ಬ್ರೇಕಿಂಗ್ ನ್ಯೂಸ್
13-06-26 06:14 pm HK News Staffer ಕ್ರೈಂ
ಕಾರವಾರ, ಜೂನ್ 13: ಕಾಲೇಜು ಶುಲ್ಕ ಪಾವತಿಸಲು ತಂದೆ ನೀಡಿದ್ದ 10 ಸಾವಿರ ಹಣವನ್ನು ಪರಿಚಯಸ್ಥನೊಬ್ಬನಿಗೆ ಸಾಲವಾಗಿ ನೀಡಿ, ಬಳಿಕ ಆ ಹಣ ಮರಳಿ ಸಿಗದೇ ಮನನೊಂದ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಬೆಳಕೆ ಗ್ರಾಮದಲ್ಲಿ ನಡೆದಿದೆ.
ಭಟ್ಕಳದಲ್ಲಿ ಬಿಸಿಎ ವ್ಯಾಸಂಗ ಮಾಡುತ್ತಿದ್ದ ಗಾಯತ್ರಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಕಾಲೇಜಿನ ಶುಲ್ಕ ಪಾವತಿಸಲು ತಂದೆ ನಾಗರಾಜ ಲಚ್ಚಯ್ಯ ನಾಯ್ಕ ಮಗಳಿಗೆ ₹10 ಸಾವಿರ ನೀಡಿದ್ದರು. ಇದೇ ವೇಳೆ ಗ್ರಾಮದ ಪರಿಚಯಸ್ಥ ಸಂತೋಷ ಮಾಧೇದ ನಾಯ್ಕ ಎಂಬಾತ, ನಿಗದಿತ ಸಮಯದಲ್ಲಿ ಹಣವನ್ನು ಮರಳಿಸುವುದಾಗಿ ಭರವಸೆ ನೀಡಿ ಗಾಯತ್ರಿಯಿಂದ 10 ಸಾವಿರ ಸಾಲ ಪಡೆದಿದ್ದಾನೆ ಎನ್ನಲಾಗಿದೆ.
ಆದರೆ, ನಿಗದಿಪಡಿಸಿದ ಅವಧಿ ಮುಗಿದರೂ ಸಂತೋಷ ಹಣವನ್ನು ಹಿಂದಿರುಗಿಸಿಲ್ಲ. ಪರಿಣಾಮ ಗಾಯತ್ರಿಗೆ ಕಾಲೇಜಿನ ಶುಲ್ಕ ಪಾವತಿಸಲು ಸಾಧ್ಯವಾಗಿರಲಿಲ್ಲ. ಶುಲ್ಕ ಬಾಕಿ ಉಳಿದ ಕಾರಣ ಪರೀಕ್ಷೆಗೆ ಅಗತ್ಯವಾಗಿದ್ದ ಹಾಲ್ಟಿಕೆಟ್ ಕೂಡ ಆಕೆಗೆ ದೊರಕಿರಲಿಲ್ಲ ಎಂದು ತಿಳಿದುಬಂದಿದೆ.
ಪರೀಕ್ಷೆ ಬರೆಯುವ ಅವಕಾಶ ಕಳೆದುಕೊಂಡ ನೋವು ಹಾಗೂ ಹಣದ ಸಮಸ್ಯೆಯಿಂದ ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾದ ಗಾಯತ್ರಿ, ಕೊನೆಗೆ ಗ್ರಾಮದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ದುರ್ಘಟನೆ ಕುಟುಂಬಸ್ಥರು ಹಾಗೂ ಗ್ರಾಮಸ್ಥರನ್ನು ಆಘಾತಕ್ಕೀಡು ಮಾಡಿದೆ.
ಘಟನೆ ಸಂಬಂಧ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಿದ್ಯಾರ್ಥಿನಿಯ ಸಾವಿಗೆ ಕಾರಣವಾದ ಎಲ್ಲಾ ಆಯಾಮಗಳ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಗಾಯತ್ರಿಗೆ ನೀಡಬೇಕಿದ್ದ ಹಣವನ್ನು ಮರಳಿಸದೇ ಇದ್ದ ಆರೋಪದ ಬಗ್ಗೆಯೂ ವಿಚಾರಣೆ ನಡೆಸಲಾಗುತ್ತಿದೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am