ಬ್ರೇಕಿಂಗ್ ನ್ಯೂಸ್
11-06-26 11:43 am HK News Staffer ಕ್ರೈಂ
ವಿಟ್ಲ, ಜೂನ್ 11: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಸಹಪ್ರಯಾಣಿಕರು ಗಂಭೀರವಾಗಿ ಘಟನೆ ನಡೆದಿದೆ. ಮಾಣಿ ಸಮೀಪದ ಗಡಿಯಾರದಲ್ಲಿ ನಡೆದ ಈ ದುರ್ಘಟನೆಯಿಂದ ಕೆಲಕಾಲ ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು.
ಮೃತ ಚಾಲಕನನ್ನು ಹಾಸನ ಮೂಲದ ಲಕ್ಷ್ಮೀಕಾಂತ್ ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ರಂಜಿತ್, ದರ್ಶನ್ ಹಾಗೂ ಶೋಭಾ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಹಾಸನ ಮೂಲದ ನಾಲ್ವರು ಬುಧವಾರ ಮಧ್ಯಾಹ್ನ ಸುಮಾರು 12 ಗಂಟೆ ವೇಳೆಗೆ ಕಾರಿನಲ್ಲಿ ಮಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದರು. ಗಡಿಯಾರ ಸಮೀಪದ ತಿರುವಿನಲ್ಲಿ ಸಾಗುತ್ತಿದ್ದ ವೇಳೆ ಏಕಾಏಕಿ ಕಾರಿನ ಮೇಲಿನ ನಿಯಂತ್ರಣ ಕಳೆದುಕೊಂಡ ಚಾಲಕ ಲಕ್ಷ್ಮೀಕಾಂತ್, ರಸ್ತೆ ಡಿವೈಡರ್ ಗೆ ಭೀಕರವಾಗಿ ಢಿಕ್ಕಿ ಹೊಡೆದಿದ್ದಾರೆ. ಢಿಕ್ಕಿಯ ರಭಸ ಎಷ್ಟಿತ್ತೆಂದರೆ ಕಾರು ಹೆದ್ದಾರಿಯಲ್ಲೇ ಹಲವು ಬಾರಿ ಪಲ್ಟಿ ಹೊಡೆದು ಸಂಪೂರ್ಣ ನುಜ್ಜುಗುಜ್ಜಾಗಿದೆ.
ಅಪಘಾತದ ಸದ್ದು ಕೇಳಿ ಸ್ಥಳೀಯರು ತಕ್ಷಣವೇ ಧಾವಿಸಿ ರಕ್ಷಣಾ ಕಾರ್ಯ ಆರಂಭಿಸಿದರು. ಕಾರಿನ ಕಬ್ಬಿಣದ ಅವಶೇಷಗಳ ನಡುವೆ ಸಿಲುಕಿಕೊಂಡಿದ್ದ ನಾಲ್ವರನ್ನು ಹರಸಾಹಸಪಟ್ಟು ಹೊರತೆಗೆದು ಆಸ್ಪತ್ರೆಗೆ ಸಾಗಿಸಿದರು. ಆದರೆ ತೀವ್ರವಾಗಿ ಗಾಯಗೊಂಡಿದ್ದ ಚಾಲಕ ಲಕ್ಷ್ಮೀಕಾಂತ್ ಅವರನ್ನು ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ಘೋಷಿಸಿದರು.
ಗಾಯಾಳುಗಳ ಸ್ಥಿತಿ ಗಂಭೀರವಾಗಿದ್ದರಿಂದ ಪ್ರಾಥಮಿಕ ಚಿಕಿತ್ಸೆ ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆಯ ಮಾಹಿತಿ ತಿಳಿದು ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಅಪಘಾತದ ಪರಿಣಾಮ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತ್ತು. ಬಳಿಕ ಪೊಲೀಸರು ಕ್ರೇನ್ ಸಹಾಯದಿಂದ ಜಖಂಗೊಂಡ ಕಾರನ್ನು ರಸ್ತೆಯಿಂದ ತೆರವುಗೊಳಿಸಿ ಸಂಚಾರವನ್ನು ಪುನರಾರಂಭಿಸಿದರು. ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತಕ್ಕೆ ನಿಖರ ಕಾರಣವೇನು ಎಂಬುದರ ಕುರಿತು ತನಿಖೆ ಮುಂದುವರಿದಿದೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am