ಲೆಯ ಬೈಂದೂರು ಸಮೀಪದ ಶಿರೂರು ಸಂಕದಗುಂಡಿ ಹೊಳೆಯಲ್ಲಿ ನಡೆದಿದೆ. ಹಾವೇರಿ ಮೂಲದ 16 ವರ್ಷದ ವಿದ್ಯಾರ್ಥಿಯೊಬ್ಬ ಈಜಲು ತೆರಳಿದ್ದ ವೇಳೆ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ.
ಮೃತ ಬಾಲಕನನ್ನು ಆಯುಷ್ (16) ಎಂದು ಗುರುತಿಸಲಾಗಿದೆ. ಹಾವೇರಿ ಸಮೀಪದ ಕೃಷಿನಗರದ ಒಂದೇ ಕುಟುಂಬದ ಏಳು ಮಂದಿ ಮುರುಡೇಶ್ವರ ಹಾಗೂ ಕನ್ಯಾಕುಮಾರಿ ಪ್ರವಾಸಕ್ಕೆ ಆಗಮಿಸಿದ್ದರು. ಮುರುಡೇಶ್ವರ ಪ್ರವಾಸ ಮುಗಿಸಿ ಶಿರೂರು ಸಂಕದಗುಂಡಿ ಹೊಳೆಯ ಸಮೀಪ ವಿಶ್ರಾಂತಿಗಾಗಿ ವಾಹನ ನಿಲ್ಲಿಸಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ಕುಟುಂಬದ ಸದಸ್ಯರು ಊಟದ ತಯಾರಿಯಲ್ಲಿ ನಿರತರಾಗಿದ್ದಾಗ ಆಯುಷ್ ಹಾಗೂ ಮತ್ತೋರ್ವ ಬಾಲಕ ಸಮೀಪದ ಹೊಳೆಗೆ ಸ್ನಾನಕ್ಕೆ ತೆರಳಿದ್ದರು. ಈ ವೇಳೆ ನೀರಿನ ಆಳವಿರುವ ಭಾಗಕ್ಕೆ ಈಜಲು ಹೋದ ಆಯುಷ್ಗೆ ನೀರಿನ ಆಳದ ಅರಿವಾಗದೆ ಮುಳುಗಿದ್ದಾನೆ ಎನ್ನಲಾಗಿದೆ.
ಜೊತೆಗಿದ್ದ ಬಾಲಕ ತಕ್ಷಣ ಕುಟುಂಬ ಸದಸ್ಯರಿಗೆ ವಿಷಯ ತಿಳಿಸಿದ್ದು, ಸ್ಥಳೀಯರು ಹಾಗೂ ಸಂಬಂಧಿಕರು ರಕ್ಷಣೆಗೆ ಮುಂದಾದರೂ ಯಾವುದೇ ಪ್ರಯೋಜನವಾಗಲಿಲ್ಲ. ಹೊಳೆಯಲ್ಲಿ ನೀರಿನ ಆಳ ಹೆಚ್ಚಿದ್ದ ಕಾರಣ ಅಗ್ನಿಶಾಮಕ ದಳ ಹಾಗೂ ಸ್ಥಳೀಯರು ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಶೋಧ ಕಾರ್ಯ ನಡೆಸಿ ಮೃತದೇಹವನ್ನು ಮೇಲಕ್ಕೆತ್ತಿದರು.
ಮೃತ ಆಯುಷ್ನ ತಂದೆ-ತಾಯಿ ಗುಜರಾತ್ನಲ್ಲಿ ಸಣ್ಣ ವ್ಯಾಪಾರ ನಡೆಸುತ್ತಿದ್ದು, ಆಯುಷ್ ಅಲ್ಲಿಯೇ ಎಸ್ಎಸ್ಎಲ್ಸಿ ವ್ಯಾಸಂಗ ಮಾಡುತ್ತಿದ್ದ ಎನ್ನಲಾಗಿದೆ. ತಾಯಿ, ಸಹೋದರ ಸೇರಿದಂತೆ ಕುಟುಂಬದ ಏಳು ಮಂದಿ ಈ ಪ್ರವಾಸದಲ್ಲಿ ಭಾಗಿಯಾಗಿದ್ದರು.
ಘಟನೆ ಕುರಿತು ಬೈಂದೂರು ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
30-07-26 09:27 pm
HK News Staffer
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
ಸಂಪುಟ ವಿಸ್ತರಣೆ ಫಿಕ್ಸ್ ಆಗುತ್ತಿದ್ದಂತೆ ಹೈಕಮಾಂಡ್...
28-07-26 08:12 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
30-07-26 07:51 pm
HK News Staffer
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಮಂಗಳೂರು, ಉಳ್ಳಾಲದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ದ...
28-07-26 10:28 pm
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
30-07-26 09:24 pm
HK News Staffer
ಫೇಸ್ಬುಕ್ ಫ್ರೆಂಡ್ಶಿಪ್ ದುಬಾರಿ ! ಚಿನ್ನದ ಪಾರ್ಸೆ...
30-07-26 08:31 pm
ನಿವೃತ್ತ ಬಸ್ ಡ್ರೈವರ್ ಮನೆಯಲ್ಲಿ 48 ಕೋಟಿಗೂ ಅಧಿಕ...
30-07-26 02:16 pm
ಪರಿಷತ್ ಸ್ಥಾನ ಕೊಡಿಸುವುದಾಗಿ ಹೇಳಿ ಒಂದೂವರೆ ಕೋಟಿ ಪ...
30-07-26 12:18 pm
ಮಂಗಳೂರು ಪೊಲೀಸರಿಂದ 82 ಕೋಟಿ ರೂ. ಮೌಲ್ಯದ ಡ್ರಗ್ಸ್...
29-07-26 10:45 pm