ಬ್ರೇಕಿಂಗ್ ನ್ಯೂಸ್
06-06-26 01:18 pm HK News Staffer ಕ್ರೈಂ
ಮಂಗಳೂರು, ಜೂನ್ 6: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ನಗರ ಅಪರಾಧ ವಿಭಾಗ (ಸಿಸಿಬಿ) ಪೊಲೀಸರು ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ಬಂಧಿಸಿದ್ದಾರೆ. ಬಂಧಿತರಿಂದ ಒಟ್ಟು 164 ಗ್ರಾಂ ಎಂಡಿಎಂಎ ಮಾದಕ ವಸ್ತು ವಶಪಡಿಸಿಕೊಳ್ಳಲಾಗಿದ್ದು, ಇದರ ಮೌಲ್ಯ ಸುಮಾರು 16.40 ಲಕ್ಷ ರೂ. ಎಂದು ಅಂದಾಜಿಸಲಾಗಿದೆ.
ಹೊಯಿಗೆ ಬಜಾರ್‌ನಲ್ಲಿ ದಾಳಿ:
ಬೆಂಗಳೂರು ನಗರದಿಂದ ಎಂಡಿಎಂಎ ಖರೀದಿಸಿ ಮಂಗಳೂರಿಗೆ ತಂದು ಹೊಯಿಗೆ ಬಜಾರ್ ಪರಿಸರದಲ್ಲಿರುವ ಮನೆಯಿಂದ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ಜೂನ್ 5ರಂದು ದಾಳಿ ನಡೆಸಿ ಪ್ರಣಾಮ್ ಕೋಟ್ಯಾನ್ (30) ಎಂಬಾತನನ್ನು ಬಂಧಿಸಿದ್ದಾರೆ. ಆರೋಪಿಯಿಂದ 104 ಗ್ರಾಂ ಎಂಡಿಎಂಎ, ಮೊಬೈಲ್ ಫೋನ್, ಜಿಪ್‌ಲಾಕ್ ಕವರ್ ಹಾಗೂ ಡಿಜಿಟಲ್ ತೂಕಮಾಪನ ಯಂತ್ರವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಮಾದಕ ವಸ್ತುವಿನ ಮೌಲ್ಯ ಸುಮಾರು 10.40 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಈ ಸಂಬಂಧ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಂಧಿತ ಪ್ರಣಾಮ್ ಕೋಟ್ಯಾನ್ ವಿರುದ್ಧ ಈ ಹಿಂದೆ ಹಲ್ಲೆ, ಬೆದರಿಕೆ, ಗಾಂಜಾ ಸೇವನೆ ಹಾಗೂ ಮಾರಾಟ ಸೇರಿದಂತೆ ಹಲವು ಪ್ರಕರಣಗಳು ದಾಖಲಾಗಿವೆ. ಮಂಗಳೂರು ದಕ್ಷಿಣ, ಉತ್ತರ ಪೊಲೀಸ್ ಠಾಣೆ ಹಾಗೂ ಅಬಕಾರಿ ಇಲಾಖೆಯಲ್ಲಿ ಆತನ ವಿರುದ್ಧ ಪ್ರಕರಣಗಳು ದಾಖಲಾಗಿರುವುದು ತನಿಖೆಯಿಂದ ತಿಳಿದುಬಂದಿದೆ.
ಪದವಿನಂಗಡಿಯಲ್ಲಿ ಮತ್ತೊಂದು ಕಾರ್ಯಾಚರಣೆ
ಇನ್ನೊಂದು ಪ್ರಕರಣದಲ್ಲಿ ಪದವಿನಂಗಡಿ ಪರಿಸರದಲ್ಲಿರುವ ಮನೆಯಿಂದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಬಗ್ಗೆ ದೊರೆತ ಮಾಹಿತಿಯ ಮೇರೆಗೆ ಸಿಸಿಬಿ ಪೊಲೀಸರು ದಾಳಿ ನಡೆಸಿ ಧನರಾಜ್ ಪೂಜಾರಿ ಅಲಿಯಾಸ್ ಧನು ವಳಚಿಲ್ (33) ಎಂಬಾತನನ್ನು ಬಂಧಿಸಿದ್ದಾರೆ.
ಆರೋಪಿಯಿಂದ 60 ಗ್ರಾಂ ಎಂಡಿಎಂಎ, ಜಿಪ್‌ಲಾಕ್ ಕವರ್‌ಗಳು, ಮೊಬೈಲ್ ಫೋನ್ ಹಾಗೂ ಡಿಜಿಟಲ್ ತೂಕಮಾಪನ ಯಂತ್ರವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಮಾದಕ ವಸ್ತುವಿನ ಮೌಲ್ಯ ಸುಮಾರು 6 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಈ ಕುರಿತು ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೊಲೆ, ಕೊಲೆಯತ್ನ ಸೇರಿ 12ಕ್ಕೂ ಹೆಚ್ಚು ಪ್ರಕರಣಗಳು
ಧನರಾಜ್ ಪೂಜಾರಿ ವಿರುದ್ಧ ಮಂಗಳೂರು ದಕ್ಷಿಣ, ಉತ್ತರ, ಸುರತ್ಕಲ್, ಬರ್ಕೆ, ಕಾವೂರು, ಕಂಕನಾಡಿ ನಗರ ಹಾಗೂ ಬಂಟ್ವಾಳ ಠಾಣೆಗಳಲ್ಲಿ ಕೊಲೆ, ಕೊಲೆಯತ್ನ, ಹಲ್ಲೆ ಹಾಗೂ ಬೆದರಿಕೆ ಸೇರಿದಂತೆ ಸುಮಾರು 12 ಪ್ರಕರಣಗಳು ದಾಖಲಾಗಿವೆ. 2016ರಲ್ಲಿ ದಾಖಲಾಗಿದ್ದ ಗಂಭೀರ ಹಲ್ಲೆ ಪ್ರಕರಣದಲ್ಲಿ ಆತನಿಗೆ 3 ವರ್ಷಗಳ ಜೈಲು ಶಿಕ್ಷೆ ಕೂಡ ವಿಧಿಸಲಾಗಿತ್ತು.
ಇನ್ನಷ್ಟು ಆರೋಪಿಗಳಿಗಾಗಿ ಶೋಧ:
ಈ ಡ್ರಗ್ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ಅವರ ಪತ್ತೆಗೆ ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ. ಕಾರ್ಯಾಚರಣೆಯನ್ನು ಮಂಗಳೂರು ನಗರ ಸಿಸಿಬಿ ಘಟಕದ ಅಧಿಕಾರಿಗಳು ಮತ್ತು ಸಿಬ್ಬಂದಿ ಯಶಸ್ವಿಯಾಗಿ ನಡೆಸಿದ್ದಾರೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am